ಕಲಾವಿದರಿಗೆ 5 ಸಾವಿರ ರೂ. ಧನಸಹಾಯಕ್ಕೆ ಮನವಿ


Team Udayavani, Apr 28, 2020, 7:06 PM IST

ಕಲಾವಿದರಿಗೆ 5 ಸಾವಿರ ರೂ. ಧನಸಹಾಯಕ್ಕೆ ಮನವಿ

ಸಾಗರ: ಸಂಕಷ್ಟದಲ್ಲಿರುವ ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ನವೆಂಬರ್‌ ತಿಂಗಳವರೆಗೂ ಕುಟುಂಬ ಜೀವನ ನಿರ್ವಹಣೆಗಾಗಿ ರಾಜ್ಯ ಸರ್ಕಾರದಿಂದ ತಿಂಗಳಿಗೆ ಕನಿಷ್ಟ 5 ಸಾವಿರ ರೂ. ಧನಸಹಾಯ ಒದಗಿಸುವಂತೆ ಸೋಮವಾರ ಕಲಾವಿದರು ಮತ್ತು ತಂತ್ರಜ್ಞರು ಉಪ ವಿಭಾಗಾಧಿಕಾರಿಗಳ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕೋವಿಡ್ 19  ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಲಾವಿದರು ಮತ್ತು ತಂತ್ರಜ್ಞರ ಸ್ಥಿತಿ ಅತ್ಯಂತ ಶೋಚನೀಯವಾಗಿದೆ. ಕಲಾವಿದರು ನಾಟಕ, ಕಿರುಚಿತ್ರ, ಧಾರಾವಾಹಿ ಇನ್ನಿತರಗಳಲ್ಲಿ ಅಭಿನಯಿಸಿ, ಆರ್ಥಿಕ ಸಂಕಷ್ಟ ನಿವಾರಿಸಿಕೊಳ್ಳುವ ಕೆಲಸ ಮಾಡುತ್ತಿದ್ದರು. ಇನ್ನು ಕೆಲವು ಕಲಾವಿದರು ರಂಗಶಿಬಿರ, ನಾಟಕ ನಿರ್ದೇಶನ ಮೂಲಕ ಕ್ರಿಯಾಶೀಲರಾಗಿರುತ್ತಿದ್ದರು. ತಂತ್ರಜ್ಞರು ನಾಟಕ, ಧಾರಾವಾಹಿ, ಕಿರುಚಿತ್ರ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ತಮ್ಮದೇ ರೀತಿಯಲ್ಲಿ ಬೆಳಕಿನ ವಿನ್ಯಾಸ, ಟ್ಯಾಬ್ಲೋ, ವೇದಿಕೆ ಸಜ್ಜುಗೊಳಿಸುವ ಕೆಲಸ ಮಾಡುವ ಮೂಲಕ ಆರ್ಥಿಕವಾಗಿ ಸ್ವಲ್ಪ ಹಣವನ್ನುಗಳಿಸುತ್ತಿದ್ದರು. ಆದರೆ ಕೊರೊನಾ ಲಾಕ್‌ಡೌನ್‌ ನಿಂದ ಅವೆಲ್ಲ ನಿಂತು ಹೋಗಿದ್ದು ಕಲಾವಿದರು ಮತ್ತು ತಂತ್ರಜ್ಞರ ಬದುಕು ಬೀದಿಗೆ ಬಿದ್ದಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಗಮನ ಹರಿಸಿರುವ ಯಡಿಯೂರಪ್ಪ ನೇತƒತ್ವದ ಸಭೆಯಲ್ಲಿ ಕಲಾವಿದರಿಗೆ 2 ಸಾವಿರ ರೂ. ಸಹಾಯಧನ ನೀಡುವ ಪ್ರಸ್ತಾಪ ಮಾಡಿದ್ದಾಗಿ ತಿಳಿದು ಬಂದಿದೆ. ಆದರೆ ಒಂದು ಬಾರಿ 2 ಸಾವಿರ ರೂ. ಧನಸಹಾಯ ಮಾಡುವುದರಿಂದ ಕಲಾವಿದರು, ತಂತ್ರಜ್ಞರ ಬದುಕು ಹಸನಾಗುವುದಿಲ್ಲ. 2 ಸಾವಿರ ರೂ. ಆರ್ಥಿಕ ಸಹಕಾರ ಯಾವುದೇ ಉಪಯೋಗಕ್ಕೆ ಬರುವುದಿಲ್ಲ. ಈ ಹಿನ್ನೆಲೆಯಲ್ಲಿ ಮುಂದಿನ ನವೆಂಬರ್‌ವರೆಗಾದರೂ ಈಗಾಗಲೆ ಅರ್ಜಿ ಸಲ್ಲಿಸಿರುವ ಕಲಾವಿದರಿಗೆ ಕುಟುಂಬದ ಜೀವನ ನಿರ್ವಹಣೆಗಾಗಿ ಪ್ರತಿತಿಂಗಳು 5 ಸಾವಿರ ರೂ. ಆರ್ಥಿಕ ಸಹಕಾರ ನೀಡುವಂತೆ ಒತ್ತಾಯಿಸಲಾಗಿದೆ.

ಉಮಾಮಹೇಶ್ವರ ಹೆಗಡೆ, ಪುರುಷೋತ್ತಮ ತಲವಾಟ, ಎಚ್‌.ಬಿ. ರಾಘವೇಂದ್ರ, ಸಂತೋಷ ಶೇಟ್‌, ಗುರುಮೂರ್ತಿ ತಲವಾಟ, ಸೌಭಾಗ್ಯಮ್ಮ, ಶೋಭಾ ದೀಕ್ಷಿತ್‌, ಸಿ.ಟಿ. ಬ್ರಹ್ಮಾಚಾರ್‌, ಯೇಸು ಪ್ರಕಾಶ್‌, ಪ್ರಭಾಕರ ಸಾಂಶಿ, ಡಾ| ಸಿ.ಕೆ.ಮೂಕಪ್ಪ ನಾಯ್ಕ, ಪರಮೇಶ್ವರ ದೂಗೂರು ಇನ್ನಿತರರು ಇದ್ದರು.

ಟಾಪ್ ನ್ಯೂಸ್

13

Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ

Priyank-Gandhi

Parliament: ʼಪ್ಯಾಲೆಸ್ತೀನ್‌ʼ ಬ್ಯಾಗ್‌ನೊಂದಿಗೆ ಸಂಸತ್ತಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ!

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

1-dinnu

Karnataka; ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ ಘೋಷಿಸುತ್ತೇವೆ

highcourt

Amazon,Flipkart ವಿರುದ್ಧ ತನಿಖೆ: ಸುಪ್ರೀಂನಿಂದ ಎಲ್ಲಾ ಪ್ರಕರಣಗಳು ಕರ್ನಾಟಕ ಹೈಕೋರ್ಟ್‌ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ

Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ

raghavendra

Shimoga; ನಮ್ಮ ನಾಯಕರು ಗಮನ ಹರಿಸಲಿ: ಕುಮಾರ್‌ ಬಂಗಾರಪ್ಪ ಹೇಳಿಕೆಗೆ ರಾಘವೇಂದ್ರ ತಿರುಗೇಟು

ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ

Sagara: ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ

9

BJP: ಜನವರಿಯಲ್ಲಿ ರಾಜ್ಯಾಧ್ಯಕ್ಷರ ಬದಲು; ಕುಮಾರ ಬಂಗಾರಪ್ಪ

car-parkala

Sagara: ಪ್ರವಾಸಿ ಬಸ್ ಅಪಘಾತ; 15ಕ್ಕೂ ಹೆಚ್ಚು ಮಂದಿಗೆ ಗಾಯ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

13

Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ

Priyank-Gandhi

Parliament: ʼಪ್ಯಾಲೆಸ್ತೀನ್‌ʼ ಬ್ಯಾಗ್‌ನೊಂದಿಗೆ ಸಂಸತ್ತಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ!

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.