ಮದ್ಯಪಾನ ನಿಷೇಧಕ್ಕೆ ಒತ್ತಾಯ

Team Udayavani, Jun 5, 2020, 6:00 PM IST

5-June-29

ಸಾಂದರ್ಭಿಕ ಚಿತ್ರ

ಭದ್ರಾವತಿ: ರಾಜ್ಯದಲ್ಲಿ ಮದ್ಯಪಾನ ನಿಷೇಧ ಮಾಡುವಂತೆ ಹಾಗೂ ಮೈಕ್ರೋ ಫೈನಾನ್ಸ್‌ ಹಾವಳಿ ನಿಯಂತ್ರಿಸುವಂತೆ ಕೋರಿ ಸಂಯುಕ್ತ ಜನತಾದಳದಿಂದ ಮಿನಿ ವಿಧಾನ ಸೌಧದ ಮುಂದೆ ಕೆಲ ಕಾಲ ಸತ್ಯಾಗ್ರಹ ನಡೆಸಿ ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಮದ್ಯಪಾನ ನಿಷೇಧ ಮಾಡುವುದರಿಂದ ಅಸಂಖ್ಯಾತ ಬಡ ಕುಟುಂಬಗಳು ನೆಮ್ಮದಿಯುತ ಜೀವನ ನಡೆಸಲು ಸಾಧ್ಯವಾಗುತ್ತದೆ. ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ನಾಗರಿಕರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಈಗಿನ ಮುಖ್ಯಮಂತ್ರಿಗಳು ಈ ಹಿಂದೆ ಉಪ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಸಾರಾಯಿ ನಿಷೇಧಗೊಳಿಸಿದ್ದನ್ನು ಈಗಲೂ ಜನತೆ ಸ್ಮರಿಸುತ್ತಾರೆ. ಆದ್ದರಿಂದ ಈಗ ಮದ್ಯಪಾನ ನಿಷೇಧ ಜಾರಿಗೆ ತರುವ ಮೂಲಕ ಬರಲಿರುವ ಗಾಂಧಿ ಜಂಯಂತಿಗೆ ವಿಶಿಷ್ಟ ಕೊಡುಗೆ ನೀಡಿದಂತಾಗುತ್ತದೆ ಎಂದರು.

ರಾಜ್ಯದಲ್ಲಿ 55ಕ್ಕೂ ಅಧಿಕ ಮೈಕ್ರೋ ಫೈನಾನ್ಸ್‌ಗಳು ಆರ್‌ಬಿಐ ಮಾರ್ಗಸೂಚಿ ನಿಯಮಕ್ಕೆ ವಿರುದ್ಧವಾಗಿ ಕಾರ್ಯ ನಿರ್ವಹಿಸುತ್ತಾ ಸಾರ್ವಜನಿಕರಿಗೆ, ಮಹಿಳೆಯರಿಗೆ ಸಾಲ ವಸೂಲಾತಿಗೆ ಕಿರುಕುಳ ನೀಡುತ್ತಾ ಆರ್ಥಿಕವಾಗಿ ಅವರನ್ನು ಶೋಷಣೆ ಮಾಡುತ್ತಿವೆ. ಆದ್ದರಿಂದ ಅಂತಹ ಮೈಕ್ರೋ ಫೈನಾನ್ಸ್‌ಗಳ ಪರವಾನಗಿ ರದ್ದುಗೊಳಿಸಿ ಬಡಜನರ ಫೈನಾನ್ಸ್‌ ಸಾಲ ಮನ್ನಾ ಮಾಡಬೇಕು ಎಂದರು.

ಅಡುಗೆ ಅನಿಲ ಸಿಲಿಂಡರ್‌ ವಿತರಿಸುವ ಗ್ಯಾಸ್‌ ಏಜೆನ್ಸಿಯವರು ಬಿಲ್‌ನಲ್ಲಿ ನಮೂದಿತವಾದ ಮೊತ್ತಕ್ಕಿಂತ ಅಧಿ ಕವಾಗಿ ರೂ. 30ರಿಂದ 40 ರವರೆಗೆ ಹೆಚಿನ ಹಣವನ್ನು ಗ್ರಾಹಕರಿಂದ ಪಡೆಯುವ ಮೂಲಕ ಸಾರ್ವಜನಿಕರ ಶೋಷಣೆ ಮಾಡುತ್ತಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಪೊಲೀಸ್‌ ಆಯುಕ್ತರಾಗಿದ್ದ ಔರಾದ್‌ಕರ್‌ ವರದಿ ಜಾರಿಗೆ ತರುವ ಮೂಲಕ ಪೊಲೀಸರಿಗೆ ಹೆಚ್ಚಿನ ಸೌಲಭ್ಯ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಈಗಾಲೇ ಶಾಲೆಗಳನ್ನು ತೆರಯಬಾರದು. ಈ ನಮ್ಮ ಬೇಡಿಕೆಗಳು ಈಡೇರದಿದ್ದರೆ ಪಕ್ಷದ ವತಿಯಿಂದ ರಾಜ್ಯಾದ್ಯಂತ ಶಾಂತಿಯುತ ಹೋರಾಟ ಮಾಡಲಾಗುವುದು ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್‌ ಎಸ್‌. ಗೌಡ ತಿಳಿಸಿ ತಹಶೀಲ್ದಾರ್‌ ಶಿವಕುಮಾರ್‌ ಆವರಿಗೆ ಮನವಿ ಸಲ್ಲಿಸಿದರು. ಸುಬ್ಬೇಗೌಡ, ರವಿನಾಯ್ಕ, ರವಿ, ಚಂದ್ರಶೇಖರ್‌ ಇದ್ದರು.

ಟಾಪ್ ನ್ಯೂಸ್

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ

6-hosanagar

Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ

K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ

Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ

Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.