ಅಂಜನಾಪುರ ಜಲಾಶಯಕ್ಕೆ ಬಾಗೀನ ಅರ್ಪಿಸಿದ ಸಿಎಂ ಬಿಎಸ್ವೈ
ನೆರೆ ಹಾನಿ ಹಿನ್ನೆಲೆಯಲ್ಲಿ ಶಿವಮೊಗ್ಗದ ವಿವಿಧ ಭಾಗಗಳಿಗೆ ಭೇಟಿ ನೀಡುತ್ತಿರುವ ಸಿಎಂ.
Team Udayavani, Aug 13, 2019, 12:29 PM IST
ಶಿವಮೊಗ್ಗ: ನೆರೆ ಪೀಡಿತ ಪ್ರದೇಶಗಳ ಹಾನಿ ವೀಕ್ಷಣೆಗೆ ಶಿವಮೊಗ್ಗ ಜಿಲ್ಲೆಗೆ ಆಗಮಿಸಿರುವ ಮುಖ್ಯಮಂತ್ರಿ ಬಿ ಎಸ್, ಯಡಿಯೂರಪ್ಪ ಇಂದು ಜಿಲ್ಲೆಯ ಅನೇಕ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.
ಇದೇ ವೇಳೆ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯಕ್ಕೆ ಬಾಗೀನ ಅರ್ಪಿಸಿದರು.
ಶಿವಮೊಗ್ಗ ಗಾಂಧಿ ಬಜಾರ್ ನ ರಾಮಣ್ಣ ಶ್ರೇಷ್ಠಿ ಪಾರ್ಕ್ ನ ಪರಿಹಾರ ಕೇಂದ್ರ, ವಿದ್ಯಾನಗರ, ರಾಜೀವ್ ಗಾಂಧಿ ಬಡಾವಣೆಯ ಗೋಶಾಲೆಗೆ ಭೇಟಿ ನೀಡಿದರು.
ಸಂತ್ರಸ್ತ ಕುಟುಂಬಕ್ಕೆ 10 ಸಾವಿರ, ಮನೆ ರಿಪೇರಿಗೆ 1 ಲಕ್ಷ ಹಾಗೂ ಹೊಸದಾಗಿ ಮನೆ ನಿರ್ಮಿಸಿ ಕೊಳ್ಳಲು 5 ಲಕ್ಷ ನೀಡುವುದಾಗಿ ಘೋಷಣೆ ಮಾಡಿದ ಅವರು, ರಾಜ್ಯದ ಎಲ್ಲೆಡೆ ಇದೇ ಪರಿಸ್ಥಿತಿ ಇದ್ದು ಹಿಂದೆಂದೂ ಹೀಗೆ ಆಗಿರಲಿಲ್ಲ ಎಂದು ಬಿ ಎಸ್ ಯಡಿಯೂರಪ್ಪ ಹೇಳಿದರು.
ಮಹಾನಗರ ಪಾಲಿಕೆಗೆ ತಕ್ಷಣವೇ 50 ಕೋಟಿ ಬಿಡುಗಡೆ ನೀಡಲಾಗುತ್ತದೆ. ಜನರು ಒಪ್ಪಿದರೆ ಬಹು ಮಹಡಿ ವಸತಿ ನಿರ್ಮಿಸಲಾಗುವುದು
ಬೇರೆ ಯೋಜನೆಗೆ ಅನುದಾನವನ್ನು ಒದಗಿಸಲು ಸಿದ್ಧ. ಹಾಗಾಗಿ ಪರಿಹಾರ ಕಾರ್ಯಕ್ಕೆ ಹಣದ ಕೊರತೆ ಆಗದಂತೆ ಸರ್ಕಾರ ನೋಡಿಕೊಳ್ಳಲಿದೆ ಎಂದರು.
ಬಾಗೀನ ಅರ್ಪಿಸಿದ ಬಿಎಸ್ ವೈ: ಅಂಜನಾಪುರ ಜಲಾಶಯಕ್ಕೆ ಬಾಗೀನ ಅರ್ಪಿಸಿದ ಮುಖ್ಯಮಂತ್ರಿಗಳು ಕರ್ನಾಟಕ ರಾಜ್ಯದಲ್ಲಿ ನೀರಾವರಿ ಯೋಜನೆಗೆ ಹೆಚ್ಚಿನ ಆದ್ಯತೆ ನಿಡಲಿದ್ದೇನೆ. ಶಿಕಾರಿಪುರ ಕ್ಷೇತ್ರದಲ್ಲಿ 1300 ಕೋಟಿ ರೂಪಾಯಿ ವೆಚ್ಚದ ನೀರಾವರಿ ಯೋಜನೆ ರೂಪಿಸಿ ಟೆಂಡರ್ ಕರೆಯಲಾಗಿದೆ. ನೀರಾವರಿ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದರು.
ಶಿವಮೊಗ್ಗ ಜಿಲ್ಲೆ ಹಾಗೂ ಶಿಕಾರಿಪುರ ರಾಜ್ಯಕ್ಕೆ ಮಾದರಿಯಾಗಬೇಕು.
ನಮ್ಮ ಜಿಲ್ಲೆ ಪ್ರವಾಸೋದ್ಯಮಕ್ಕೆ ಹೆಸರುವಾಸಿ. ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಜೋಗ ಜಲಪಾತ ಅಭಿವೃದ್ಧಿಗೆ ಕ್ರಮಕೈಗೊಳ್ಳುತ್ತೇನೆ. ಅರ್ಧಕ್ಕೆ ನಿಂತಿರುವ ವಿಮಾನ ನಿಲ್ದಾಣ ಪೂರ್ಣಗೊಳಿಸುವ ಸಂಬಂಧ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ವಿಮಾನನಿಲ್ದಾಣ ಕಾಮಗಾರಿಗೆ ಶೀಘ್ರವೇ 50 ಕೋಟಿ ಬಿಡುಗಡೆ ಮಾಡಲಾಗುವುದು ಎಂದ ಬಿ ಎಸ್ ಯಡಿಯೂರಪ್ಪ ಕರ್ನಾಟಕ ರಾಜ್ಯವನ್ನು ಮಾದರಿ ರಾಜ್ಯವಾಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಕೇವಲ ಮೂರು ನಾಲ್ಕು ತಿಂಗಳಲ್ಲಿ ರಾಜ್ಯದ ಜನರು ಬದಲಾವಣೆ ನೋಡಲಿದ್ದಾರೆ ಎಂದು ವಿಶ್ವಾಸ ಮಾತುಗಳನ್ನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
MUST WATCH
ಹೊಸ ಸೇರ್ಪಡೆ
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.