ಮೈಕ್ರೋ ಫೈನಾನ್ಸ್ ಮಾಲಿಕರು-ದೂರುದಾರರ ಸಭೆ
Team Udayavani, Jun 24, 2020, 1:29 PM IST
ಭದ್ರಾವತಿ: ತಾಲೂಕು ಕಚೇರಿಯಲ್ಲಿ ಮೈಕ್ರೋ ಫೈನಾನ್ಸ್ ಮಾಲಿಕರ ಹಾಗೂ ದೂರುದಾರರ ಸಭೆ ನಡೆಯಿತು.
ಭದ್ರಾವತಿ: ಕೆಲವು ಮೈಕ್ರೋ ಫೈನಾನ್ಸ್ ಮಾಲಿಕರು ಸಾಲ ವಸೂಲಾತಿಗೆ ಮಹಿಳೆಯರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ತಾಲೂಕು ಆಡಳಿತಕ್ಕೆ ಜೆಡಿಯು ರಾಜ್ಯ ಉಪಾಧ್ಯಕ್ಷ ಶಶಿಧರಗೌಡ ದೂರು ನೀಡಿದ ಹಿನ್ನೆಲೆಯಲ್ಲಿ ಮಂಗಳವಾರ ಉಪ ತಹಶೀಲ್ದಾರ್ ರಂಗಮ್ಮ ಅವರು ತಾಲೂಕು ಕಚೇರಿಯಲ್ಲಿ ಮೈಕ್ರೋಫೈನಾನ್ಸ್ ಮಾಲಿಕರ ಹಾಗೂ ದೂರುದಾರರ ಸಭೆ ನಡೆಸಿದರು.
ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಶಿಧರಗೌಡ, ಮೈಕ್ರೋಫೈನಾನ್ಸ್‌ನಿಂದ ಸಾಲ ಪಡೆದ ಅನೇಕ ಮಹೀಳೆಯರು ಕೋವಿಡ್ ಪರಿಸ್ಥಿತಿಯಲ್ಲಿ ಸಂಕಷ್ಠದಲ್ಲಿದ್ದರೂ ಸಹ ಮೈಕ್ರೋಫೈನಾನ್ಸ್‌ನವರು ಅವರ ಮೇಲೆ ಸಾಲ ವಸೂಲಾತಿಗೆ ಒತ್ತಡ ಹೇರುತ್ತಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿದೆ. ಹಾಗಾಗಿ, ಆಗಸ್ಟ್ ತಿಂಗಳವರೆಗೆ ಸಾಲ ವಸೂಲಾತಿ ಮಾಡಬಾರದೆಂದು ಕೇಂದ್ರ ಸರ್ಕಾರ ಹೇಳಿದ್ದರೂ ವಸೂಲಾತಿ ಮಾಡುತ್ತಿದ್ದಾರೆ ಎಂದು ದೂರಿದರು.
ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಗ್ರಾಮೀಣ ಕೂಟದ ಮುಖ್ಯಸ್ಥ ಮಂಜುನಾಥ್ ಮೈಕ್ರೋಫೈನಾನ್ಸ್ ನವರು ಆರ್‌ಬಿಐ ನಿರ್ದೇಶನದ ಅನ್ವಯ ಕಾರ್ಯನಿರ್ವಹಿಸುತ್ತಿದ್ದೇವೆ. ಬಲವಂತವಾಗಿ ಸಾಲ ವಸೂಲಾತಿ ಮಾಡುತ್ತಿಲ್ಲ. ಸ್ವಯಂಪ್ರೇರಿತರಾಗಿ ಸಾಲ ಮರುಪಾವತಿ ಮಾಡುವವರಿಂದ ಹಣ ಸ್ವಿಕರಿಸುತ್ತಿದ್ದೇವೆ ಎಂದರು.
ಉಪತಹಶೀಲ್ದಾರ್ ರಂಗಮ್ಮ ಮಾತನಾಡಿ, ಕೊರೊನಾ ಪರಿಸ್ಥಿತಿಯಲ್ಲಿ ಜನರು ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಸರ್ಕಾರದ ನಿರ್ದೇಶನದಂತೆ ಆಗಸ್ಟ್
31ರ ವರಗೆ ಸಾಲ ವಸೂಲಾತಿಗೆ ಬಲವಂತ ಮಾಡಬಾರದು ಸೂಚಿಸಿದರು. ಸಭೆಯಲ್ಲಿ ಗ್ರೇಡ್ ಟೂ ತಹಶೀಲ್ದಾರ್ ಮಂಜಾ ನಾಯ್ಕ, ಕಂದಾಯಾಧಿಕಾರಿ ಮಲ್ಲಿಕಾರ್ಜುನ, ಜೆಡಿಯೂ ರಾಜ್ಯ ಸಂಘಟನಾ ಕಾರ್ಯದರ್ಶಿ ಬಾಬು ದೀಪಕ್ ಕುಮಾರ್, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಶಾಖಾಧಿಕಾರಿ ಪ್ರಸಾದ್, ರೇವಣ್ಕರ್, ವಿವಿಧ ಮೈಕ್ರೋಫೈನಾನ್ಸ್ ಪ್ರಮುಖರಾದ ವೆಂಕಟೇಶ್ ಮುಂತಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು
Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.