ಉಪವಿಭಾಗೀಯ ಮಟ್ಟದ ಕಚೇರಿ ರದ್ದು ಚರ್ಚೆ ಅಗತ್ಯ: ಬಿಎಸ್‌ವೈ
Team Udayavani, Nov 28, 2021, 7:46 PM IST
ಸಾಗರ: ಉಪವಿಭಾಗೀಯ ಮಟ್ಟದ ಕಚೇರಿಗಳನ್ನು ರದ್ದುಗೊಳಿಸಿ, ಜಿಲ್ಲಾ ಮಟ್ಟದ ಕಚೇರಿಗಳ ಮೂಲಕ ಆಡಳಿತ ನಡೆಸುವ ಸಂಬಂಧ ಚರ್ಚೆ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಅಂತಹ ನಡೆಯ ಸಾಧಕ ಬಾಧಕಗಳ ಚರ್ಚೆ ಅಗತ್ಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಸಾಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ ಈ ಸಂಬಂಧ ಸಮಿತಿ ಮಾಡಿದ್ದಾರೆ ಎನ್ನಲಾಗಿದೆ. ಸಮಿತಿಯ ವರದಿಯನ್ನು ನೋಡಿ ಅನುಕೂಲ, ಅನಾನುಕೂಲದ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಆಡಳಿತ ನಿರ್ವಹಣೆಯಲ್ಲಿ ಇಂತಹ ಕ್ರಮ ಅವೈಜ್ಞಾನಿಕವಾಗಬಹುದು. ಆದರೆ ಯಾವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಪರಿಶೀಲನೆ ನಡೆಸಿ, ಎಲ್ಲರೂ ಒಟ್ಟಾಗಿ ಕುಳಿತು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.
ವಿಧಾನ ಪರಿಷತ್ ಕ್ಷೇತ್ರ ವ್ಯಾಪ್ತಿಯಲ್ಲಿ ಎಲ್ಲೆಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣದಲ್ಲಿ ಇಲ್ಲವೋ ಅಂತಹ ಕಡೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ನೀಡುವಂತೆ ನಾನು ಜೆಡಿಎಸ್‌ನವರಿಗೆ ಮನವಿ ಮಾಡಿದ್ದೇನೆ. ಜೆಡಿಎಸ್ ಅಭ್ಯರ್ಥಿ ಇಲ್ಲದ ಕಡೆ ಅವರು ಉಳಿದ ಯಾರಿಗೆ ಮತ ಕೊಡುತ್ತಾರೆ ಎಂದು ಪ್ರಶ್ನಿಸಿ, ನಮ್ಮ ಅಭ್ಯರ್ಥಿಗಳಿಗೆ ಮತ ನೀಡಬೇಕಾಗುತ್ತದೆ. ಜೆಡಿಎಸ್ ಅಭ್ಯರ್ಥಿಗಳು ಇಲ್ಲದ ಕಡೆಗಳಲ್ಲಿ ಬಿಜೆಪಿಯನ್ನು ಬೆಂಬಲಿಸುತ್ತಾರೆ ಎನ್ನುವ ವಿಶ್ವಾಸ ನನಗೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.