ಅಡಕೆ ಆಮದು ಮಾಡಿಕೊಳ್ಳುವ ಕೇಂದ್ರದ ನಿರ್ಧಾರ ದೇಶಿ ಅಡಕೆ ಬೆಳೆಗಾರರ ಭವಿಷ್ಯಕ್ಕೆ ಮಾರಕ


Team Udayavani, Oct 1, 2022, 7:14 PM IST

ಅಡಕೆ ಆಮದು ಮಾಡಿಕೊಳ್ಳುವ ಕೇಂದ್ರದ ನಿರ್ಧಾರ ದೇಶಿ ಅಡಕೆ ಬೆಳೆಗಾರರ ಭವಿಷ್ಯಕ್ಕೆ ಮಾರಕ

ತೀರ್ಥಹಳ್ಳಿ: ವಿದೇಶದಿಂದ ಹಸಿ ಅಡಕೆಯನ್ನು ಆಮದು ಮಾಡಿಕೊಳ್ಳುವ ಕೇಂದ್ರ ಸರ್ಕಾರದ ನಿರ್ಧಾರ ದೇಶಿ ಅಡಕೆ ಬೆಳೆಗಾರರ ಭವಿಷ್ಯಕ್ಕೆ ಮಾರಕವಾಗಿದ್ದು ಈ ಕೂಡಲೇ ಅಡಕೆ ಆಮದನ್ನು ಸ್ಥಗಿತಗೊಳಿಸಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ಮಾಜಿ ಸದಸ್ಯರೂ ಆಗಿರುವ ಕಾಂಗ್ರೆಸ್ ಮುಖಂಡ ಕಡ್ತೂರು ದಿನೇಶ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಡಕೆ ಕೊಯ್ಲು ಆರಂಭವಾಗುತ್ತಿರುವ ಈ ಸಂಧರ್ಭದಲ್ಲಿ ಕೇಂದ್ರ ಸರ್ಕಾರ 17 ಸಾವಿರ ಟನ್ ಹಸಿ ಅಡಕೆಯನ್ನು ಭೂತಾನ್ ದೇಶದಿಂದ ಆಮದು ಮಾಡಿಕೊಳ್ಳುತ್ತಿರುವ ಕ್ರಮ ರೈತ ವಿರೋಧಿ ಯಾಗಿದ್ದು ಖಂಡನೀಯವಾಗಿದೆ.

ಸರ್ಕಾರದ ಈ ಕ್ರಮದಿಂದ ಅಡಕೆ ಬೆಳೆಗಾರ ಸಮುದಾಯವೇ ದಿಗ್ಬ್ರಮೆಗೊಳ್ಳುವಂತಾಗಿದೆ.
ಕ್ಯಾಮ್ಕೊ ಮ್ಯಾಮ್ಕೋಸ್ ಸೇರಿದಂತೆ ಎಲ್ಲಾ ಅಡಕೆ ಬೆಳೆಗೆ ಸಂಬಂಧಿಸಿದ ಸಂಘಟನೆಗಳ ಮುಖ್ಯಸ್ಥರು ರಾಜಕೀಯವನ್ನು ತೊರೆದು ರೈತರ ನೆರವಿಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಮಾರುಕಟ್ಟೆಯಲ್ಲಿ ಒಂದೇ ದಿನ ಅಡಕೆ ಧಾರಣೆ 10 ಸಾವಿರ ರೂ ಕಡಿಮೆಯಾಗಿದೆ. ಇಂತಹ ಸಂಕಷ್ಟದ ಸಂಧರ್ಭದಲ್ಲಿ ಸ್ವತಃ ಅಡಕೆ ಬೆಳೆಗಾರರೇ ಆಗಿರುವ ರಾಜ್ಯ ಅಡಕೆ ಪ್ರಕೋಷ್ಠದ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ ಎಂದೂ ಹೇಳಿರುವುದು ಆಶ್ಚರ್ಯದ ಸಂಗತಿಯಾಗಿದೆ. ಆತಂಕದ ಈ ಸಂದರ್ಭದಲ್ಲಿ ಅಡಕೆ ಬೆಳೆಗಾರರು ಸಂಘಟಿತರಾಗಿ ಕೇಂದ್ರ ಸರ್ಕಾರದ ಈ ನಿಲುವನ್ನು ವಿರೋಧಿಸಬೇಕಿದೆ ಎಂದೂ ಹೇಳಿದರು.

ಪ್ರಸ್ಥುತ ಅಗತ್ಯಕ್ಕಿಂತ ಹೆಚ್ಚು ಅಡಕೆ ದೇಶದಲ್ಲೇ ಬೆಳೆಯ ಈ ಕಾಲಘಟ್ಟದಲ್ಲಿ ಅಡಕೆಯನ್ನು ಆಮದು ಮಾಡಿಕೊಳ್ಳುವ ಸರ್ಕಾರದ ನಿರ್ಧಾರ ಖಂಡನೀಯವಾಗಿದೆ. ಇದರಿಂದ ಕಳ್ಳ ಮಾರ್ಗದಲ್ಲಿ ಅಡಕೆ ಬರುವುದಕ್ಕೂ ಮುಕ್ತ ಅವಕಾಶ ದೊರೆಯುತ್ತದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಅಡಕೆ ಬೆಳೆಯುವ ಪ್ರದೇಶದಿಂದ ಆಯ್ಕೆಯಾಗಿರುವ ಏಳೆಂಟು ಮಂದಿ ಸಂಸದರಿದ್ದಾರೆ. ಇವರೆಲ್ಲರೂ ಸೇರಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು ಪ್ರಶ್ನಿಸಬೇಕು ಎಂದು ಒತ್ತಾಯಿಸಿದರು. ರೈತರು ಎಲೆ ಚುಕ್ಕಿ ರೋಗದ ಬಗ್ಗೆ ನಿರ್ಲಕ್ಷ ಮಾಡದೇ ಕೂಡಲೇ ಔಷಧವನ್ನು ಸಿಂಪಡಿಸಬೇಕು. ಮತ್ತು ಇದಕ್ಕೆ ತಗಲುವ ವೆಚ್ಚವನ್ನು ಸರ್ಕಾರದಿಂದ ಪಡೆಯುವ ಸಲುವಾಗಿ ಕ್ರಮಬದ್ದವಾಗಿ ಬಿಲ್‌ಗಳನ್ನು ಇಟ್ಟುಕೊಳ್ಳುವಂತೆಯೂ ತಿಳಿಸಿದರು.

ರಾಹುಲ್ ಗಾಂಧಿಯವರ ಭಾರತ್ ಜೋಡೊ ಯಾತ್ರೆಯ ಫಲವಾಗಿ ಜನತೆಯ ಒಲವು ಕಾಂಗ್ರೆಸ್ ಕಡೆಗೆ ವಾಲುತ್ತಿದೆ. ಮಹತ್ವದ ಈ ಸಂದರ್ಭದಲ್ಲಿ ಪಕ್ಷದ ನಿಷ್ಠಾವಂತ ಮತ್ತು ಹಿಂದುಳಿದ ವರ್ಗದ ನಾಯಕರಾದ ಹಿರಿಯ ಕಾಂಗ್ರೆಸ್ಸಿಗ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಉನ್ನತ ಹುದ್ದೆಗೆ ಆಯ್ಕೆಯಾಗುವುದು ಬಹುತೇಕ ಖಚಿವಾಗಿದ್ದು ಪಕ್ಷಕ್ಕೆ ಬಲ ಬಂದಂತಾಗಿದೆ ಎಂದೂ ಹೇಳಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯರಾದ ಹಾರೇಗೋಳಿಗೆ ಪದ್ಮನಾಭ್ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-yadu

Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್‌

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

1-yadu

Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್‌

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.