ರೈತರ ಹಿತರಕ್ಷಣೆಗೆ ಕ್ರಮ: ಕುಮಾರ್‌

Team Udayavani, Oct 27, 2020, 5:23 PM IST

ರೈತರ ಹಿತರಕ್ಷಣೆಗೆ ಕ್ರಮ: ಕುಮಾರ್‌

ಸೊರಬ: ಮಾಜಿ ಮುಖ್ಯಮಂತ್ರಿ ಎಸ್‌. ಬಂಗಾರಪ್ಪನಾಡು ಕಂಡ ಧೀಮಂತ ರಾಜಕಾರಣಿಯಾಗಿದ್ದರು. ಅವರ ಅಧಿಕಾರಾವಧಿಯಲ್ಲಿ ಜಾರಿಗೆ ತಂದ ಯೋಜನೆಗಳು ಸದಾ ರೈತರು ಹಾಗೂ ಬಡವರ ಪರವಾಗಿದ್ದವು. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ. ಅನುದಾನ ನೀಡಿರುವುದಕ್ಕೆ ಧನ್ಯವಾದಗಳು ಎಂದು ಶಾಸಕ ಎಸ್‌. ಕುಮಾರ್‌ ಬಂಗಾರಪ್ಪ ಹೇಳಿದರು.

ಪಟ್ಟಣದ ಖಾಸಗಿ ಬಸ್‌ ನಿಲ್ದಾಣದ ಮುಂಭಾಗ ನಿರ್ಮಾಣಗೊಂಡ ನೂತನ ಉದ್ಯಾನವನ ಉದ್ಘಾಟನೆ ಮತ್ತು ಎಸ್‌. ಬಂಗಾರಪ್ಪ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈತರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ತಾಲೂಕಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಇದೀಗ ಸಾಂಕೇತಿಕವಾಗಿ ರೈತರಿಗೆ ಬಗರ್‌ಹುಕುಂ ಸಾಗುವಳಿ ಪತ್ರ ವಿತರಿಸಲಾಗುತ್ತಿದ್ದು, ರೈತರ ರಕ್ಷಣೆಯೇ ಮೂಲ ಉದ್ದೇಶ. ಕಲ್ಲೊಡ್ಡು ಯೋಜನೆಯಿಂದ ತಾಲೂಕಿನ ಚಿಟ್ಟೂರು ಭಾಗದ ಹಲವು ಗ್ರಾಮಗಳಿಗೆ ಅನುಕೂಲವಾಗಲಿದೆ. ದಂಡಾವತಿ ನೀರಾವರಿ ಯೋಜನೆಯ ಬಲದಂಡೆ ಮತ್ತು ಎಡದಂಡೆ ಯೋಜನೆ ಶೀಘ್ರದಲ್ಲಿಯೇ ಅನುಷ್ಠಾನಕ್ಕೆ ಬರಲಿದ್ದು, ಕ್ಷೇತ್ರವನ್ನು ಮುಂದಿನ ಒಂದು ವರ್ಷದಲ್ಲಿ ಶೇ. 80ರಷ್ಟು ನೀರಾವರಿ ಮಾಡುವ ಉದ್ದೇಶ ಹೊಂದಲಾಗಿದೆ ಎಂದರು.

ಹೊಸನಗರದ ಮಾಜಿ ಶಾಸಕ ಸ್ವಾಮಿರಾವ್‌ ಮಾತನಾಡಿ, ಎಸ್‌. ಬಂಗಾರಪ್ಪ ಜಾರಿಗೆ ತಂದ ಅಕ್ಷಯ, ಆರಾಧನ, ಗ್ರಾಮೀಣ ಕೃಪಾಂಕ, ರೈತರಿಗೆಉಚಿತ ವಿದ್ಯುತ್‌ ಸೇರಿದಂತೆ ರಾಜ್ಯದಲ್ಲಿ ಅನೇಕನೀರಾವರಿ ಯೋಜನೆಗಳಿಗೆ ಚಾಲನೆ ನೀಡಿದ್ದರು. ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರಗಳನ್ನು ವಿತರಿಸಿ ಹಿತಕಾದಿದ್ದರು ಎಂದರು. ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಉದ್ಯಾನವನ ಉದ್ಘಾಟನೆ ಮತ್ತು ಬಂಗಾರಪ್ಪ ಪುತ್ಥಳಿಯ ಅನಾವರಣವನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೆರವೇರಿಸಿದರು.

ಬಂಗಾರಪ್ಪ ಪುತ್ಥಳಿ ನಿರ್ಮಾಣ ಕಲಾವಿದ ಅಶೋಕ್‌ ಗುಡಿಗಾರ್‌ ಅವರನ್ನು ಸನ್ಮಾನಿಸಲಾಯಿತು. ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಉದ್ಯಾನವನಕ್ಕೆ ಭೇಟಿ ನೀಡಿ ಬಂಗಾರಪ್ಪ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು. ಪಪಂ ಅಧ್ಯಕ್ಷ ಎಂ.ಡಿ. ಉಮೇಶ್‌, ಉಪಾಧ್ಯಕ್ಷ ಮಧುರಾಯ್‌ ಜಿ. ಶೇಟ್‌, ಸದಸ್ಯರಾದ ಈರೇಶ್‌ ಮೇಸ್ತ್ರಿ, ನಟರಾಜ್‌ ಉಪ್ಪಿನ, ಪ್ರಭು ಮೇಸ್ತ್ರಿ, ಜಯಲಕ್ಷಿ¾, ಶ್ರೀರಂಜನಿ ಪ್ರವೀಣ್‌ ಕುಮಾರ್‌, ಪ್ರೇಮಾ ಟೋಕಪ್ಪ, ಸುಲ್ತಾನ ಬೇಗಂ, ಅಭಿಯಂತರೆ ಶೆಲ್ಜಾ ನಾಯ್ಕ,ತಾಪಂ ಸದಸ್ಯ ಪುರುಷೋತ್ತಮ, ಜಿಪಂ ಮಾಜಿಸದಸ್ಯರಾದ ಲಲಿತಾ ನಾರಾಯಣ್‌ ತಾಳಗುಪ್ಪ, ದೇವಕಿ ಪಾಣಿರಾಯಪ್ಪ, ಮುಖಂಡರಾದ ಭೋಗೇಶ್‌ ಶಿಗ್ಗಾ, ಟಿ.ಆರ್‌. ಸುರೇಶ್‌, ಶಿವಕುಮಾರ್‌ ಕಡಸೂರು, ಆರ್‌. ಮನವೇಲ್‌ ಸೇರಿದಂತೆ ಶಾಸಕರ ಕುಟುಂಬಸ್ಥರು ಮತ್ತು ಬಂಗಾರಪ್ಪ ಅಭಿಮಾನಿಗಳು ಇದ್ದರು. ದೇವೇಂದ್ರಪ್ಪ ಸ್ವಾಗತಿಸಿದರು. ಸೌಜನ್ಯ ಆನವಟ್ಟಿ ನಿರೂಪಿಸಿದರು.

ಟಾಪ್ ನ್ಯೂಸ್

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

7-thirthahalli

Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ

1-thirthahalli

ತೀರ್ಥಹಳ್ಳಿಯಲ್ಲಿ ವೈಭವದ ಜಾತ್ರೆ; ಬುರ್ಖಾ ಧರಿಸಿದ್ದ ಅನಾಮಧೇಯ ವ್ಯಕ್ತಿ ಪತ್ತೆ !

Anandapur: ತೋಟಕ್ಕೆ ಕಾಡಾನೆ ಹಾವಳಿ… ಅಧಿಕಾರಿಗಳ ನಿರ್ಲಕ್ಷಕ್ಕೆ ಗ್ರಾಮಸ್ಥರ ಆಕ್ರೋಶ

Anandapur: ತೋಟಕ್ಕೆ ಕಾಡಾನೆ ಹಾವಳಿ… ಅಧಿಕಾರಿಗಳ ನಿರ್ಲಕ್ಷಕ್ಕೆ ಗ್ರಾಮಸ್ಥರ ಆಕ್ರೋಶ

4-road-mishap

Anandapura: ಬಸ್‌ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Kinnigoli: ರಿಕ್ಷಾ ಪಲ್ಟಿ; ಚಾಲಕ ಗಂಭೀರ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

WhatsApp Image 2025-01-01 at 19.31.55

Udupi: ಅಸ್ವಸ್ಥಗೊಂಡ ರೈಲು ಪ್ರಯಾಣಿಕೆ ಸಾವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

6

Udupi: ಗಾಂಜಾ ಸೇವನೆ; ಓರ್ವ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.