ಪ್ರಾಮಾಣಿಕತೆ ಮೆರೆದ ಅಂಚೆ ಇಲಾಖೆ ನೌಕರರು
Team Udayavani, Jun 5, 2020, 1:15 PM IST
ಭದ್ರಾವತಿ: ಪೋಸ್ಟ್ ಮಾಸ್ಟರ್ ವಿ. ಶ್ರೀಧರ್ ಪರ್ಸ್ ಅನ್ನು ಬೋರಯ್ಯ ಅವರಿಗೆ ನೀಡಿದರು.
ಭದ್ರಾವತಿ: ಅಂಚೆ ಕಚೇರಿಗೆ ಬಂದಿದ್ದ ಗ್ರಾಹಕರೊಬ್ಬರು ಅಲ್ಲಿಯೇ ಮರೆತು ಬಿಟ್ಟು ಹೋಗಿದ್ದ ದಾಖಲೆ ಹಾಗೂ ಹಣವಿದ್ದ ಪರ್ಸ್ ಅನ್ನು ಅವರಿಗೆ ಹಿಂತಿರುಗಿಸುವ ಮೂಲಕ ನಗರದ ಮುಖ್ಯ ಅಂಚೆ ಕಚೇರಿ ನೌಕರರು ಪ್ರಾಮಾಣಿಕತೆ ಮೆರೆದಿದ್ದಾರೆ.
ಹೊಸಮನೆಯ ಬೋರಯ್ಯ ಎನ್ನುವವರು ಬುಧವಾರ ಬೆಳಗ್ಗೆ ಕೆಲಸದ ನಿಮಿತ್ತ ನಗರದ ಮುಖ್ಯ ಅಂಚೆ ಕಚೇರಿಗೆ ಬಂದು ಕೆಲಸ ಮುಗಿಸಿ ಹಿಂತಿರುಗುವ ವೇಳೆ ರೈಟಿಂಗ್ ಡೆಸ್ಕ್ ಮೇಲೆಯೇ ತಮ್ಮ ಪರ್ಸ್ ಮರೆತು ಹೋಗಿದ್ದರು. ಇದೇ ಕಚೇರಿಯಲ್ಲಿ ತಾತ್ಕಾಲಿಕ ಅಟೆಂಡರ್ ಜಾರ್ಜ್ ಎನ್ನುವವರು ಈ ಪರ್ಸನ್ನು ಗಮನಿಸಿ ಪೋಸ್ಟ್ ಮಾಸ್ಟರ್ ವಿ. ಶ್ರೀಧರ್ ಅವರಿಗೆ ನೀಡಿದ್ದಾರೆ. ಇದನ್ನು ಇನ್ಸ್‌ಪೆಕ್ಟರ್ ಪ್ರಹ್ಲಾದ್ ಅವರ ಸಮ್ಮುಖದಲ್ಲಿ ತೆರೆದು ನೋಡಿದಾಗ ಪರ್ಸ್‌ನಲ್ಲಿ 5,530 ರೂ. ಹಣ, ಡಿಎಲ್ ,ಆರ್‌ಸಿ, ಪ್ಯಾನ್ ಕಾರ್ಡ್ ಸೇರಿದಂತೆ ಹಲವು ಮುಖ್ಯವಾದ ಮೂಲ ದಾಖಲೆಗಳಿರುವುದು ಕಂಡುಬಂದಿತು.
ಕೂಡಲೇ ಪೋಸ್ಟ್ ಮ್ಯಾನ್ ಮಧುಸೂಧನ್ ಅವರ ಸಹಾಯದಿಂದ ಪರ್ಸ್ ಕಳೆದುಕೊಂಡ ವ್ಯಕ್ತಿ ಯಾರು ಎಂದು ಪತ್ತೆ ಮಾಡಿ ಅವರನ್ನು ಸಂಪರ್ಕಿಸಿದಾಗ ಆ ವ್ಯಕ್ತಿ ಬೋರಯ್ಯ ಎಂದು ತಿಳಿದು ಬಂದ ನಂತರ, ಅವರನ್ನು ಮುಖ್ಯ ಅಂಚೆ ಕಚೇರಿಗೆ ಕರೆಸಿಕೊಂಡು ಅದು ಅವರದೇ ಎಂದು ಸಾಬೀತು ಮಾಡಿದ ನಂತರ ಪೋಸ್ಟ್ ಮಾಸ್ಟರ್ ವಿ. ಶ್ರೀಧರ್ ಅವರು ಪರ್ಸ್ ನ್ನು ಬೋರಯ್ಯನವರಿಗೆ ಹಸ್ತಾಂತರಿಸಿದ್ದಾರೆ. ಬೋರಯ್ಯ ಅವರು, ಪೋಸ್ಟ್ ಮಾಸ್ಟರ್ ಹಾಗೂ ಅಂಚೆ ಇಲಾಖೆ ಸಿಬ್ಬಂದಿಗಳ ಪ್ರಾಮಾಣಿಕ ಸೇವೆಗಾಗಿ ಧನ್ಯವಾದ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
PAK Vs SA: ಸರಣಿ ಕ್ಲೀನ್ ಸ್ವೀಪ್ ಗೈದ ಪಾಕಿಸ್ಥಾನ
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
BCCI: ಇನ್ನೆರಡು ಟೆಸ್ಟ್ ನಿಂದ ಮೊಹಮ್ಮದ್ ಶಮಿ ಹೊರಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.