ಅಕ್ರಮ ಗೋ ಸಾಗಾಣಿಕೆ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ
Team Udayavani, Nov 30, 2021, 6:39 PM IST
ತೀರ್ಥಹಳ್ಳಿ: ರಾಜ್ಯದಲ್ಲಿ ಅಕ್ರಮ ಗೋ ಸಾಗಾಟ ವಿರುದ್ಧ, ಕಠಿಣ ಕಾನೂನು ಜಾರಿಯಾಗಿದ್ದು, ಅದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ನಿರ್ದೇಶನ ನೀಡಲಾಗಿದೆ, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ತೀರ್ಥಹಳ್ಳಿ ತಾಲೂಕು, ಮೇಳಿಗೆ ಗ್ರಾಮ ದಿಂದ, ಇಂದು, ಅಕ್ರಮವಾಗಿ ದನಗಳನ್ನು ಸಾಗಣೆ ತಡೆಯಲು, ಯತ್ನಿಸಿದ ಇಬ್ಬರು ಯುವಕರನ್ನು, ಪಶು ಕಳ್ಳರು, ತೀವ್ರವಾಗಿ ಗಾಯಗೊಳಿಸಿ, ಪರಾರಿಯಾದ ಘಟನೆ ಕುರಿತು ಮಾತನಾಡಿದ ಸಚಿವರು, ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಜರುಗಿಸಲು, ನಿರ್ದೇಶಿಸಲಾಗಿದೆ, ಎಂದು ತಿಳಿಸಿದ್ದಾರೆ.
ದನಗಳ್ಳರನ್ನು ತಡೆಯಲು ಯತ್ನಿಸಿದ ಇಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ವಿಷಯವನ್ನು ತಿಳಿದ, ಸಚಿವರು, “ಘಟನೆಯಲ್ಲಿ ಗಾಯಗೊಂಡ ಇಬ್ಬರು ಯುವಕರ ಚಿಕಿತ್ಸೆಗೆ ಮಣಿಪಾಲದಲ್ಲಿ ವ್ಯವಸ್ಥೆ ಮಾಡಲಾಗಿದೆ, ಮತ್ತು ಆರೋಪಿಗಳ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.
ಮೇಳಿಗೆ ಗ್ರಾಮದಿಂದ, ಪಿಕ್ ಅಪ್ ವಾಹನದಲ್ಲಿ, ದನಗಳನ್ನು ಕೊಂಡೊಯುತ್ತಿದ್ದ ಆರೋಪಿಗಳನ್ನು ತಡೆಯಲು ಯತ್ನಿಸಿದ, ಕಿರಣ್ (23) ಮತ್ತು ಚರಣ್ (24) ಎಂಬ ಯುವಕರ ಮೇಲೆ ವಾಹನವನ್ನು ಚಲಾಯಿಸಲು ಯತ್ನಿಸಿದ, ದುಷ್ಕರ್ಮಿಗಳು, ಘಟನೆಯ ನಂತರ ಪರಾರಿಯಾಗಿದ್ದರು.
ಗಾಯಗೊಂಡ, ಇಬ್ಬರೂ ಯುವಕರನ್ನು, ತಕ್ಷಣ ತೀರ್ಥಹಳ್ಳಿ ಜೆ ಸಿ ಆಸ್ಪತ್ರೆಗೆ ಸೇರಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸಚಿವರು, ಘಟನೆಯ ವಿಷಯ ತಿಳಿದು, ಆಸ್ಪತ್ರೆಗೆ ಧಾವಿಸಿ, ಯುವಕರನ್ನು ಸಂತೈಸಿದ್ದಲ್ಲದೆ, ಸೂಕ್ತ ಚಿಕಿತ್ಸೆ ದೊರಕಿಸಲೂ ನೆರವಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.