Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Team Udayavani, Apr 25, 2024, 10:40 AM IST
ಭದ್ರಾವತಿ: ದೇಶದ ಪ್ರಧಾನಮಂತ್ರಿ ಅಗಬೇಕೆಂಬ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಆ ಸ್ಥಾನಕ್ಕೆ ಗೌರವ ತರುವ ರೀತಿ ಕೆಲಸ ಮಾಡುವವರನ್ನು ಮಾತ್ರ ಜನತೆ ಆರಿಸಬೇಕು ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದರು.
ಅವರು ಭದ್ರಾವತಿ ಕನಕ ಮಂಟಪದಲ್ಲಿ ಬಿಜೆಪಿಯಿಂದ ತಾಲೂಕು ತಮಿಳು ಭಾಷಿಗರ ಸಾರ್ವಜನಿಕ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ನರೇಂದ್ರ ಮೋದಿಯನ್ನು ಜನತೆ ದೇಶದ ಪ್ರಧಾನ ಮಂತ್ರಿಯನ್ನಾಗಿ ಅರಿಸಿದ ಮೇಲೆ ಅವರು ಕಳೆದ ಹತ್ತು ವರ್ಷಗಳಲ್ಲಿ ದೇಶದ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿ ವಿಶ್ವನಾಯಕರಾಗಿ ಬೆಳೆದಿದ್ದಾರೆ. ಅವರು ದೇಶಕ್ಕಾಗಿ ನಿಸ್ವಾರ್ಥವಾಗಿ ಮಾಡಿರುವ ಕೆಲಸಕ್ಕಾಗಿ ಅವರಿಗೆ ಕೂಲಿ ರೂಪದಲ್ಲಿ ಬಿಜೆಪಿ ಅಭ್ಯರ್ಥಿಗೆ ಮತಹಾಕಿ ಮೋದಿಯವರನ್ನು ಮತ್ತೂಮ್ಮೆ ದೇಶದ ಪ್ರಧಾನಿಯನ್ನಾಗಿ ಮಾಡೋಣ. ಯಡಿಯೂರಪ್ಪ, ರಾಘವೇಂದ್ರ, ಮೋದಿ ಅವರು ತಮಿಳು ಭಾಷಿಗರ ಅಭಿವೃದ್ಧಿಗೆ ಕೆಲಸ ಮಾಡುತ್ತ ಬಂದಿದ್ದಾರೆಂಬುದನ್ನು ನಾವು ತಮಿಳು ಭಾಷಿಗರು ನೆನೆದು ಅವರ ಗೆಲುವಿಗಾಗಿ ಬಿಜೆಪಿಗೆ ಮತ ಹಾಕಿ ಎಂದರು.
ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮಾತನಾಡಿ, ಮೋದಿ ಅವರ ಮೂಲಕ ಭದ್ರಾವತಿ ವಿಐಎಸ್‌ಎಲ್ ಉಳಿಸುತ್ತೇನೆ. ಅದಕ್ಕೆ ಗತವೈಭವ ನೀಡೋಣ. ಎಂಪಿಎಂಗೆ ಕೊನೆ ಮೊಳೆ ಹೊಡೆದದ್ದು ಇದೆ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ. ಭದ್ರಾವತಿ ಜನರ ಜೀವನ ಕಟ್ಟಲು ನಾವು ನಿಮ್ಮ ಜತೆ ಸದಾಕಾಲ ಇರುತ್ತೇವೆ. ಕಾಂಗ್ರೆಸ್‌ನ ಸುಳ್ಳು ಗ್ಯಾರಂಟಿಗೆ ಬಲಿಯಾಗದೆ ದೇಶದ ಭವಿಷ್ಯಕ್ಕಾಗಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಬೆಂಬಲಿಸಿ ಎಂದು ಮನವಿ ಮಾಡಿದರು. ತಾಲೂಕು ಅಧ್ಯಕ್ಷ ಧರ್ಮಪ್ರಸಾದ್ ಸ್ವಾಗತಿಸಿದರು. ಆಶಾಪುಟ್ಟಸ್ವಾಮಿ ಪ್ರಾರ್ಥಿಸಿದರು. ಸಿ. ಮಂಜುನಾಥ್ ಕದಿರೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್, ಮುಖಂಡರಾದ ಕೂಡ್ಲಿಗೆರೆ ಹಾಲೇಶ್, ಕದಿರೇಶ್, ದತ್ತಾತ್ರಿ, ಪಕ್ಷದ ಜಿಲ್ಲಾಧ್ಯಕ್ಷ ಮೇಘರಾಜ್, ಜೆಡಿಎಸ್ ಅಧ್ಯಕ್ಷ ಕರುಣಾಮೂರ್ತಿ, ಶಾರದಾಪ್ಪಾಜಿ ಇದ್ದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೈಪಾಸ್ ರಸ್ತೆಯಿಂದ ಅಣ್ಣಮಲೈ ಅವರನ್ನು ಮೆರವಣಿಗೆ ಮೂಲಕ ವೇದಿಕೆ ಕಾರ್ಯಕ್ರಮಕ್ಕೆ ಕರೆತರಲಾಯಿತು. ತಾಲೂಕಿನ ಸಹಸ್ರಾರು ತಮಿಳು ಭಾಷಿಗರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.