ಡಾ| ಕೊಟ್ರೇಶಪ್ಪ ತಾಪಂ ಇಒ
Team Udayavani, Jun 5, 2020, 5:50 PM IST
ಭದ್ರಾವತಿ: ನೂತನ ತಾಪಂ ಕಾರ್ಯ ನಿರ್ವಹಣಾಧಿಕಾರಿಯಾಗಿ ಡಾ| ಕೊಟ್ರೇಶಪ್ಪ ಅಧಿಕಾರ ಸ್ವೀಕರಿಸಿದರು.
ಭದ್ರಾವತಿ: ನೂತನ ತಾಪಂ ಕಾರ್ಯ ನಿರ್ವಹಣಾಧಿಕಾರಿಯಾಗಿ ಡಾ| ಕೊಟ್ರೇಶಪ್ಪ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ಈ ಹಿಂದಿನ ಕಾರ್ಯ ನಿರ್ವಹಣಾಧಿಕಾರಿಗಳಾದ ತಮ್ಮಣ್ಣ ಗೌಡರ ಕಾರ್ಯವೈಖರಿಯನ್ನು ಪ್ರಶ್ನಿಸಿ ತಾಪಂ ಸದಸ್ಯರು ಅವರ ವರ್ಗಾವಣೆಗೆ ಆಗ್ರಹಿಸಿ ಬುಧವಾರ ತಾಪಂ ಅಧ್ಯಕ್ಷೆ ಆಶಾ ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಜಿಪಂ ಸಿಇಒ ಅವರು ಪ್ರತಿಭಟನಾನಿರತರ ಜೊತೆ ದೂರವಾಣಿ ಮೂಲಕ ಮಾತನಾಡಿ ಗುರುವಾರದೊಳಗಾಗಿ ನೂತನ ಅಧಿಕಾರಿಯನ್ನು ಆ ಸ್ಥಾನಕ್ಕೆ ನೇಮಿಸುವ ಭರವಸೆ ನೀಡಿದ ಮೇರೆಗೆ ಸದಸ್ಯರು ಪ್ರತಿಭಟನೆ ಹಿಂಪಡೆದಿದ್ದರು.
ಆ ಪ್ರಕಾರ ಗುರುವಾರ ಇಲ್ಲಿನ ತಾಪಂ ಕಾರ್ಯ ನಿರ್ವಹಣಾಧಿಕಾರಿಗಳಾಗಿದ್ದ ತಮ್ಮಣ್ಣ ಗೌಡ ಅವರನ್ನು ಅವರ ಮೂಲ ಇಲಾಖೆಯಾದ ಶಿವಮೊಗ್ಗ ರೇಷ್ಮೆ ಇಲಾಖೆಗೆ ವರ್ಗಾವಣೆ ಮಾಡಿ ಇಲ್ಲಿ ಅವರ ಸ್ಥಾನಕ್ಕೆ ನೂತನ ತಾಪಂ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಡಾ| ಕೊಟ್ರೇಶಪ್ಪ ಅವರನ್ನು ವರ್ಗಾವಣೆ ಮಾಡಲಾಗಿದೆ. ತಮ್ಮಣ್ಣ ಗೌಡ ಅವರು ಗುರುವಾರ ನೂತನ ಕಾರ್ಯ ನಿರ್ವಹಣಾಧಿಕಾರಿ ಡಾ| ಕೊಟ್ರೇಶಪ್ಪ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ತಾಪಂ ಸದಸ್ಯ ಮಂಜುನಾಥ್ ಕದಿರೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ
Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.