![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Nov 9, 2023, 3:09 PM IST
ಸಾಗರ: ತಾಲೂಕಿನ ಆವಿನಹಳ್ಳಿ ಹೋಬಳಿ ರಾಜಸ್ವ ನಿರೀಕ್ಷಕ ಗೌರೀಶ್ ಬಿ. ಅವರ ಮೇಲೆ ದೈಹಿಕ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿರುವ ಲೋಹಿತ್ ಕಣ್ಣೂರು ಅವರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನ.9ರ ಗುರುವಾರ ಸರ್ಕಾರಿ ನೌಕರರ ಸಂಘ ಹಾಗೂ ಕಂದಾಯ ಇಲಾಖೆ ನೌಕರರ ಸಂಘದ ವತಿಯಿಂದ ಸಾಗರ ಉಪವಿಭಾಗದ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ನ. 6ರಂದು ಆವಿನಹಳ್ಳಿ ಹೋಬಳಿ ರಾಜಸ್ವ ನಿರೀಕ್ಷಕ ಗೌರೀಶ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಲೋಹಿತ್ ಎಂಬವರು ಏಕಾಏಕಿ ಕಚೇರಿಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ದೈಹಿಕ ಹಲ್ಲೆ ಜೊತೆ ಜಾತಿ ನಿಂದನೆ ಮಾಡಿರುವ ಕ್ರಮವನ್ನು ಸರ್ಕಾರಿ ನೌಕರರ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ಪ್ರತಿಭಟನಕಾರರು ಹೇಳಿದರು.
ಸಾರ್ವಜನಿಕರಿಗೆ ಸರ್ಕಾರಿ ಸೌಲಭ್ಯಗಳನ್ನು ತಲುಪಿಸುವಲ್ಲಿ ಕಂದಾಯ ಇಲಾಖೆ ಪಾತ್ರ ಪ್ರಮುಖವಾಗಿದೆ. ಒಂದೊಮ್ಮೆ ಸಾರ್ವಜನಿಕರಿಗೆ ಸೇವೆಯಲ್ಲಿ ವ್ಯತ್ಯಯ ಕಂಡುಬಂದರೆ ಮೇಲಾಧಿಕಾರಿಗಳಿಗೆ ದೂರು ಸಲ್ಲಿಸಲು ಎಲ್ಲ ಅವಕಾಶ ಇರುತ್ತದೆ. ಅದನ್ನು ಬಿಟ್ಟು ನೌಕರರ ಮೇಲೆ ಹಲ್ಲೆ ನಡೆಸುವ ಕ್ರಮ ಸರಿಯಲ್ಲ. ಹಲ್ಲೆ ನಡೆಸಿರುವ ಲೋಹಿತ್ ಅವರನ್ನು 24 ಗಂಟೆಯೊಳಗೆ ಬಂಧಿಸಬೇಕು. ಇಲ್ಲವಾದಲ್ಲಿ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗಿ ಉಗ್ರ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಮಾತನಾಡಿದ ಪ್ರತಿಭಟನಕಾರರು ಎಚ್ಚರಿಕೆ ನೀಡಿದರು.
ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಕಲ್ಲಪ್ಪ ಮೆಣಸಿನಾಳ್, ಸರ್ಕಾರಿ ನೌಕರರ ಸಂಘದ ಪ್ರಮುಖರಾದ ಜಿ.ಬಸವರಾಜ್, ರಾಘವೇಂದ್ರ ಕುಮಾರ್, ಲಕ್ಷ್ಮೀ ಭಾಗವತ್, ವಿ.ಎನ್.ಶ್ರೀಧರ್, ಮಾಲತೇಶ್, ಕೋದಂಡ, ಅಣ್ಣಪ್ಪ ಡಿ.ಕೆ. ಇನ್ನಿತರರು ಹಾಜರಿದ್ದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.