ವಸತಿ ಬಡಾವಣೆ ಹಕ್ಕು ಪತ್ರ ವಿತರಣೆ
Team Udayavani, Aug 17, 2021, 6:36 PM IST
ಶಿವಮೊಗ್ಗ: ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಅಟಲ್ ಬಿಹಾರಿ ವಾಜಪೇಯಿ ವಸತಿ ಬಡಾವಣೆಯ 130 ಅರ್ಹ ನಿವೇಶನದಾರರಿಗೆ ಖಾತಾ ಪತ್ರಗಳನ್ನು ವಿತರಿಸಲಾಯಿತು.
ವಿನೋಬನಗರ ಪೊಲೀಸ್ ಚೌಕಿಯ ವಿಪ್ರ ಸಭಾಂಗಣದಲ್ಲಿ ಭಾನುವಾರ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಏರ್ಪಡಿಸಿದ್ದ ಜಿಲ್ಲಾ
ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಖಾತಾ ಪತ್ರ ವಿತರಿಸಿದರು.
ಮಲ್ಲಿಗೇನಹಳ್ಳಿಯ ಅಟಲ್ ಬಿಹಾರಿ ವಾಜಪೇಯಿ ವಸತಿ ಬಡಾವಣೆಯಲ್ಲಿ 360 ಫಲಾನುಭವಿಗಳಿದ್ದು ಅದರಲ್ಲಿ ಕ್ರಮಬದ್ಧವಾದ 130 ನಿವೇಶನದಾರರಿಗೆ ಖಾತಾ ಪತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಈಶ್ವರಪ್ಪ ಅವರು ಮಾತನಾಡಿ, ಸ್ಥಳೀಯ ಚುನಾಯಿತ ಪ್ರತಿನಿಗಳು ಹಾಗೂ ಸೂಡಾ ಅಧ್ಯಕ್ಷರ ಅವಿರತ ಶ್ರಮದಿಂದ ಸಮಸ್ಯೆಗಳನ್ನು ತೊಡೆದು ಹಾಕಿ ಖಾತಾ ಪತ್ರಗಳನ್ನು ವಿತರಿಸುತ್ತಿರುವುದು ಹರ್ಷದ ಸಂಗತಿಯಾಗಿದೆ.
ಅನೇಕ ವರ್ಷಗಳಿಂದ ನಿವೇಶನಕ್ಕಾಗಿ ಕಾದಿದ್ದು, ಈಗ ನಿವೇಶನ ಪಡೆಯುತ್ತಿರುವ ಫಲಾನುಭವಿಗಳು ತ್ವರಿತಗತಿಯಲ್ಲಿ ಮನೆಗಳನ್ನು ನಿರ್ಮಿಸಿಕೊಂಡು ನೆಮ್ಮದಿಯ ಜೀವನ ಕಳೆಯುವಂತಾಗಬೇಕು ಎಂದರು.
ಇದನ್ನೂ ಓದಿ:ಜಮ್ಮು-ಕಾಶ್ಮೀರ: ಕುಲ್ಗಾಮ್ ನಲ್ಲಿ ಉಗ್ರರಿಂದ ಬಿಜೆಪಿ ಮುಖಂಡನ ಗುಂಡಿಟ್ಟು ಹತ್ಯೆ
ಅಧ್ಯಕ್ಷತೆ ವಹಿಸಿದ್ದ ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ್ ಮಾತನಾಡಿ, ಸೂಡಾ ಆರಂಭದಿಂದ ಇಲ್ಲಿವರೆಗೆ ಹಲವು ಅಧ್ಯಕ್ಷರ
ಆಡಳಿತಾವಧಿಯಲ್ಲಿ 16ಬಡಾವಣೆಗಳನ್ನು ಅಭಿವೃದ್ಧಿಪಡಿಸಿ ಸಹಸ್ರಾರು ನಿವೇಶನಗಳನ್ನು ಅರ್ಹರಿಗೆ ಹಂಚಿಕೆ ಮಾಡಲಾಗಿದೆ. ಮೂಲೆ
ನಿವೇಶನಗಳನ್ನು ಬಹಿರಂಗ ಹರಾಜು ಮೂಲಕ ವಿತರಿಸಲಾಗಿದೆ. ವಾಜಪೇಯಿ ಬಡಾವಣೆ ಸೃಜಿಸುವಲ್ಲಿ ಆಗಿದ್ದ ಸಮಸ್ಯೆಗಳನ್ನು
ಇತ್ಯರ್ಥಪಡಿಸುವಲ್ಲಿ ಸಚಿವರು, ಸಂಸದರ ನೆರವು ಹಾಗೂ ಸಹಕಾರವನ್ನು ಮೆಚ್ಚುವಂತದ್ದು ಎಂದರು. ಅರ್ಹರಾದ 130 ಫಲಾನುಭವಿಗಳಿಗೆ ಖಾತಾ ಪತ್ರಗಳನ್ನು ಸಚಿವರು, ಸಂಸದರು ಹಾಗೂ ವೇದಿಕೆಯಲ್ಲಿದ್ದ ಗಣ್ಯರು ವಿತರಿಸಿದರು.
ಸಂಸದ ಬಿ.ವೈ. ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಮೇಯರ್ ಸುನೀತಾ ಅಣ್ಣಪ್ಪ, ಸೂಡಾ ಮಾಜಿ ಅಧ್ಯಕ್ಷ
ಜ್ಞಾನೇಶ್ವರ್, ಪಾಲಿಕೆ ಸದಸ್ಯರಾದ ಚನ್ನಬಸಪ್ಪ, ಅನಿತಾ ರವಿಶಂಕರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.