Shimoga; ಗರ್ಭಿಣಿ ಆನೆಯ ಬಾಲಕ್ಕೆ ಮಚ್ಚಿನೇಟು! ಸಕ್ರೆಬೈಲು ಬಿಡಾರದಲ್ಲಿ ಘಟನೆ
Team Udayavani, Oct 17, 2023, 12:37 PM IST
ಶಿವಮೊಗ್ಗ: ಸಕ್ರೆಬೈಲು ಆನೆ ಬಿಡಾರದ ತುಂಬು ಗರ್ಭಿಣಿ ಭಾನುಮತಿ ಆನೆಯ ಬಾಲ ತುಂಡಾಗುವಷ್ಟು ಕತ್ತಿಯಿಂದ ಹಲ್ಲೆ ನಡೆಸಿದ್ದು ವನ್ಯಜೀವಿ ಪ್ರಿಯರಲ್ಲಿ ತಲ್ಲಣ ಮೂಡಿಸಿದೆ.
ತುಂಬು ಗರ್ಭಿಣಿ ಭಾನುಮತಿ ಆನೆಯ ಬಾಲಕ್ಕೆ ಮಚ್ಚಿನಿಂದ ಹೊಡೆದು ಕಿಡಿಗೇಡಿಗಳು ಗಾಯಗೊಳಿಸಿದ್ದಾರೆ. ಸೋಮವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಕಾವಾಡಿ ಮೊಹಮ್ಮದ್ ಹಾಗು ಸುದೀಪ್ ಭಾನುಮತಿ ಆನೆಯ ಜವಬ್ದಾರಿಯನ್ನು ಹೊತ್ತ ಸಿಬ್ಬಂದಿಗಳಾಗಿದ್ದಾರೆ.
ಹದಿನೆಂಟು ತಿಂಗಳ ತುಂಬು ಗರ್ಭಿಣಿಯಾಗಿರುವ ಭಾನುಮತಿ ಆನೆಯನ್ನು ಮೊನ್ನೆಯಷ್ಟೆ ಮಾವುತ, ಕಾವಾಡಿಗಳು ಹಾರೈಕೆ ಮಾಡಿ ಆಹಾರ ನೀಡಿ ಬಂದಿದ್ದರು. ಸೋಮವಾರ ಬೆಳಗ್ಗೆ ಭಾನುಮತಿ ಆನೆಯನ್ನು ನೋಡಲು ಹೋದ ಸಿಬ್ಬಂದಿಗಳಿಗೆ ದಾರಿಯಲ್ಲಿ ಅಲ್ಲಲ್ಲಿ ರಕ್ತ ಬಿದ್ದಿರುವುದು ಕಂಡಿದೆ. ಆಗ ಸಿಬ್ಬಂದಿಗಳು ಸಹಜವಾಗಿಯೇ ಖುಷಿ ಪಟ್ಟಿದ್ದಾರೆ. ಭಾನುಮತಿ ಇಲ್ಲೇ ಎಲ್ಲೋ ಮರಿ ಹಾಕಿರಬೇಕು ಎಂದು ರಕ್ತದ ಜಾಡನ್ನು ಹಿಂಬಾಲಿಸಿದ್ದಾರೆ. ಆದರೆ ಭಾನುಮತಿ ನೋಡಿದಾಗ ಸಿಬ್ಬಂದಿಗಳಿಗೆ ಆಘಾತ ಎದುರಾಗಿತ್ತು.
ಇದನ್ನೂ ಓದಿ:Shivamogga:ಟ್ರಯಲ್ ಬ್ಲಾಸ್ಟ್ ಪ್ರಕರಣ: ತೀರ್ಥಹಳ್ಳಿ ಮೂಲದ ನಾಲ್ವರಿಗೆ ನೋಟಿಸ್ ನೀಡಿದ ಎನ್ಐಎ
ಭಾನುಮತಿ ಆನೆಯ ಬಾಲಕ್ಕೆ ಯಾರೋ ಕಿಡಿಗೇಡಿಗಳು ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಚರ್ಮ ಬಾಲಕ್ಕೆ ಅಂಟಿಕೊಂಡಿದ್ದು ಬಿಟ್ಟರೆ ಬಾಲ ಬಹುತೇಕ ತುಂಡಾಗಿದೆ. ಭಾನುಮತಿ ಆನೆಯ ಆರ್ತನಾದ ಮುಗಿಲು ಮುಟ್ಟಿತ್ತು. ತಕ್ಷಣ ಸಿಬ್ಬಂದಿಗಳು ವನ್ಯಜೀವಿ ವೈದ್ಯ ವಿನಯ್ ಗೆ ಮಾಹಿತಿ ಮುಟ್ಟಿಸಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ವಿನಯ್ ಆನೆಯ ಬಾಲಕ್ಕೆ ಏಳು ಹೊಲಿಗೆ ಹಾಕಿ ಚಿಕಿತ್ಸೆ ನೀಡಿದರು. ನಂತರ ಭಾನುಮತಿ ಚೇತರಿಕೆ ಕಾಣುತ್ತಿದೆ.
ಇದು ಹೊರಗಿನ ಕಿಡಿಗೇಡಿಗಳ ಕೃತ್ಯವೋ ಅಥವಾ ಬಿಡಾರದ ಕೆಲವು ಸಿಬ್ಬಂದಿ ನಡುವಿನ ವೈಯಕ್ತಿಕ ದ್ವೇಷವೋ ಎಂಬುದು ತನಿಖೆಯಿಂದ ಮಾತ್ರ ಹೊರಬೀಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ
Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.