ಮತದಾರರ ಪಟ್ಟಿ ಪರಿಷ್ಕರಣೆ ಆರಂಭ
Team Udayavani, Sep 2, 2019, 1:45 PM IST
ಶಿವಮೊಗ್ಗ: ಮತದಾರರ ಪಟ್ಟಿ ಪರಿಷ್ಕರಣೆ ಪೋಸ್ಟರ್‌ಗಳನ್ನು ಅಪರ ಜಿಲ್ಲಾಧಿಕಾರಿ ಅನುರಾಧಾ ಪ್ರದರ್ಶಿಸಿದರು.
ಶಿವಮೊಗ್ಗ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಸೆಪ್ಟೆಂಬರ್ 1ರಿಂದ 30ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ಪರಿಷ್ಕರಣೆ ಕಾರ್ಯ ಕೈಗೊಳ್ಳುವರು ಎಂದು ಅಪರ ಜಿಲ್ಲಾಧಿಕಾರಿ ಅನುರಾಧಾ ತಿಳಿಸಿದರು.
ಅವರು ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಚಾರ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡಿ ಮತದಾರರು ನೀಡುವ ದಾಖಲೆಗಳೊಂದಿಗೆ ಮತದಾರರ ಪಟ್ಟಿಯಲ್ಲಿರುವ ಹೆಸರುಗಳನ್ನು ಪರಿಶೀಲಿಸುವರು. ಇದಕ್ಕಾಗಿ ವಿಶೇಷ ಆ್ಯಪ್ ಸಿದ್ಧಪಡಿಸಲಾಗಿದ್ದು, ಇದರ ಮೂಲಕ ಜಿಪಿಎಸ್ ಆಧಾರಿತ ಮಾಹಿತಿಯನ್ನು ದಾಖಲಿಸಲಾಗುವುದು. ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ನೋಂದಾಯಿಸಲು ಅರ್ಜಿ ನಮೂನೆ-06, ಬೇರೆ ಕಡೆ ಹೋಗಿರುವ ಮತದಾರರ ಹೆಸರು ತೆಗೆದು ಹಾಕಲು ನಮೂನೆ-07, ತಿದ್ದುಪಡಿಗಾಗಿ ನಮೂನೆ 08ರಲ್ಲಿ ಮಾಹಿತಿ ಪಡೆಯುವರು. ಮನೆಯ ಎಲ್ಲಾ ಸದಸ್ಯರ ಹೆಸರು ಒಂದೇ ಮತಗಟ್ಟೆ ವ್ಯಾಪ್ತಿಯಲ್ಲಿ ಬರುವಂತೆ ಖಾತ್ರಿಪಡಿಸಲಾಗುವುದು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಹೆಚ್ಚುವರಿಯಾಗಿ ರಚಿಸಬಹುದಾದ ಮತಗಟ್ಟೆಗಳ ಕುರಿತು ಸರ್ಕಾರಿ ಕಟ್ಟಡಗಳ ಮಾಹಿತಿ ಸಂಗ್ರಹಿಸಲಾಗುವುದು. ಒಂದು ಜನವರಿ 2020ಕ್ಕೆ ಅನ್ವಯವಾಗುವಂತೆ ಒಂದು ಜನವರಿ 2002ರ ಪೂರ್ವದಲ್ಲಿ ಜನಿಸಿದವರ ಮಾಹಿತಿಯನ್ನು ಸಂಗ್ರಹಿಸಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಕ್ರಮ ವಹಿಸಲಾಗುವುದು ಎಂದರು.
ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರನ್ನು ಎನ್‌ವಿಎಸ್ ಪೋರ್ಟಲ್ನಲ್ಲಿ ಸಹ ಪರಿಶೀಲಿಸಬಹುದಾಗಿದೆ. ಅಲ್ಲದೆ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಜಿಲ್ಲೆಯಲ್ಲಿರುವ 364 ಸಾಮಾನ್ಯ ಸೇವಾ ಕೇಂದ್ರಗಳು, ಶಿವಮೊಗ್ಗ ಒನ್ ಕೇಂದ್ರ, ಎಸಿ ಮತ್ತು ತಹಶೀಲ್ದಾರ್ ಕಚೇರಿಗೆ ದಾಖಲೆಗಳೊಂದಿಗೆ ಭೇಟಿ ನೀಡಬಹುದಾಗಿದೆ. ಉಚಿತ ದೂರವಾಣಿ ಸಂಖ್ಯೆ 1950ಗೆ ಕರೆ ಮಾಡಿ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ ಎಂದು ಹೇಳಿದರು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಸಹಕರಿಸಲು ಎಲ್ಲಾ ರಾಜಕೀಯ ಪಕ್ಷಗಳು ಪ್ರತಿ ಮತಗಟ್ಟೆ ವ್ಯಾಪ್ತಿಯಲ್ಲಿ ಮತಗಟ್ಟೆ ಸಹಾಯಕರನ್ನು ನೇಮಕ ಮಾಡುವಂತೆ ಅವರು ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದರು.
ಜಿಲ್ಲೆಯಲ್ಲಿ ಪ್ರಸ್ತುತ 1775 ಮತಗಟ್ಟೆಗಳಿದ್ದು ಒಟ್ಟು 14,24,985 ಮತದಾರರು ಇದ್ದಾರೆ. ಇವರಲ್ಲಿ 710456 ಪುರುಷ ಮತದಾರರು ಹಾಗೂ 714529 ಮಹಿಳಾ ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
MUST WATCH
ಹೊಸ ಸೇರ್ಪಡೆ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.