ಮದುಮಗಳಿಗೆ ಕೋವಿಡ್ ಸೋಂಕು ದೃಢ: ಮದುವೆಯಲ್ಲಿ ಪಾಲ್ಗೊಂಡವರಿಗೆ ಶುರುವಾಯಿತು ಆತಂಕ
Team Udayavani, Jul 6, 2020, 2:50 PM IST
ಶಿವಮೊಗ್ಗ: ಇತ್ತೀಚೆಗೆ ವಿವಾಹವಾಗಿದ್ದ ವಧುವಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, ಆ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಆತಂಕ ಶುರುವಾಗಿದೆ.
ಜೂನ್ 25ರಂದು ಹೊಸನಗರ ತಾಲೂಕು ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಡುಗನೊಂದಿಗೆ ಉಡುಪಿ ಜಿಲ್ಲೆಯ ಕಾಪುವಿನ ಹುಡುಗಿಯೊಂದಿಗೆ ಕಾಪುವಿನಲ್ಲಿ ಮದುವೆಯಾಗಿತ್ತು. ನಂತರ ಅರಮನೆಕೊಪ್ಪ ಗ್ರಾಮಪಂಚಾಯಿತಿ ವ್ಯಾಪ್ತಿಯ ಮತ್ತಿಮನೆಯಲ್ಲಿ ಅದ್ದೂರಿಯಾಗಿ ರಿಸೆಪ್ಷನ್ ಮಾಡಲಾಗಿತ್ತು. ಮದುವೆ ಮತ್ತು ಆರತಕ್ಷತೆಯಲ್ಲಿ ನೂರಾರು ಜನರು ಭಾಗಿಯಾಗಿದ್ದರು.
ಇದೀಗ ಮದುಮಗಳಲ್ಲೇ ಕೋವಿಡ್-19 ಸೋಂಕು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಹುಡುಗಿಗೆ ಕಾಪುವಿನಲ್ಲಿ ಸೋಂಕು ತಾಗಿದೆಯೇ ಅಥವಾ ಶಿವಮೊಗ್ಗ ಜಿಲ್ಲೆಗೆ ಬಂದ ನಂತರ ಸೋಂಕು ತಾಗಿದಿಯೇ ಎನ್ನುವುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಸದ್ಯ ಮದುಮಗಳನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಕೋವಿಡ್ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈಕೆಯ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೀಲ್ ಡೌನ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.