ಸರ್ಕಾರದಿಂದ ಕನ್ನಡ ವಿರೋಧಿ ನೀತಿ

Team Udayavani, Dec 26, 2020, 9:15 PM IST

ಸರ್ಕಾರದಿಂದ ಕನ್ನಡ ವಿರೋಧಿ ನೀತಿ

ಶಿವಮೊಗ್ಗ: ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ರಾಜ್ಯ ಸರ್ಕಾರ ಅನುದಾನ ಸಂಪೂರ್ಣ ಕಡಿತಗೊಳಿಸಿ ಕನ್ನಡ ವಿರೋಧಿ  ನೀತಿ ಅನುಸರಿಸುತ್ತಿದೆ ಎಂದು ಮಾಜಿ ಶಾಸಕ ಹಾಗೂ ರಾಜ್ಯ ಜೆಡಿಎಸ್‌ ವಕ್ತಾರ ವೈ.ಎಸ್‌.ವಿ. ದತ್ತ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಅನುದಾನ ಕಡಿತಗೊಳಿಸದೆ ಕನ್ನಡ ವಿವಿಗೆ ಮಾತ್ರ ಅನುದಾನ ಕಡಿತಗೊಳಿಸಿರುವುದಕ್ಕೆ ವಿರೋಧವಿದೆ.ಆದರೆ ನಾನು ಸಂಸ್ಕೃತ ವಿರೋಧಿಯಲ್ಲ ಎಂದರು.

ಕನ್ನಡ ಭಾಷೆ, ಸಾಹಿತ್ಯ, ಪರಂಪರೆ ಕುರಿತು ಅಧ್ಯಯನ ನಡೆಸಲು ಹಂಪಿ ಕನ್ನಡ ವಿಶ್ವವಿದ್ಯಾಲಯ ಸ್ಥಾಪನೆ ಉದ್ದೇಶವಾಗಿದೆ. ಅನುದಾನ ಬಿಡುಗಡೆಗೆ ಹಣವಿಲ್ಲ ಎನ್ನುತ್ತಿರುವ ಸರ್ಕಾರ ಸಂಸ್ಕೃತ ವಿವಿಗೆ ಅನುದಾನ ಬಿಡುಗಡೆ ಮಾಡುತ್ತಿದೆ ಎಂದು ದೂರಿದ ಅವರು, ಹಂಪಿ ಕನ್ನಡ ವಿವಿಗೆ ಶೇ.80ರಷ್ಟು ಅನುದಾನ ಕಡಿತಗೊಳಿಸಿರುವುದರಿಂದ ವಿವಿಯ ಎಲ್ಲಾ ಸಂಶೋಧನಾ ಚಟುವಟಿಕೆ ಸ್ಥಗಿತಗೊಂಡಿದೆ ಎಂದರು.

ರಾಜ್ಯ ಸರ್ಕಾರ ಅನುಸರಿಸುತ್ತಿರುವ ಧೋರಣೆಯಿಂದಾಗಿ ಕನ್ನಡದ ಸ್ಥಾನಮಾನಕ್ಕೆ ಧಕ್ಕೆ ಉಂಟಾಗುತ್ತಿದೆ. 1980ರಲ್ಲಿ ನಡೆದ ಗೋಕಾಕ್‌ ಚಳುವಳಿಯಂತೆ ಇಂದು ಜನಾಂದೋಲನ ಅನಿವಾರ್ಯವಾಗಿದೆ. ಅನುದಾನ ಕಡಿತ ಹಾಗೂ ಸರ್ಕಾರದ ಕನ್ನಡ ವಿರೋಧಿ ನೀತಿ ಖಂಡಿಸಿ ನಾರಾಯಣ ಗೌಡ ಬಣದ ಕನ್ನಡ ರಕ್ಷಣಾ ವೇದಿಕೆ ಅಭಿಯಾನ ಹಮ್ಮಿಕೊಂಡಿದ್ದು ಇದಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದರು.

ಇದನ್ನೂ ಓದಿ:ಕಾಫಿನಾಡಿಗೆ ಹೆಚ್ಚಿನ ಅನುದಾನ: ಸೋಮಣ್ಣ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ, ಜಿಪಂ, ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯಾದ್ಯಂತ ಜಿಲ್ಲಾ ಮಟ್ಟದ ಯುವ ಜನೋತ್ಸವ ಸ್ಪರ್ಧೆಗಳು ನಡೆಯುತ್ತಿದ್ದು, ಈ ಸ್ಪರ್ಧೆಗಳಲ್ಲಿ ಆಶುಭಾಷಣ, ಏಕಾಂಕ ನಾಟಕ, ಬೀದಿ ನಾಟಕ, ಸಾಮಾಜಿಕ ಕಳಕಳಿ ವಿಷಯ ಆಧಾರಿತ ಸ್ಪರ್ಧೆಯು ಇಂಗ್ಲಿಷ್‌ ಅಥವಾ ಹಿಂದಿನಲ್ಲಿ ಮಾತ್ರ ನಡೆಯಲು ಅವಕಾಶವಿದೆ.

ಇದರಿಂದಾಗಿ ಕನ್ನಡ ಭಾಷೆಗೆ ಮಹತ್ವ ನೀಡದೆ ಇಂಗ್ಲಿಷ್‌ ಮತ್ತು ಹಿಂದಿಯಲ್ಲಿಯೇ ನೀಡಲಾಗಿದೆ. ಈ ಬಗ್ಗೆ ಅಧಿ ಕಾರಿಗಳನ್ನು ಕೇಳಿದರೆ ಇದು ರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಸ್ಪರ್ಧೆಯಾಗಿರುವುದರಿಂದ ಈ ಭಾಷೆಗಳಲ್ಲಿ ಮಾತ್ರ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಉತ್ತರ ನೀಡುತ್ತಾರೆ. ಇದಕ್ಕೆ ತಮ್ಮ ವಿರೋಧ ಹಾಗೂ ಧಿಕ್ಕಾರವಿದೆ ಎಂದರು. ಗೋಷ್ಠಿಯಲ್ಲಿ ರಾಜ್ಯ ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್‌, ಜಿಲ್ಲಾ ಘಟಕದ ವಕ್ತಾರ ತ್ಯಾಗರಾಜ್‌ ಇದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

9

Shivamogga: ಅಯೋಧ್ಯೆ ರೀತಿ ವ‌ಕ್ಫ್ ಹಗರಣಕ್ಕೂ ನ್ಯಾಯ ಸಿಕ್ಕೇ ಸಿಗುತ್ತದೆ; ಈಶ್ವರಪ್ಪ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.