ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ

ವರ್ತಕರು ಅಂಗಡಿ ತೆರೆಯುವ ವಿಚಾರದಲ್ಲಿ ಇರುವ ಗೊಂದಲ ಪರಿಹರಿಸಿಕೊಳ್ಳಿ: ಶಾಸಕ ಸಂಗಮೇಶ್ವರ್‌ ಸೂಚನೆ

Team Udayavani, Apr 29, 2020, 3:40 PM IST

29-April-20

ಭದ್ರಾವತಿ: ನಗರಸಭೆ ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು

ಭದ್ರಾವತಿ: ಲಾಕ್‌ಡೌನ್‌ ಮುಗಿಯಲು ಕೆಲವೇ ದಿನ ಬಾಕಿ ಉಳಿದಿದ್ದು ಕ್ಷೇತ್ರದ ಜನತೆ ಎಂದಿನಂತೆ ಮನೆಯೊಳಗಿದ್ದು ಕೋವಿಡ್ ನಿಯಂತ್ರಿಸಲು ಸಹಕಾರ ನೀಡಬೇಕು ಎಂದು ಶಾಸಕ ಬಿ.ಕೆ. ಸಂಗಮೇಶ್ವರ್‌ ಮನವಿ ಮಾಡಿದರು.

ಕೋವಿಡ್ ಕುರಿತಂತೆ ನಗರಸಭೆ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್ ನಿಯಂತ್ರಿಸುವಲ್ಲಿ ತಾಲೂಕು ಆಡಳಿತ ಸಾಕಷ್ಟು ಶ್ರಮ ವಹಿಸುತ್ತಿದೆ. ತಾಲೂಕಿನ ಗಡಿ ಭಾಗಗಳಲ್ಲಿರುವ ಚೆಕ್‌ಪೋಸ್ಟ್‌ಗಳಲ್ಲಿ ರೈತರಿಗೆ, ಕೂಲಿ ಕಾರ್ಮಿಕರಿಗೆ, ಕಟ್ಟಡ ಕಾರ್ಮಿಕರಿಗೆ, ಲಾರಿ ಮಾಲೀಕರಿಗೆ ಪೊಲೀಸರು ತೊಂದರೆ ಕೊಡುತ್ತಿದ್ದಾರೆ ಎಂಬ ದೂರುಗಳು ಕೇಳಿ ಬರುತ್ತಿವೆ. ವರ್ತಕರು ಅಂಗಡಿ ತೆರೆಯುವ ವಿಚಾರದಲ್ಲಿಯೂ ಕೆಲವು ಗೊಂದಲಗಳಿವೆ. ಕೆಲವು ಭಾಗದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇರುವುದಾಗಿ ಕೇಳಿ ಬರುತ್ತಿದೆ. ಅವುಗಳನ್ನು ಸಂಬಂಧಿಸಿದ ಅ ಧಿಕಾರಿಗಳು ಪರಿಹರಿಸಿ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದರು.

ತಾಲೂಕು ಆರೋಗ್ಯಾ ಧಿಕಾರಿ ಡಾ| ಎಂ.ಆರ್‌. ಗಾಯತ್ರಿ ಮಾತನಾಡಿ, ವಿದೇಶದಿಂದ ಬಂದಿದ್ದ 87 ಜನರಲ್ಲಿ 86 ಜನರ ಕ್ವಾರಂಟೈನ್‌ ಮುಗಿದಿದ್ದು ಅಂತರ ರಾಜ್ಯದಿಂದ 342 ಜನ ಬಂದಿದ್ದು 245 ಜನರು ಮುಗಿಸಿದ್ದಾರೆ, ಹೊರಜಿಲ್ಲೆಯಿಂದ 6559 ಜನ ಬಂದಿದ್ದು 5048 ಜನ ಕ್ವಾರಂಟೈನ್‌ ಮುಗಿಸಿದ್ದು ಇನ್ನುಳಿದ 1491 ಜನರ ಕ್ವಾರಂಟೈನ್‌ ಮುಗಿಯಬೇಕಾಗಿದೆ. ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ ಎಂದು ತಿಳಿಸಿದರು.

ಕೃಷಿ ಇಲಾಖೆ ಅಧಿಕಾರಿ ಬಿ.ಸಿ. ಶಶಿಧರ್‌ ಮಾತನಾಡಿ, ತಾಲೂಕಿನಲ್ಲಿ ಭತ್ತ ಕಟಾವು ಹಂತಕ್ಕೆ ಬಂದಿದ್ದು ಕಟಾವು ಮಾಡಲು ತಮಿಳುನಾಡಿನಿಂದ ಕಟಾವು ಯಂತ್ರದ ಲಾರಿಗಳು ಬರುತ್ತಿವೆ. ಆದರೆ ಕೆಲ ಲಾರಿಗಳಿಗೆ ತಾಲೂಕಿನ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ತಡೆಹಿಡಿಯುತ್ತಿದ್ದಾರೆ ಎಂದು ದೂರಿದರು. ತಹಶೀಲ್ದಾರ್‌ ಸೋಮಶೇಖರ್‌ ಮಾತನಾಡಿ, ತಮಿಳು ನಾಡಿನಿಂದ ಬರುವ ಲಾರಿ ಡ್ರೈವರ್‌ ಹಾಗೂ ಸಹಾಯಕರೊಂದಿಗೆ ಸ್ಥಳೀಯ ರೈತರು ನೇರವಾಗಿ ಮಾತುಕತೆಗಳು ನಡೆಸದಂತೆ ನೋಡಿಕೊಳ್ಳಿ, ಲಾರಿ ಚಾಲಕರು ಇಲ್ಲಿನ ಟ್ರಾನ್ಸ್‌ಪೋರ್ಟ್‌ ಆಪೀಸಿನಲ್ಲಿ ಉಳಿದುಕೊಂಡಲ್ಲಿ ಅವರನ್ನು ಇಲ್ಲಿಯ ಜನರೊಂದಿಗೆ ರೆಯದಂತೆ ನೋಡಿಕೊಳ್ಳಿ. ಎಲ್ಲರ ಆರೋಗ್ಯ ತಪಾಸಣೆ ಕಡ್ಡಾಯ ಎಂದರು.

ತೋಟಗಾರಿಕೆ ಇಲಾಖೆ ಅಧಿಕಾರಿ ಕಾಂತರಾಜ್‌ ಮಾತನಾಡಿ, ಎಲ್ಲೆಡೆ ಬಾಳೆ ಬೆಳೆ ಅಧಿಕವಾಗಿದೆ. ಕೊಳ್ಳಲು ವ್ಯಾಪಾರಸ್ಥರು ಮುಂದೆ ಬರುತ್ತಿಲ್ಲ. ಕೆಜೆ ಬಾಳೆಹಣ್ಣಿನ ಬೆಲೆ 10 ರೂ. ಆಗಿದೆ. ಟ್ರಾನ್ಸ್‌ಪೊàರ್ಟ್‌ ಖರ್ಚು ಸಹ ತುಂಬಲು ಸಾಧ್ಯವಾಗದಂತಾಗಿದೆ. ಎಪಿಎಂಸಿಯಲ್ಲಿಯೂ ಉತ್ತಮ ಬೆಲೆ ಸಿಗದ ಹಿನ್ನೆಲೆಯಲ್ಲಿ ರೈತನೇ ನೇರವಾಗಿ ಮಾರಾಟ ಮಾಡಲು ಹೋದರೆ ಪೊಲೀಸರಿಂದ ತೊಂದರೆಯಾಗುತ್ತಿದೆ ಎಂದರು. ತಾಪಂ ಇಒ ತಮ್ಮಣ್ಣಗೌಡ, ಪೌರಾಯುಕ್ತ ಮನೋಹರ್‌ ಮಾತನಾಡಿದರು.  ಸಭೆಯಲ್ಲಿ ಡಿವೈಎಸ್‌ಪಿ ಸುಧಾಕರ್‌ ನಾಯ್ಕ, ಶಿಶು ಅಭಿವೃದ್ಧಿ ಅಧಿಕಾರಿ ಸುರೇಶ್‌, ತಾಲೂಕು ವೈದ್ಯಾ ಧಿಕಾರಿ ಡಾ| ಮಲ್ಲಪ್ಪ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

CKM-areca

ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ

Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ

Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ

Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ

Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bike

ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ತುಂಡಾಗಿ ಬಿದ್ದ ಕೊಂಬೆ;ಸವಾರರಿಗೆ ಗಂಭೀರ ಗಾಯ, ಮೂಳೆ ಮುರಿತ

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ

7-ks-eshwarappa

State Govt ಗೋ ಹಂತಕರಿಗೆ ಬೆಂಬಲ ನೀಡುತ್ತಿದೆ, ಹಿಂದೂಗಳನ್ನು ನಿರ್ಲಕ್ಷಿಸುತ್ತಿದೆ:ಈಶ್ವರಪ್ಪ

Sagara-Beluru

Congress: ಪಕ್ಷದ ಶಾಸಕರು ಹೈಕಮಾಂಡ್ ಸೂಚನೆ ಪಾಲಿಸುವ ವಿಶ್ವಾಸವಿದೆ: ಬೇಳೂರು ಗೋಪಾಲಕೃಷ್ಣ

Monkey Disease: ಈ ವರ್ಷದ ಮೊದಲ ಪ್ರಕರಣ ಪತ್ತೆ; ಇಬ್ಬರಿಗೆ ಪಾಸಿಟಿವ್

KFD: ಈ ವರ್ಷದ ಮೊದಲ ಪ್ರಕರಣ ಪತ್ತೆ; ಇಬ್ಬರಿಗೆ ಪಾಸಿಟಿವ್

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

CKM-areca

ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.