ನಿಷೇಧಾಜ್ಞೆ ನಡುವೆ ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ
Team Udayavani, Aug 16, 2022, 12:19 PM IST
ಶಿವಮೊಗ್ಗ: ಭದ್ರಾವತಿ ನಗರದಲ್ಲಿ ನಿಷೇಧಾಜ್ಞೆ ಜಾರಿಯಿದ್ದರೂ ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಭದ್ರಾವತಿ ನೆಹರು ನಗರದಲ್ಲಿ ಡಿಚ್ಚಿ ಮುಬಾರಕ್ ಎಂಬಾತನಿಗೂ ಸುನೀಲ್ ಗೂ ಗಲಾಟೆ ನಡೆದಿದ್ದು, ಈ ವೇಳೆ ಸುನೀಲ್ ಮೇಲೆ ಹಲ್ಲೆ ನಡೆಸಲಾಗಿದೆ. ಚಾಕುವಿನಿಂದ ಇರಿಯಲು ಯತ್ನಿಸಲಾಗಿದೆ. ಆದರೆ, ಸುನೀಲ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಇಬ್ಬರ ನಡುವಿನ ಹಳೆಯ ವೈಮನಸ್ಯಕ್ಕೆ ನಡೆದಿದ್ದು ಎಂದು ಹೇಳಲಾಗಿದ್ದರೂ, ಸೂಕ್ಷ್ಮ ಸಮಯದ ವೇಳೆ ಇಂತಹ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.
ಇದನ್ನೂ ಓದಿ:ಹಿಂದೂಗಳು ಎದ್ದರೆ ಮುಸಲ್ಮಾನ ಗೂಂಡಾಗಳು ಉಳಿಯಲ್ಲ: ಈಶ್ವರಪ್ಪ ಎಚ್ಚರಿಕೆ
ಹಳೇನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಿವಮೊಗ್ಗದ ಘಟನೆ ಹಿನ್ನೆಲೆಯಲ್ಲಿ ನಗರದಲ್ಲೂ ಸಹ ನಿನ್ನೆಯಿಂದಲೇ ಸೆಕ್ಷನ್ ಜಾರಿಗೊಳಿಸಲಾಗಿದ್ದು, ನಗರದಲ್ಲಿ ಹೆಜ್ಜೆ ಹೆಜ್ಜೆಗೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.