ರೈತ ಮುಖವಾಡ ಧರಿಸಿದವರಿಂದ ಮುಷ್ಕರ


Team Udayavani, Dec 9, 2020, 4:34 PM IST

ರೈತ ಮುಖವಾಡ ಧರಿಸಿದವರಿಂದ ಮುಷ್ಕರ

ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ಪರ ಕಾಯ್ದೆಗಳನ್ನು ವಿರೋಧಿಸಿ ಮುಷ್ಕರ ಮಾಡುತ್ತಿರುವವರು ನಿಜವಾದ ರೈತರಲ್ಲ. ಮುಖವಾಡ ಹೊತ್ತವರು, ಇದೊಂದು ರಾಜಕೀಯ ಕುತಂತ್ರವಾಗಿದೆ. ರೈತರನ್ನು ದಾರಿತಪ್ಪಿಸಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರೈತರ ಮತ್ತು ಕೃಷಿ ಕ್ಷೇತ್ರ ಸುಧಾರಣೆಗಾಗಿಯೇರೈತ ಉತ್ಪನ್ನ, ವ್ಯಾಪಾರ ಮತ್ತು ವಾಣಿಜ್ಯ, ರೈತರ ಬೆಳೆಗಳಿಗೆ ಬೆಲೆ ಭರವಸೆ ಮತ್ತು ಸೇವಾ ಒಪ್ಪಂದ, ಅಗತ್ಯ ಸರಕುಗಳ ತಿದ್ದುಪಡಿ ಮಸೂದೆಗಳನ್ನು ಜಾರಿಗೆ ತಂದಿದೆ. ಈ ಕಾಯ್ದೆಗಳಿಂದರೈತರಿಗೆ ಅನುಕೂಲವಾಗುತ್ತದೆಯೇ ಹೊರತು ಯಾವುದೇ ಅನಾನುಕೂಲ ಆಗುವುದಿಲ್ಲ ಎಂದರು.

ವಾಮಪಂಥದವರು, ಕಮ್ಯೂನಿಸ್ಟರು, ಪ್ರಗತಿಪರರು, ಎಡಪಂಥಿಯರು ಮಾತ್ರ ಇಂತಹ ಮಸೂದೆಗಳನ್ನುಒಪ್ಪುವುದಿಲ್ಲ. ಇವರ್ಯಾರಿಗೂ ಕೃಷಿ ಕ್ಷೇತ್ರದ ಅಭಿವೃದ್ಧಿಹಿಡಿಸುವುದಿಲ್ಲ. ಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ.ಕನಿಷ್ಟ ಬೆಂಬಲ ಬೆಲೆಯಲ್ಲಿ ರೈತರ ಬೆಳೆ ಖರೀದಿ  ಮಾಡುವುದಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಆದರೆಕೇಂದ್ರ ಸರ್ಕಾರ ಸ್ಪಷ್ಟವಾಗಿ ಹೇಳಿದೆ. ಕಾಯ್ದೆಗಳಲ್ಲೂ ಸ್ಪಷ್ಟತೆ ಇದೆ. ಬೆಂಬಲ ಬೆಲೆಯಲ್ಲಿ ಖರೀದಿಸಲಾಗುತ್ತಿದೆ. ಕೇರಳ ಸರ್ಕಾರ ಕಾಯ್ದೆಯನ್ನು ಜಾರಿಗೊಳಿಸಿಲ್ಲ ಎಂದು ದೂರಿದರು.

ಖಲಿಸ್ಥಾನ್‌ ಚಳವಳಿಯ ಮೂಲಕ ದೇಶ ವಿರೋಧಿ ಚಟುವಟಿಕೆ ನಡೆಸುತ್ತಿರುವ ಕೆನಡಾ ಮತ್ತು ಲಂಡನ್‌ ನಲ್ಲಿರುವ ವಾಮಪಂಥಿಯರು ಈ ಪ್ರತಿಭಟನೆಗೆ ಬೆಂಬಲ ನೀಡುತ್ತಿರುವುದು ರಾಷ್ಟ್ರ ವಿರೋಧಿ ಶಕ್ತಿಗಳ ಷಡ್ಯಂತ್ರಕ್ಕೆ ಸಾಕ್ಷಿಯಾಗಿದೆ ಎಂದರು.

ಈ ಮಸೂದೆಗಳನ್ನು ಎಲ್ಲ ಕಡೆ ಸ್ವಾಗತ ಮಾಡಲಾಗಿದೆ. ಆದರೆ ಕೆಲವು ದಲ್ಲಾಳಿಗಳು, ಮಧ್ಯವರ್ತಿಗಳು ಮತ್ತು ರಾಜಕೀಯ ಹಿತಾಸಕ್ತಿಗಳು ಸೇರಿಕೊಂಡು ಕೇಂದ್ರ ಸರ್ಕಾರಕ್ಕೆಕೆಟ್ಟ ಹೆಸರು ತರುವ ಪಿತೂರಿಯಿಂದ ಈ ಮಸೂದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ. ಇದೊಂದು ರಾಜಕೀಯ ಕುತಂತ್ರವಾಗಿದ್ದು, ರೈತರನ್ನು ದಾರಿತಪ್ಪಿಸಲಾಗುತ್ತಿದೆ. ರೈತರುಇದಕ್ಕೆ ಬಲಿಯಾಗಬಾರದು ಎಂದು ಮನವಿ ಮಾಡಿದರು.

ಎಪಿಎಂಸಿ ಕಾಯ್ದೆಯಿಂದ ರೈತರಿಗೆ ಅನುಕೂಲವೇ ಆಗಿದೆ. ಒಳಗೆ ಹೊರಗೆ ಎಲ್ಲಾದರೂ ಅವರು ವ್ಯವಹಾರ ಮಾಡಬಹುದು. ತಮ್ಮ ಉತ್ಪನ್ನಗಳನ್ನು ಲಾಭಕ್ಕೆ ಮಾರಿಕೊಳ್ಳಬಹುದು. ಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕೆ ಕೊಟ್ಯಂತರ ರೂ.ಗಳನ್ನು ಖರ್ಚು ಮಾಡುತ್ತಿದೆ. ಗೊಬ್ಬರದ ಸಮಸ್ಯೆ ಬಗೆಹರಿಸಿದೆ. ಬಿತ್ತನೆ ಬೀಜ ನೀಡಿದೆ. ಕಿಸಾನ್‌ ಕಾರ್ಡ್‌, ಫಸಲ್‌ ಬಿಮಾ, ಹನಿ ನೀರಾವರಿ, ಕಿಸಾನ್‌ ಸಮ್ಮಾನ್‌ ಮುಂತಾದ ಯೋಜನೆಗಳ ಮೂಲಕ ರೈತರ ಬಾಳನ್ನು ಬೆಳಗಿಸುತ್ತಿದೆ ಎಂದರು. ಇದರ ಪರಿಣಾಮ ರೈತನ ಆದಾಯ ಕೂಡ ಹೆಚ್ಚಿದೆ. 2014 ರಲ್ಲಿ 250 ಮಿಲಿಯನ್‌ ಟನ್‌ ಉತ್ಪಾದನೆ ಇದ್ದರೆ. 2020ರಲ್ಲಿ ಅದು 291ಮಿಲಿಯನ್‌ ಟನ್‌ಗೆ ಹೆಚ್ಚಿದೆ. ಅಂದಿಗೂ ಇಂದಿಗೂ ಶೇ.30 ರಷ್ಟು ಆದಾಯ ಹೆಚ್ಚಿದೆ. ಎಂಆರ್‌ಪಿ ಬಗ್ಗೆಯೂ ಯಾವ ಅನುಮಾನಗಳು ಬೇಡ ಎಂದರು.

ಶಾಂತಿ ಸುವ್ಯವಸ್ಥೆಗಾಗಿ ನಿಷೇಧಾಜ್ಞೆ  :

ಇತ್ತೀಚೆಗೆ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಅಪ್ರಾಪ್ತೆ ಮೇಲೆ ನಡೆದ ಅತ್ಯಾಚಾರ ಘಟನೆ ಖಂಡಿಸಿದ ಅವರು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದರು. ಗಲಾಟೆ ನಂತರ ಶಿವಮೊಗ್ಗದಲ್ಲಿ 144 ಸೆಕ್ಷನ್‌ ವಿನಾಕಾರಣ ವಿಸ್ತರಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಹಾಗೇನೂ ಇಲ್ಲಯಾವುದೇ ಗಲಾಟೆಯಾಗದಂತೆ ಶಾಂತಿಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶ ಇದರ ಹಿಂದಿದೆ. ಪೊಲೀಸರು ಕೂಡ ಗುಪ್ತಚರ ವರದಿಗಳನ್ನು ಆಧರಿಸಿ ಕೆಲಸ ಮಾಡುತ್ತಾರೆ ಎಂದು ಸಮರ್ಥಿಸಿಕೊಂಡರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌, ಪ್ರಮುಖರಾದ ಎಸ್‌.ಎಸ್‌.ಜ್ಯೋತಿಪ್ರಕಾಶ್‌, ಗಿರೀಶ್‌ ಪಟೇಲ್‌,ಡಿ.ಎಸ್‌.ಅರುಣ್‌, ಸಾಲೇಕೊಪ್ಪ ರಾಮಚಂದ್ರ,ರಾಮು, ಗಂಗಾಧರ್‌, ಶಿವರಾಜ್‌, ಪ್ರಸನ್ನ, ಕೃಷ್ಣೋಜಿರಾವ್‌,ಸತೀಶ್‌, ಸುನಿತಾ ಅಣ್ಣಪ್ಪ ಸೇರಿದಂತೆ ಹಲವರಿದ್ದರು

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.