ಕಲಾ ಮಾಧ್ಯಮದ ಹಿಂದಿದೆ ಸಮಾಜ ಜಾಗೃತಿಯ ಆಶಯ


Team Udayavani, Jan 22, 2022, 9:03 PM IST

ಚವಬಗಜಹಗಗ

ಸಾಗರ: ನೃತ್ಯ, ಸಂಗೀತ, ನಾಟಕ ಮುಂತಾದ ಕಲೆಗಳು ಕೇವಲ ಮನರಂಜನೆ ಮಾಧ್ಯಮ ಮಾತ್ರ ಅಲ್ಲ. ಸಮಾಜವನ್ನು ಎಚ್ಚರಗೊಳಿಸುವ ಆಶಯವೂ ಕಲಾ ಮಾಧ್ಯಮದ ಹಿಂದಿದೆ ಎಂದು ತುಮರಿ ಕಿನ್ನರ ಮೇಳದ ಸಂಚಾಲಕ, ರಂಗಕರ್ಮಿ ಕೆ.ಜಿ. ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.

ಇಲ್ಲಿನ ಶ್ರೀನಗರದ ನೃತ್ಯ ಭಾಸ್ಕರ ಸಭಾಂಗಣದಲ್ಲಿ ನಾಟ್ಯತರಂಗ ಟ್ರಸ್ಟ್‌ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಸಂಸ್ಕೃತಿ ಸಪ್ತಾಹದ ನಾಲ್ಕನೇ ದಿನದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಂದಿನ ಒತ್ತಡದ ಸಂದರ್ಭದಲ್ಲಿ ಕಲಾ ಪ್ರಕಾರಗಳು ನಮ್ಮ ದೇಹ ಮತ್ತು ಮನಸ್ಸನ್ನು ಚೈತನ್ಯಗೊಳಿಸುತ್ತದೆ. ಹೀಗೆ ಮಾಡಿದಾಗ ನಾವು ಸಮಾಜದ ಜತೆ ಸೇರಿಕೊಳ್ಳಲು ಸಾಧ್ಯವಾಗುತ್ತದೆ. ಇಂಥ ಕೆಲಸವನ್ನು ಕಲೆ ಮಾಡುತ್ತಿದೆ. ಜನಾರ್ದನ್‌ ಅವರು ಈ ಪ್ರಾಂತ್ಯದಲ್ಲಿ ಕಳೆದ 30 ವರ್ಷಗಳಿಂದ ನೃತ್ಯದ ಮೂಲಕ ಹೊಸ ಎಚ್ಚರವನ್ನು ಮೂಡಿಸುತ್ತಿದ್ದಾರೆ. ಸಮಾಜದಲ್ಲಿ ನೃತ್ಯ ಸಂಗೀತದ ಕುರಿತು ಅಭಿರುಚಿ ಬೆಳೆಯಲು ನಾಟ್ಯತರಂಗ ಕಾರಣವಾಗಿದೆ. ಇಲ್ಲವಾದರೆ ವಿದ್ಯಾರ್ಥಿಗಳು ಕಲಿಯಲು ಸಾಧ್ಯವಾಗುತ್ತಿರಲಿಲ್ಲ ಎಂದರು. ಕಲೆಯ ಮೇಲಿನ ಗೌರವವಿಟ್ಟುಕೊಂಡ ಪೋಷಕರು ತಮ್ಮ ಮಕ್ಕಳು ಶ್ರೇಷ್ಠ ನೃತ್ಯಗಾರ ಆಗಬೇಕೆಂಬ ಮಹಾತ್ವಾಕಾಂಕ್ಷೆ ಇಟ್ಟುಕೊಂಡೇ ಕಳಿಸುವುದಿಲ್ಲ.

ಆದರೆ ಅವರು ಈ ಕಲೆಯಲ್ಲಿ ತನ್ನ ವ್ಯಕ್ತಿತ್ವವನ್ನು ವಿಕಸಿಸಿಕೊಳ್ಳಲು ಸಾಧ್ಯವಿದೆ ಎಂಬುದನ್ನು ಕಂಡುಕೊಂಡಿದ್ದಾರೆ. ಆ ನಂಬಿಕೆಯಿಂದ ನೃತ್ಯ ತರಗತಿಗೆ ಮಕ್ಕಳನ್ನು ಕಳಿಸುತ್ತಿದ್ದಾರೆ. ಇಲ್ಲಿ ಕಲಿತವರು ಮುಂದೆ ದೊಡ್ಡ ಕಲಾವಿದರೂ ಆಗಬಹುದು ಎಂದರು. ನಗರಸಭೆ ಸದಸ್ಯೆ ಭಾವನಾ ಎಸ್‌. ಮಾತನಾಡಿ, ಕಲೆ, ಸಾಹಿತ್ಯ, ಸಂಗೀತ ಮುಂತಾದ ಸಾಂಸ್ಕೃತಿಕ ಚಟುವಟಿಕೆಗಳು ಆ ಊರಿನ ಒಂದು ಹೆಗ್ಗಳಿಕೆ. ತಾಲೂಕಿನಲ್ಲಿ ಹಲವಾರು ಸಾಂಸ್ಕೃತಿಕ ತಂಡಗಳು ನಿರಂತರ ಚಟುವಟಿಕೆಯಲ್ಲಿವೆ. ಇವು ಜನರಲ್ಲಿ ಕಲಾಭಿರುಚಿಯನ್ನು ಬೆಳೆಸಿ ಪೋಷಿಸಿಕೊಂಡು ಬರುತ್ತಿವೆ. ನಮ್ಮದು ಸಾಂಸ್ಕೃತಿಕ ತಾಲೂಕು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ ಎಂದರು.

ಬೆಂಗಳೂರಿನ ಶಿಕ್ಷಣ ಸಂಯೋಜಕಿ, ಕಲಾವಿದೆ ಗೌರಿ ಎಸ್‌. ಭಟ್‌ ಮಾತನಾಡಿ, ಮಕ್ಕಳಿಗೆ ಪಠ್ಯದ ಜೊತೆ ಕಲಾ ಪ್ರಕಾರಗಳ ಸಾಂಗತ್ಯ ಹೆಚ್ಚು ಕ್ರಿಯಾಶೀಲತೆಯನ್ನು ಒದಗಿಸಿಕೊಡುತ್ತವೆ. ನೃತ್ಯ, ಸಂಗೀತ, ಭರತನಾಟ್ಯ ಕಲೆಗಳಿಗೆ ಮಕ್ಕಳಲ್ಲಿ ಒತ್ತಡ ಕಡಿಮೆ ಮಾಡುವ ಶಕ್ತಿ ಇದೆ. ಓದುವ ವಿದ್ಯಾರ್ಥಿಗಳಿಗೆ ಕಲಾಭ್ಯಾಸ ತೊಡಕುಂಟು ಮಾಡುತ್ತದೆ ಎಂಬ ಮನೋಭಾವವನ್ನು ಪೋಷಕರು ದೂರ ಮಾಡಿ, ಪಠ್ಯದ ಜೊತೆ ನೃತ್ಯ ಕಲಿತು ನಿರಂತರ ಅದನ್ನು ನಿಭಾಯಿಸಿಕೊಂಡು ಹೋಗಲು ಪ್ರೋತ್ಸಾಹ ನೀಡಬೇಕು. ಇದು ಅವರಲ್ಲಿ ಮೌಲ್ಯ, ಸಂಸ್ಕಾರ, ಸಂಸ್ಕೃತಿ ಕಲಿಸುತ್ತದೆ.

ಆಸಕ್ತಿ ಇರುವ ಮಕ್ಕಳಿಗೆ ಇಂಥ ಅವಕಾಶ ಕೊಡಿ ಎಂದು ಸಲಹೆ ನೀಡಿದರು. ನಾಟ್ಯತರಂಗ ಟ್ರಸ್ಟ್‌ ಅಧ್ಯಕ್ಷ ವಿದ್ವಾನ್‌ ಜಿ.ಬಿ. ಜನಾರ್ದನ್‌ ಅಧ್ಯಕ್ಷತೆ ವಹಿಸಿದ್ದರು. ನಂದಿನಿ ಸ್ವಾಗತಿಸಿದರು. ವಸುಧಾ ವಂದಿಸಿದರು. ಅರ್ಚನಾ ಹೆಗಡೆ ನಿರೂಪಿಸಿದರು. ನಂತರ ವಿದುಷಿ ಸಮನ್ವಿತಾ “ಭರತ ನೃತ್ಯ’ ಪ್ರದರ್ಶನ ನೀಡಿದರು. ಬೆಂಗಳೂರಿನ ನಾಟ್ಯತರಂಗ ತಂಡದವರು ಉತ್ತುಕ್ಕಾಡು ವೆಂಕಟಸುಬ್ಬಯ್ಯನವರ ಕೃತಿಗಳ ನೃತ್ಯ ಪ್ರದರ್ಶನ “ಉತ್ತುಕ್ಕಾಡು ನಮನ’ ನೀಡಿದರು.

 

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

B.-Y.-Raghavendra

B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.