ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಕಲ ಸಿದ್ಧತೆ
Team Udayavani, Jun 20, 2020, 5:01 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಭದ್ರಾವತಿ: ಜೂ. 25ರಿಂದ ಜು. 3ರವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸಕಲ ಸಿದ್ಧತೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ತಾಲೂಕಿನಲ್ಲಿ ಈಬಾರಿ ಒಟ್ಟು 4458 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವವರಿದ್ದು ಗ್ರಾಮಾಂತರ ವಿಭಾಗದಲ್ಲಿ 7 ಮತ್ತು ನಗರ ವ್ಯಾಪ್ತಿಯಲ್ಲಿ 8ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪ್ರತೀ ಪರೀಕ್ಷಾ ಕೇಂಧ್ರದಲ್ಲಿ ಎರಡು ಕೊಠಡಿಗಳನ್ನು ಹೆಚ್ಚುವರಿಯಾಗಿ ಇರಿಸಿಕೊಂಡು ಅಲ್ಲಿ ಜ್ವರ, ಶೀತ, ಕೆಮ್ಮು ಇದ್ದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ಸಲುವಾಗಿ 2 ಪ್ರತ್ಯೇಕ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ ಎಂದರು.
ವಾಹನ ಸೌಲಭ್ಯವಿಲ್ಲದ ಸ್ಥಳದಿಂದ ಪರೀಕ್ಷೆಗೆ ರಬೇಕಾದ 259 ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗಾಗಿ15 ಖಾಸಗಿ ಶಾಲೆಯ ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ಬೇರೆ ಜಿಲ್ಲೆಯಿಂದ ನಮ್ಮ ತಾಲೂಕಿಗೆ ವಲಸೆ ಬಂದಿರುವ 77 ವಿದ್ಯಾರ್ಥಿಗಳು ನಮ್ಮ ತಾಲೂಕಿನಲ್ಲಿ ಪರೀಕ್ಷೆ ಬರೆಯಲು ಬಯಸಿದ್ದು ಅವರಿಗೆ ಪರೀಕ್ಷ ಕೇಂದ್ರಗಳಲ್ಲಿ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಮನ್ವಯಾಧಿಕಾರಿ ರಾಜಶೇಖರ್, ವ್ಯವಸ್ಥಾಪಕ ಕಾಂತರಾಜ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.