Politics: ತೀರ್ಥಹಳ್ಳಿಗೆ ಆರಗ ಜ್ಞಾನೇಂದ್ರ ಶಾಸಕ ಆಗಿರುವುದು ದುರಂತ!?

ಮುಂದೆ ಒಂದು ದಿನ ಮೋದಿ ಹಿಟ್ಲರ್ ರೀತಿ ಆಗಬಹುದು: ಕಿಮ್ಮನೆ ರತ್ನಾಕರ್

Team Udayavani, Feb 20, 2024, 2:53 PM IST

11-theerthahalli

ತೀರ್ಥಹಳ್ಳಿ : ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದು ಗ್ಯಾರೆಂಟಿ ಯಶಸ್ವಿಯಾಗಿದೆ. ಗ್ಯಾರೆಂಟಿ ಯೋಜನೆಯ ಫಲನುಭವಿಗಳಿಗಾಗಿ ವಿಶೇಷ ಕಾರ್ಯಕ್ರಮ ನಡೆಸಲಿದ್ದೇವೆ. ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಫೆ. 24 ರಂದು ಕಾರ್ಯಕ್ರಮ ನಡೆಯಲಿದೆ. ಯಾರಿಗೆ ಗ್ಯಾರಂಟಿ ಯೋಜನೆ ಸರಿಯಾಗಿ ಸಿಕ್ಕಿಲ್ಲ ಅವರಿಗೂ ಅಲ್ಲಿ ಸರಿಪಡಿಸುವ ಅವಕಾಶ ಇರಲಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು

ಮಂಗಳವಾರ ಪಟ್ಟಣದ ಗಾಂಧಿ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಬಿಜೆಪಿ ಪಕ್ಷದವರು ಸುಳ್ಳು ಕಾರ್ಡ್ ಕೊಟ್ಟಿದ್ದೀವಿ ಎಂದು ಕೇಸ್ ಹಾಕಿದ್ದರು. ಅಷ್ಟೇ ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಕೂಡ ಗ್ಯಾರಂಟಿ ಬಗ್ಗೆ ಅಪಹಾಸ್ಯ ಮಾಡಿದ್ದರು. ಆದರೆ ಈಗ ಮೋದಿ ಕೂಡ ಗ್ಯಾರಂಟಿ ನೀಡಲು ಮುಂದಾಗಿದ್ದಾರೆ. ರಾಜಸ್ತಾನ್ ಸೇರಿ ಇತರ ಕಡೆಯಲ್ಲಿ ಬಿಜೆಪಿ ಕೂಡ ಗ್ಯಾರೆಂಟಿ ಭರವಸೆ ನೀಡಿತ್ತು ಎಂದರು.

ಕರ್ನಾಟಕ ತಂದಿರುವ ಗ್ಯಾರಂಟಿ ಯೋಜನೆ ಬಡ ವರ್ಗದವರಿಗೆ ಅನುಕೂಲ ಆಗುತ್ತಿದೆ. ಪ್ರತಿ ಕುಟುಂಬಕ್ಕೆ ಯುವ ನಿಧಿ ಯೋಜನೆ ಸೇರಿದರೆ 8 ಸಾವಿರ ರೂ. ಹಣ ತಲುಪುತ್ತದೆ. ಇಡೀ ಪ್ರಪಂಚದಲ್ಲಿ ಕರ್ನಾಟಕದ ಗ್ಯಾರಂಟಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಇದೊಂದು ಯಶಸ್ವಿ ಕಾರ್ಯಕ್ರಮ ಆಗಿದೆ. ಯಾವುದೇ ಗ್ರಾಮಪಂಚಾಯಿತಿಯಲ್ಲೂ ಅರ್ಹತೆ ಇದ್ದು ಗ್ಯಾರಂಟಿ ಸಿಗದವರು ಶಿವಮೊಗ್ಗಕ್ಕೆ ಬಂದು ಸರಿಪಡಿಸಿಕೊಳ್ಳಬಹುದು ಎಂದು ತಿಳಿಸಿದರು.

ಮುಂದೆ ಒಂದು ದಿನ ಮೋದಿ ಹಿಟ್ಲರ್ ರೀತಿ ಆಗಬಹುದು. ಚಂಡಿಗಡ ರಾಜ್ಯದ 8 ಮೇಯರ್ ಮತಗಳನ್ನು ಅನರ್ಹ ಗೊಳಿಸುತ್ತಿದ್ದಾರೆ ಅಂದರೆ ಏನರ್ಥ? ಈ ವಿಷಯದಲ್ಲಿ ಮೋದಿ ಸುಪ್ರೀಂ ಕೋರ್ಟ್ ಜಡ್ಜ್ ಮೆಂಟ್ ಬಂದ ನಂತರ ರಾಜೀನಾಮೆ ನೀಡುವುದು ಸೂಕ್ತ. ಪ್ರಜಾಪ್ರಭುತ್ವದ ಕೊನೆ ಚುನಾವಣೆ ಆಗಬಹುದು ಎಂದು ಹೇಳಿದರು.

ಇವಿಎಂ ಮೆಷಿನ್ ನಿಂದ 500 ಸೀಟ್ ಕೂಡ ಇವರು ಗೆಲ್ಲುತ್ತಾರೆ. ಚುನಾವಣೆ ಆಯೋಗ, ಸಿಬಿಐ ಎಲ್ಲವನ್ನು ಕೂಡ ಅವರ ಕಡೆ ಮಾಡಿಕೊಂಡಿದ್ದಾರೆ. ನ್ಯಾಯಾಂಗದ ಒಳಗೂ ಹಸ್ತಕ್ಷೇಪ ಮಾಡುತ್ತಿದ್ದಾರೆ. ಮತ ಚೀಟಿಯಲ್ಲಿ ಚುನಾವಣೆ ನಡೆದರೆ ದೇಶದಲ್ಲಿ ಕಾಂಗ್ರೆಸ್ ಗೆದ್ದು ಪ್ರಧಾನಿ ಹುದ್ದೆ ಹಿಡಿಯುತ್ತೇವೆ ಆದರೆ ಇವಿಎಂ ಆದ್ರೆ ಮೋದಿ ಗೆಲ್ಲುತ್ತಾರೆ. ಚಂದ್ರಲೋಕಕ್ಕೆ ಕಳುಹಿಸಿರುವ ಲ್ಯಾನ್ಡರ್ ಬದಲಾವಣೆ ಮಾಡಬಹುದು ಆದರೆ ಇವಿಎಂ ಬದಲಾವಣೆ ಮಾಡಲು ಆಗುವುದಿಲ್ಲವೇ ಎಂದು ಪ್ರಶ್ನೆ ಮಾಡಿದರು.

ಹುಟ್ಟಿನಿಂದ ನಾವು ನಮ್ಮ ಸಂಪ್ರದಾಯವನ್ನು ನಡೆದುಕೊಂಡು ಬಂದಿದ್ದೇವೆ. ನಮ್ಮ ನಂಬಿಕೆ ಬಗ್ಗೆ ಮಾತನಾಡುವುದಕ್ಕೆ ಆರಗ ಜ್ಞಾನೇಂದ್ರ ಹಾಗೂ ಸಂದೇಶ್ ಜವಳಿ ಯಾರು? ಕೋದಂಡರಾಮ ದೇವಸ್ಥಾನ ನಾವು ಅಭಿವೃದ್ಧಿ ಮಾಡಿದರೆ ಇವರಿಗೇನು ಸಮಸ್ಯೆ? ಈಗಾಗಲೇ ಮುಜರಾಯಿ ಇಲಾಖೆ ಸಚಿವರು 50 ಲಕ್ಷ ಹಣ ನೀಡಿದ್ದಾರೆ. ಈಗಾಗಲೇ ಹಲವು ದೇವಸ್ಥಾನಗಳಿಗೆ ನಾನು ಖಾಸಗಿಯಾಗಿ ಹಣ ನೀಡಿದ್ದೇನೆ ಹಾಗಾಗಿ ಎಲ್ಲಾ ದೇವಸ್ಥಾನಕ್ಕೆ ಹೋಗಿ ಕೋದಂಡ ರಾಮ ದೇವಸ್ಥಾನಕ್ಕೆ ಬಂದು ವಿಶೇಷ ಪೂಜೆ ನಡೆಸಲಿದ್ದೇವೆ. ಆರಗ ಎಷ್ಟು ಹಣ ದೇವಸ್ಥಾನಗಳಿಗೆ ನೀಡಿದ್ದಾರೆ ಎಂದು ತಿಳಿಸಲಿ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯನವರ ಬಜೆಟ್ ಅದ್ಭುತವಾಗಿದೆ. ಜ್ಞಾನೇಂದ್ರ ಹಾಗೂ ಅವರ ಪಕ್ಷ ಬಡವರ ಪರ ನಿಂತಿದ್ದು ಯಾವಾಗ? ತೀರ್ಥಹಳ್ಳಿಗೆ ಅವರು ಶಾಸಕ ಆಗಿರುವುದು ದುರಂತ, ಶಾಸನ ಸಭೆ ನಡೆಯುತ್ತಿದ್ದರೆ ಇಲ್ಲಿ ವೈಕುಂಠ ಸಮಾರಾಧನೆಗೆ ಬರುತ್ತಾರೆ. ಇವರನ್ನು ಶಾಸಕರಾಗಿ ಆಯ್ಕೆ ಮಾಡಿದ್ದೂ ಯಾವ ಕಾರಣಕ್ಕೆ?  ಜನರ ಸಮಸ್ಯೆ ಕೇಳಬೇಕಾದ ಶಾಸಕರು ಇಲ್ಲಿ ವೈಕುಂಠ ಸಮಾರಾಧನೆಗೆ ಬರುವುದು ಯಾವ ನ್ಯಾಯ? ಎಂದು ಆರಗ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಸಂದರ್ಭದಲ್ಲಿ ಕೆಸ್ತೂರು ಮಂಜುನಾಥ್, ಮೂಡುಬಾ ರಾಘವೇಂದ್ರ, ಗೀತಾ ರಮೇಶ್, ರಹಮತುಲ್ಲ ಅಸಾದಿ, ಮಂಜುಳಾ ನಾಗೇಂದ್ರ, ಅಮರನಾಥ್ ಶೆಟ್ಟಿ, ಆದರ್ಶ ಹುಂಚದಕಟ್ಟೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.