26ರಿಂದ ಆಯುಷ್ಮಾನ್ ವಿಶೇಷ ಶಿಬಿರ: ರಾಘವೇಂದ್ರ
Team Udayavani, Dec 20, 2019, 4:21 PM IST
ಶಿವಮೊಗ್ಗ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಫಲಾನುಭವಿಗಳನ್ನು ನೋಂದಾಯಿಸಲು ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಡಿ. 26ರಿಂದ 28ರವರೆಗೆ ವಿಶೇಷ ಶಿಬಿರ ಆಯೋಜಿಸಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಂಗಣದಲ್ಲಿ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿಸುವ ಕುರಿತು ಜಿಲ್ಲೆಯ ಎಲ್ಲಾ ಸಾಮಾನ್ಯ ಸೇವಾಕೇಂದ್ರದ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯನ್ನು ಗುರುವಾರ ನಡೆಸಿ ಅವರು ಮಾತನಾಡಿದರು. ಆಯುಷ್ಮಾನ್ ಯೋಜನೆಯಡಿ ಪ್ರಸ್ತುತ 4 ಲಕ್ಷ ಜನರನ್ನು ನೋಂದಾಯಿಸಿ ಕಾರ್ಡ್ ನೀಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 14ಲಕ್ಷ ಫಲಾನುಭವಿಗಳನ್ನು ಈ ಯೋಜನೆಯಡಿ ನೋಂದಾಯಿಸುವ ಗುರಿ ಹೊಂದಲಾಗಿದೆ.
ಪ್ರಸ್ತುತ 116 ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಈ ಯೋಜನೆಯಡಿ ಫಲಾನುಭವಿಗಳಿಗೆ ಕಾರ್ಡ್ ನೀಡಲಾಗುತ್ತಿದ್ದು, ಇನ್ನೂ 21 ಕೇಂದ್ರಗಳು ಎರಡು ದಿನಗಳಲ್ಲಿ ಸಿದ್ಧಗೊಳ್ಳಲಿವೆ. ಫಲಾನುಭವಿಗಳಿಂದ ನೋಂದಣಿಗೆ ನಿಗದಿಪಡಿಸಿರುವ ಶುಲ್ಕವನ್ನು ಮಾತ್ರ ಪಡೆಯಬೇಕು. ಕಾರ್ಡ್ ನೀಡಲು ಸತಾಯಿಸುತ್ತಿರುವ ಬಗ್ಗೆ ಯಾವುದೇ ದೂರುಗಳು ಬಾರದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಜಿಲ್ಲೆಯಲ್ಲಿರುವ ಎಲ್ಲಾ 106 ಪ್ರಾಥಮಿಕ ಆರೋಗ್ಯ ಕೇಂದ್ರ, 12 ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಡಿ. 26, 27ಮತ್ತು 28ರಂದು ವಿಶೇಷ ನೋಂದಣಿ ಅಭಿಯಾನ ಆಯೋಜಿಸಲಾಗುವುದು. ಮೂರು ದಿನಗಳಲ್ಲಿ ಪ್ರತಿ ಕೇಂದ್ರಗಳಲ್ಲಿ ತಲಾ 500 ಮಂದಿಗೆ ಆರೋಗ್ಯ ಕಾರ್ಡ್ ವಿತರಿಸುವ ಗುರಿ ನಿಗದಿಪಡಿಸಲಾಗಿದೆ. ಪ್ರತಿ ಕೇಂದ್ರದಲ್ಲಿ ಮೂರು ಮಂದಿ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲಾಗುವುದು. ಬೆಳಗ್ಗೆ 8ರಿಂದ ರಾತ್ರಿ 8ಗಂಟೆವರೆಗೆ ನೋಂದಣಿ ಕಾರ್ಯ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್ ಅವರು ಮಾತನಾಡಿ, ಜನರು ನೋಂದಣಿಗೆ ಆಗಮಿಸುವ ಮೊದಲೇ ಅವರು ಬರಬೇಕಾದ ಸಮಯವನ್ನು ನಿಗದಿಪಡಿಸಿ ಮಾಹಿತಿ ನೀಡಬೇಕು. ತಾಂತ್ರಿಕ ತೊಂದರೆಗಳು ಎದುರಾಗದಂತೆ ಕ್ರಮ ವಹಿಸಲಾಗುವುದು. ಸ್ಥಳೀಯ ಪಂಚಾಯತ್‌ನಿಂದ ಹೆಚ್ಚುವರಿಯಾಗಿ ಸೇವಾ ಕೇಂದ್ರಗಳಿಗೆ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ನೀಡಲಾಗುವುದು. ಎಲ್ಲಾ ಸೇವಾ ಕೇಂದ್ರಗಳ ಸಿಬ್ಬಂದಿ ಆಂದೋಲನದ ರೀತಿಯಲ್ಲಿ ನೋಂದಣಿ ಕಾರ್ಯ ಮಾಡಬೇಕು. ಮೂರು ದಿನಗಳಲ್ಲಿ 75 ಸಾವಿರ ಫಲಾನುಭವಿಗಳನ್ನು ಯೋಜನೆ ವ್ಯಾಪ್ತಿಗೆ ಸೇರಿಸುವ ಗುರಿ ಹೊಂದಲಾಗಿದೆ ಎಂದರು.
ಜಿಲ್ಲೆಯಲ್ಲಿ ಈಗಾಗಲೇ ಯೋಜನೆಯಡಿ 24,048 ಫಲಾನುಭವಿಗಳು ಸೌಲಭ್ಯ ಪಡೆದುಕೊಂಡಿದ್ದು, 3.88 ಕೋಟಿ ರೂ. ಪಾವತಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ರಾಜೇಶ ಸುರಗಿಹಳ್ಳಿ ಮಾಹಿತಿ ನೀಡಿದರು. ಜಿಪಂ ಸಿಇಒ ಎಂ.ಎಲ್. ವೈಶಾಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.