Anandapura: ತಾವರೆ ಹಳ್ಳಿ ಗ್ರಾಮದಲ್ಲಿ ಭೂ ಕುಸಿತ, ಆತಂಕದಲ್ಲಿ ಗ್ರಾಮಸ್ಥರು
Team Udayavani, Jul 20, 2024, 5:17 PM IST
ಆನಂದಪುರ: ಕಳೆದ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಗೌರಿಕೆರೆ ಕೋಡಿಯಲ್ಲಿ ಹರಿಯುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿ ಭೂಕುಸಿತ ಉಂಟಾಗುತ್ತಿದೆ. ಗೌರಿ ಕೆರೆಯ ಕೋಡಿ ನೀರು ತಾವರೆಹಳ್ಳಿ ಗ್ರಾಮದ ಮೂಲಕ ಶರಾವತಿ ಸೇರಲಿದೆ.
ಕೊಡಿಯಲ್ಲಿ ಭಾರಿ ಪ್ರಮಾಣದ ನೀರು ಹರಿದು ಬರುತ್ತಿರುವ ಕಾರಣ ಭೂಕುಸಿತ ಉಂಟಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ. ಕೊಡಿಯ ಪಕ್ಕದಲ್ಲಿ ಗ್ರಾಮದ ರಸ್ತೆಯಿದ್ದು ಭೂ ಕುಸಿತ ಮುಂದುವರೆದರೆ. ರಸ್ತೆ ಕೂಡ ಕುಸಿದು ಹೋಗುವುದಲ್ಲದೆ, ಅಂಗನವಾಡಿ ಸೇರಿದಂತೆ 10 ಕುಟುಂಬಗಳು ಸಂಪರ್ಕ ಕಳೆದುಕೊಳ್ಳುವುದಲ್ಲದೆ ಅನಾಹುತ ಸಂಭವಸುವ ಆದ್ಯತೆ ಇದೆ. ವಿಷಯ ತಿಳಿದ ಗ್ರಾಮ ಪಂಚಾಯಿತಿ ಅಧ್ಯಕ್ಷರು ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು. ಭೂಕುಸಿತವಾಗುತ್ತಿರುವ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಉಪತಸಿಲ್ದಾರ್ ಅವರಿಗೆ ಗ್ರಾಮಸ್ಥರು ತ್ವರಿತವಾಗಿ ಶಾಶ್ವತ ಪರಿಹಾರ ನೀಡುವಂತೆ ಮನವಿ ನೀಡಿದರು. ಮನವಿಯನ್ನು ಸ್ವೀಕರಿಸಿ. ಈ ಭೂಕುಸಿತದ ವಿಚಾರವಾಗಿ ತಕ್ಷಣವೇ ಸರ್ಕಾರದ ಗಮನಕ್ಕೆ ತರುವುದಾಗಿ ಪ್ರಭಾರಿ ಉಪ ತಹಸಿಲ್ದಾರ್ ಕವಿರಾಜ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಹನ್ ಕುಮಾರ್ ತಿಳಿಸಿದರು. ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ. ಪಂಚಾಯತ್ ಉಪಾಧ್ಯಕ್ಷ ರೂಪಕಲ, ಮಾಜಿ ಅಧ್ಯಕ್ಷ ನೇತ್ರಾವತಿ ಮಂಜುನಾಥ್, ಸದಸ್ಯ ಮೋಹನ್ ಕುಮಾರ್ ಕಾಲೋನಿ, ಕಂದಾಯ ಇಲಾಖೆಯ ಗೋವಿಂದ್ ಮೂರ್ತಿ, ರವೀಂದ್ರ, ರಿತೀಶ್, ತುಕ್ಕೋಜಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.