ಶಿಕ್ಷಣ ಪಡೆದು ಸ್ವಯಂ ಉದ್ಯೋಗಿಗಳಾಗಿ
Team Udayavani, Mar 1, 2019, 12:01 PM IST
ಶಿವಮೊಗ್ಗ: ಸಫಾಯಿ ಕರ್ಮಚಾರಿಗಳ ಮಕ್ಕಳು ಉತ್ತಮ ಶಿಕ್ಷಣ ಪಡೆದುಕೊಂಡು ಸ್ವಯಂ ಉದ್ಯೋಗಕ್ಕೆ ಮುಂದಾಗಬೇಕು ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹಿರೇಮನೆ ಅವರು ತಿಳಿಸಿದರು.
ಗುರುವಾರ ಜಿಲ್ಲಾ ಒಕ್ಕಲಿಗರ ಭವನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಸಭೆ ಹಾಗೂ ಆರೋಗ್ಯ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಶತಮಾನಗಳಿಂದ ದೇಶದ ಜನರ ಆರೋಗ್ಯ ಮತ್ತು ಸ್ವತ್ಛತೆ ಕಾಪಾಡಿಕೊಂಡು ಬರುವಲ್ಲಿ ಸಫಾಯಿ ಕರ್ಮಚಾರಿಗಳು
ಮಹತ್ತರವಾದ ಪಾತ್ರವನ್ನು ವಹಿಸುತ್ತಿದ್ದಾರೆ.
ಸರ್ಕಾರ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಈ ಕಲ್ಯಾಣ ಕಾರ್ಯಕ್ರಮಗಳ ಕುರಿತು ಅವರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ನಡೆಸುವ ಅಗತ್ಯವಿದೆ ಎಂದರು.
ಸಫಾಯಿ ಕರ್ಮಚಾರಿಗಳಿಗೆ ಕನಿಷ್ಟ ವೇತನವನ್ನು ನೀಡಲು ಈಗಾಗಲೇ ಆದೇಶಿಸಲಾಗಿದ್ದು, ಇದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಸಫಾಯಿ ಕರ್ಮಚಾರಿಗಳಿಗೆ ವಸತಿ ವ್ಯವಸ್ಥೆ, ಸ್ವತ್ಛತಾ ಉಪಕರಣಗಳ ಪೂರೈಕೆ, ಕನಿಷ್ಟ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣಾ ಶಿಬಿರಗಳು, ನೇರ ಸಂಬಳ ಪಾವತಿ ಸೌಲಭ್ಯ ಇತ್ಯಾದಿಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಸಫಾಯಿ ಕರ್ಮಚಾರಿಗಳಿಗೆ ಮನೆ ನಿರ್ಮಾಣಕ್ಕಾಗಿ ನಿವೇಶನ ಒದಗಿಸುವಿಕೆ, ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಪಡೆಯಲು ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸಬೇಕು ಎಂದು ಹೇಳಿದರು.
ಆರೋಗ್ಯ ತಪಾಸಣೆ: ಪೌರ ಕಾರ್ಮಿಕರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗಿತ್ತು. ತಜ್ಞ ವೈದ್ಯರು ಶಿಬಿರದಲ್ಲಿ ಹಾಜರಿದ್ದು, ಪೌರ ಕಾರ್ಮಿಕರ ಆರೋಗ್ಯ ತಪಾಸಣಾ ಕಾರ್ಯ ಕೈಗೊಂಡರು.
ಸನ್ಮಾನ: ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಿವರಾಮೇಗೌಡ, ಮಹಾನಗರ ಪಾಲಿಕೆ ಮೇಯರ್ ಲತಾ ಗಣೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧಾ, ನಗರಾಭಿವೃದ್ಧಿ ಯೋಜನಾ ಕೋಶದ ನಿರ್ದೇಶಕ ಪ್ರಮೋದ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.