![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 18, 2024, 5:05 PM IST
ಸಾಗರ: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಾಗರ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ 198 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ ಸಾಗರ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಪತ್ರಕರ್ತರ ಜೊತೆ ಮಾತನಾಡಿದ ಅವರು, ವಿಪಕ್ಷದವರು ಹಣ ಬಂದಿಲ್ಲ ಎಂದು ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳು ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಹೆಚ್ಚುವರಿಯಾಗಿ 25 ಕೋಟಿ ರೂ. ಅನುದಾನ ನೀಡಿದ್ದಾರೆ.
ನಗರೋತ್ಥಾನ ಯೋಜನೆಗೆ ಹೆಚ್ಚಿನ ಹಣ ಮಂಜೂರು ಮಾಡಿಸಲಾಗಿದೆ. ತಾಲೂಕಿನ ಆಸ್ಪತ್ರೆಗಳಲ್ಲಿನ ಮೂಲಭೂತ ಸೌಲಭ್ಯಕ್ಕಾಗಿ 142 ಲಕ್ಷ ರೂ., ಆಸ್ಪತ್ರೆಗಳ ಅಭಿವೃದ್ಧಿಗೆ 4.16 ಕೋಟಿ ರೂ., ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ 2.50 ಕೋಟಿ ರೂ., ಸಣ್ಣ ನೀರಾವರಿ ವಿಭಾಗಕ್ಕೆ 11.50 ಕೋಟಿ ರೂ., ಆರ್‌ಟಿಓ ಕಚೇರಿ ಆವರಣದಲ್ಲಿ ಡ್ರೈವಿಂಗ್ ಟ್ರ್ಯಾಕ್ ನಿರ್ಮಾಣಕ್ಕೆ ೫.೬೫ ಕೋಟಿ ಸೇರಿದಂತೆ ಬೇರೆಬೇರೆ ವಿಭಾಗದಲ್ಲಿ ಹಣ ಮಂಜೂರಾಗಿದ್ದು ಕಾಮಗಾರಿ ನಡೆಯುತ್ತಿದೆ. ನಗರೋತ್ಥಾನ ಸೇರಿದಂತೆ ನಗರ ಪ್ರದೇಶದ ಅಭಿವೃದ್ಧಿಗೆ ಈತನಕ 50 ಕೋಟಿ ರೂ. ಮಂಜೂರು ಮಾಡಿಸಿದ್ದೇನೆ. ಸಬ್ ಜೈಲ್ ಕಾಂಪೌಂಡ್ ನಿರ್ಮಾಣಕ್ಕೆ 1.50 ಕೋಟಿ ರೂ. ಬಿಡುಗಡೆಯಾಗಿದೆ ಎಂದರು.
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶವನ್ನು 185 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದ್ದು ಈತನಕ 20 ಕೋಟಿ ರೂ. ಮಾತ್ರ ಮಂಜೂರಾಗಿದೆ.
ಬಾಕಿ ಹಣ ಬಿಡುಗಡೆ ಮಾಡುವಂತೆ ಸಚಿವರ ಮೇಲೆ ಒತ್ತಡ ಹೇರಲಾಗಿದೆ. ಶರಾವತಿ ಹಿನ್ನೀರಿನಲ್ಲಿ ಅಗತ್ಯ ಇರುವ ಕಡೆಗಳಲ್ಲಿ ರ‍್ಯಾಂಪ್ ನಿರ್ಮಾಣ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಹಿನ್ನೀರು ಕಡಿಮೆಯಾಗಿ ಸ್ಥಳೀಯ ನಿವಾಸಿಗಳಿಗೆ ಲಾಂಚ್ ಸಂಚಾರಕ್ಕೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಹೇಳಿದರು.
ಗಣಪತಿ ಕೆರೆ ದಂಡೆಯಲ್ಲಿರುವ ಉದ್ಯಾನವನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ನೀಲನಕ್ಷೆ ತಯಾರಿಸಲಾಗಿದೆ. ಇದರ ಜೊತೆಗೆ ಮಕ್ಕಳ ಉದ್ಯಾನವನವೊಂದನ್ನು ನಿರ್ಮಿಸುವ ಉದ್ದೇಶ ಸಹ ಹೊಂದಲಾಗಿದೆ. ಗಣಪತಿ ದೇವಸ್ಥಾನದ ಎದುರು ಭಾಗದಲ್ಲಿ ನಕ್ಷತ್ರವನ ನಿರ್ಮಾಣ ಮಾಡುವ ಜೊತೆಗೆ ಕೆರೆಕೋಡಿ ಆಂಜನೇಯಸ್ವಾಮಿ ದೇವಸ್ಥಾನದ ಪಕ್ಕ ಸಂಜೆ ವೇಳೆ ವಾಯುವಿಹಾರಿಗಳಿಗೆ ಕುಳಿತುಕೊಳ್ಳಲು ಸ್ಥಳಾವಕಾಶ ಕಲ್ಪಿಸುವ ಚಿಂತನೆ ನಡೆಸಲಾಗಿದೆ.
ಕ್ಷೇತ್ರವ್ಯಾಪ್ತಿಯಲ್ಲಿ ದ್ವೇಷದ ರಾಜಕಾರಣ ನಾನು ಮಾಡುತ್ತಿದ್ದೇನೆ ಎಂದು ವಿಪಕ್ಷಗಳು ಸುಳ್ಳುಸುದ್ದಿ ಹರಡುತ್ತಿದೆ. ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಜನರಿಗೆ ಗೊತ್ತಿದೆ. ಅಯೋಧ್ಯೆಯಲ್ಲಿ ರಾಮನ ಪ್ರಾಣಪ್ರತಿಷ್ಟೆಯಂದು ರಾಜ್ಯ ಸರ್ಕಾರದ ಸೂಚನೆಯಂತೆ ಎಲ್ಲ ದೇವಸ್ಥಾನದಲ್ಲೂ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೆ.ಹೊಳೆಯಪ್ಪ, ಗಣಪತಿ ಮಂಡಗಳಲೆ, ಸುರೇಶಬಾಬು, ಸೋiಶೇಖರ ಲ್ಯಾವಿಗೆರೆ, ಚೇತನರಾಜ್ ಕಣ್ಣೂರು, ತಾರಾಮೂರ್ತಿ, ಗಿರೀಶ್ ಕೋವಿ, ಜಾಕೀರ್, ಸುಧಾ ಗಂಗಾಧರ್ ಇನ್ನಿತರರು ಹಾಜರಿದ್ದರು.
ಇದನ್ನೂ ಓದಿ: Karwar; ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.