ಎಲ್ಲ ಶಾಲೆಗಳಲ್ಲಿ ಸ್ಮಾರ್ಟ್‌ಕ್ಲಾಸ್ ಆರಂಭಕ್ಕೆ ಕ್ರಮ: ಈಶ್ವರಪ್ಪ
Team Udayavani, Dec 27, 2020, 6:57 PM IST
ಶಿವಮೊಗ್ಗ: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದ ಸ್ಮಾರ್ಟ್ ಕ್ಲಾಸ್ ಗಳನ್ನು ಆರಂಭಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಶಿವಮೊಗ್ಗ ನಗರದ ಪಾರ್ಕ್ ಬಡಾವಣೆಯ ಸರ್ಕಾರಿ ಆಂಗ್ಲ ಮತ್ತು ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಶನಿವಾರ ಭೇಟಿ ನೀಡಿ ಸ್ಮಾರ್ಟ್‌ತರಗತಿಗಳನ್ನು ವೀಕ್ಷಿಸಿದ ಅವರು ಬಳಿಕ ಮಾಧ್ಯಮಪ್ರತಿನಿ ಗಳೊಂದಿಗೆ ಮಾತನಾಡಿದರು.ಕಳೆದ ವರ್ಷ ಮಳೆಗಾಲದ ಅವಧಿ ಯಲ್ಲಿ ಹಾನಿಗೊಳಗಾಗಿದ್ದ ನಗರದ 87 ಶಾಲೆಗಳನ್ನುದುರಸ್ತಿಗೆ ಒಳಪಡಿಸಲಾಗಿದ್ದು, ಈಗಾಗಲೇ 70ಶಾಲೆಗಳ ದುರಸ್ತಿ ಕಾರ್ಯ ಪೂರ್ಣಗೊಂಡಿದೆ ಎಂದರು.
6.5 ಕೋಟಿ ರೂ.ವೆಚ್ಚದಲ್ಲಿ 45 ಶಾಲೆಗಳಿಗೆ 460 ಕಂಪ್ಯೂಟರ್, ಓವರ್‌ಹೆಡ್ ಪ್ರೊಜೆಕ್ಟರ್, ಲ್ಯಾಪ್‌ಟಾಪ್ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನ ಒಳಗೊಂಡ ಡಿಜಿಟಲ್ ಸ್ಮಾರ್ಟ್ ಕ್ಲಾಸ್‌ತರಗತಿಗಳನ್ನು ಸಜ್ಜುಗೊಳಿಸಲಾಗಿದೆ ಎಂದರು.ಸರ್ಕಾರಿ ಶಾಲೆಗಳು ಯಾವುದೇ ಖಾಸಗಿಶಾಲೆಗಳಿಗೆ ಕಡಿಮೆಯಿಲ್ಲದಂತೆ ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆಸಂಬಂಧಪಟ್ಟಂತೆ ಮುಂದಿನ ಬಜೆಟ್ ನಲ್ಲಿಅನುದಾನ ಕಾಯ್ದಿರಿಸಿ ರಾಜ್ಯದ ಎಲ್ಲಾ ಸರ್ಕಾರಿಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಗಳನ್ನು ಆರಂಭಿಸಿ ಉತ್ತಮ ವಾತಾವರಣ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ರಾಜ್ಯ ಶಿಕ್ಷಣಸಚಿವರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಈಗಾಗಲೇ ನಗರದ 87 ಶಾಲೆಗಳ ದುರಸ್ತಿಗೆ ಕೋಟಿ ರೂ.ಗಳನ್ನು ಖರ್ಚು ಮಾಡಿ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಮಾದರಿ ಶಾಲೆಗಳನ್ನು ನಿರ್ಮಿಸಲಾಗಿದೆ. ಈ ಶಾಲೆಗಳಲ್ಲಿವ್ಯಾಸಂಗ ಮಾಡುವ ಯಾವುದೇ ವಿದ್ಯಾರ್ಥಿಗಳುಕೀಳರಿಮೆ ಇಲ್ಲದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ನಗರದ ಸರ್ಕಾರಿ ಶಾಲೆಗಳಅಭಿವೃದ್ಧಿ ಕಾರ್ಯದಲ್ಲಿ ಸ್ಥಳೀಯ ಖಾಸಗಿ ಸಂಘಸಂಸ್ಥೆ ಪ್ರತಿನಿಧಿಗಳು ಸಹಾಯ ಹಸ್ತ ನೀಡಿದ್ದಾರೆಂದರು.
ಆಚಾರ್ಯತ್ರಯರ ಭವನ: ನಗರಕ್ಕೆ ಆಗಮಿಸುವ ಸಾಧು-ಸಂತರು ತಂಗಲು, ಉಪನ್ಯಾಸಗಳನ್ನು ಏರ್ಪಡಿಸಲು ಹಾಗೂ ಅವರ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅನುಕೂಲವಾಗುವಂತೆ ಆಚಾರ್ಯತ್ರಯರ ಭವನ ನಿರ್ಮಿಸಲಾಗಿದೆ ಎಂದು ಕೆ.ಎಸ್. ಈಶ್ವರಪ್ಪ ಹೇಳಿದರು. ಈ ಭವನಕ್ಕೆ ಅಗತ್ಯವಾಗಿರುವ ಇನ್ನಷ್ಟು ಸೌಲಭ್ಯ ಒದಗಿಸಿ, ಕಟ್ಟಡ ಲೋಕಾರ್ಪಣೆ ಮಾಡಲಾಗುವುದು. ಈ ಕಟ್ಟಡದಲ್ಲಿ ಆಚಾರ್ಯತ್ರಯರ ವಿಗ್ರಹಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಕಟ್ಟಡವನ್ನು 1.45 ಕೋಟಿ ರೂಗಳ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಕಟ್ಟಡದ ವ್ಯವಸ್ಥಿತ ನಿರ್ವಹಣೆಗೆ ಸಮುದಾಯದ ಮುಖಂಡರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರಳಿಧರ್, ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಸೇರಿದಂತೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಪದಾಧಿ ಕಾರಿಗಳು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.