ಕನಿಷ್ಟ 3 ಲಕ್ಷ ಗಿಡ ನೆಡುವ ಗುರಿ
Team Udayavani, Jun 14, 2020, 9:15 AM IST
ಶಿವಮೊಗ್ಗ: ಜಿಲ್ಲೆಯ ಎಲ್ಲಾ 271 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕೆರೆಗಳ ಸುತ್ತ ಕನಿಷ್ಟ 3ಲಕ್ಷ ಸಸಿಗಳನ್ನು ನೆಡುವ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಅವರು ಶನಿವಾರ ವೀರಣ್ಣನಬೆನವಳ್ಳಿ ಗ್ರಾಮದ ಕೆರೆ ದಂಡೆಯಲ್ಲಿ ಸಸಿಗಳನ್ನು ನೆಟ್ಟು ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಂತರ್ಜಲ ಚೇತನ ಯೋಜನೆಯಡಿ ಅಭಿವೃದ್ಧಿಪಡಿಸುವ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಇದೀಗ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೆರೆಗಳ ಸುತ್ತ 1ಸಾವಿರ ಸಸಿಗಳನ್ನು ನೆಡುವ ಕಾರ್ಯವನ್ನು ಆರಂಭಿಸಲಾಗಿದೆ. ಇದರಿಂದ ಕೆರೆಗಳಿಗೆ ಗಡಿಗಳನ್ನು ಗುರುತಿಸಿ ಒತ್ತುವರಿ ತಡೆಯಲು ಸಾಧ್ಯವಿದೆ ಎಂದು ಹೇಳಿದರು.
ನಗರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಸಂದರ್ಭದಲ್ಲಿ ತೆರವುಗೊಳಿಸಲಾಗುವ ಮರಗಳಿಗೆ ಪರ್ಯಾಯವಾಗಿ ಸಸಿಗಳನ್ನು ನೆಡಲು ಈಗಾಗಲೇ ಸೂಚಿಸಲಾಗಿದ್ದು, ಅದರಂತೆ ಸಸಿಗಳನ್ನು ನೆಡಲಾಗುತ್ತಿದೆ ಎಂದು ಹೇಳಿದರು. ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ದೇಸಾಯಿ ಮಾತನಾಡಿ, ಸಾಮಾಜಿಕ ಅರಣ್ಯ ವಿಭಾಗದ ವತಿಯಿಂದ 77ಹೆಕ್ಟೇರ್ ಬ್ಲಾಕ್ ನೆಡುತೋಪಲ್ಲಿ 84,700 ಗಿಡಗಳನ್ನು, 55 ಕಿಮಿ ರಸ್ತೆ ಬದಿ ನೆಡುತೋಪಲ್ಲಿ 15ಸಾವಿರ ಸಸಿಗಳನ್ನು ಮತ್ತು ಕೃಷಿ ಅರಣ್ಯ ಕಾರ್ಯಕ್ರಮದಡಿಯಲ್ಲಿ ರೈತರ ಜಮೀನಿನಲ್ಲಿ 466 ಹೆಕ್ಟೇರ್ ವಿಸ್ತೀರ್ಣದಲ್ಲಿ 3.69ಲಕ್ಷ ಸಸಿಗಳನ್ನು ನೆಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ ಮಾತನಾಡಿ, ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕನಿಷ್ಟ 1ಸಾವಿರ ಸಸಿಗಳನ್ನು ನೆಡಲು ಈಗಾಗಲೇ ಸೂಚನೆ ನೀಡಲಾಗಿದೆ. ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಅರಣ್ಯೀಕರಣ ಕಾರ್ಯಕ್ರಮವನ್ನು ದೊಡ್ಡ ಪ್ರಮಾಣದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ನೆಡಲಾಗಿರುವ ಸಸಿಗಳನ್ನು ಸರಿಯಾಗಿ ನಿರ್ವಹಿಸುವುದು ಸಹ ಗ್ರಾಮ ಪಂಚಾಯತ್ ಜವಾಬ್ದಾರಿಯಾಗಿದ್ದು, ಸಾರ್ವಜನಿಕರ ಸಹಕಾರ ಅತಿ ಅಗತ್ಯವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ
MUST WATCH
ಹೊಸ ಸೇರ್ಪಡೆ
Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್; ಪ್ರವಾಸಿಗರಿಗೆ ಹೊಸ ಆಕರ್ಷಣೆ
Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು
Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?
IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!
Mangaluru: ರಾಜ್ಯದ 2ನೇ ಐಟಿ ಕೇಂದ್ರವಾಗಿ ಅಭಿವೃದ್ಧಿಗೆ ಅವಕಾಶ ಇದ್ದರೂ ಆದ್ಯತೆ ನೀಡದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.