Sagara ಕಿರುಕುಳ ಆರೋಪ; ಸಾಬೀತಾದರೆ ರಾಜಕೀಯ ನಿವೃತ್ತಿ: ಗೋಪಾಲಕೃಷ್ಣ ಬೇಳೂರು
Team Udayavani, Aug 7, 2024, 5:40 PM IST
ಸಾಗರ: ಮೆಸ್ಕಾಂ ಸಹಾಯಕ ಇಂಜಿನಿಯರ್ ಶಾಂತಕುಮಾರ ಸ್ವಾಮಿ ಎಂಬುವವರು ಯಾರೆಂದೇ ನನಗೆ ಗೊತ್ತಿಲ್ಲ. ಅವರಿಗೆ ಕಿರುಕುಳ ನೀಡಿದ್ದೇನೆ ಎಂದು ನ್ಯಾಯಾಲಯದಲ್ಲಿ ನೀಡಿರುವ ಹೇಳಿಕೆ ಅಚ್ಚರಿ ಉಂಟು ಮಾಡಿದೆ. ಒಂದೊಮ್ಮೆ ನಾನು ಕಿರುಕುಳ ನೀಡಿದ್ದು ಸಾಬೀತಾದಲ್ಲಿ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದಾಗಿ ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.
ಇಲ್ಲಿನ ಮೆಸ್ಕಾಂ ಕಚೇರಿ ಆವರಣದಲ್ಲಿ ಬುಧವಾರ ಮೆಸ್ಕಾಂನ ನೂತನ ವಾಹನಗಳಿಗೆ ಚಾಲನೆ ನೀಡಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ನಾನು ವಿದೇಶ ಪ್ರವಾಸದಲ್ಲಿದ್ದಾಗ ಅವರನ್ನು ಗಾಂಜಾ ಪ್ರಕರಣದಲ್ಲಿ ಬಂಧಿಸಿದ್ದಾರೆ. ಘಟನೆಗೂ ನನಗೂ ಸಂಬಂಧವಿಲ್ಲ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ. ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಹೆಚ್ಚು ಮಾತನಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಸುಮ್ಮನೆ ದಾಖಲೆ ಇಲ್ಲದೆ ಆರೋಪ ಹೊರಿಸುವುದನ್ನು ಸಹಿಸುವುದಿಲ್ಲ. ನ್ಯಾಯಾಲಯದ ಮೇಲೆ ಗೌರವ ಇದೆ. ಮುಂದಿನ ದಿನಗಳಲ್ಲಿ ಸುಳ್ಳು ಆರೋಪ ಮಾಡಿರುವುದರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಲು ಚಿಂತನೆ ನಡೆಸಲಾಗಿದೆ. ಅಷ್ಟಕ್ಕೂ ನನ್ನ ಮೇಲೆ ಆರೋಪ ಮಾಡಿದ ಮೆಸ್ಕಾಂ ಅಭಿಯಂತರ ನನ್ನ ಕ್ಷೇತ್ರವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಪಕ್ಕದ ಸೊರಬ ಕ್ಷೇತ್ರದ ತಾಳಗುಪ್ಪದಲ್ಲಿ ಕೆಲಸ ಮಾಡುತ್ತಿದ್ದಾರೆ.
ಶಾಸಕರು ಎಂದು ಹೇಳಿದ್ದಾರೆ. ಯಾವ ಕ್ಷೇತ್ರದ ಶಾಸಕರು ಎಂದು ಉಲ್ಲೇಖಿಸಿಲ್ಲ. ಪ್ರಕರಣದ ಹಿಂದೆ ಯಾರದ್ದಾದರೂ ಪಿತೂರಿ ಇದ್ದರೂ ಇರಬಹುದು. ಶಾಂತಕುಮಾರ ವಿರುದ್ಧ ಸಾಕಷ್ಟು ದೂರುಗಳು ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದರು.
ವಿಪರೀತ ಮಳೆ ನಡುವೆಯೂ ಮೆಸ್ಕಾಂ ಲೈನ್‌ಮ್ಯಾನ್‌ಗಳು, ಅಧಿಕಾರಿ ಸಿಬ್ಬಂದಿಗಳು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಮಳೆಯ ನಡುವೆಯೂ ಹರಿದು ಬಿದ್ದ ತಂತಿಗಳು, ಮುರಿದು ಹೋಗಿದ್ದ ವಿದ್ಯುತ್ ಕಂಬಗಳನ್ನು ಹಾಕುವ ಮೂಲಕ ವಿದ್ಯುತ್ ಸಮಸ್ಯೆ ಉಂಟಾಗದಂತೆ ನೋಡಿಕೊಂಡಿದ್ದಾರೆ. ಆಗಸ್ಟ್ 15ರ ನಂತರ ಉತ್ತಮ ಕೆಲಸ ಮಾಡಿರುವ ಲೈನ್‌ಮ್ಯಾನ್‌ಗಳಿಗೆ ಸನ್ಮಾನ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.
ಮೆಸ್ಕಾ ಅಧಿಕಾರಿಗಳಾದ ವೆಂಕಟೇಶ್, ಚನ್ನಕೇಶವ್, ಇಬ್ರಾಹಿಂ, ಕಾಂಗ್ರೆಸ್ ಪ್ರಮುಖರಾದ ಗಣಪತಿ ಮಂಡಗಳಲೆ, ಸುರೇಶಬಾಬು, ದಿನೇಶ್ ಡಿ. ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.