ಶಿವಮೊಗ್ಗದಲ್ಲಿ ಲಾರಿ -ಕಾರು ಮುಖಾಮುಖಿ: ಮೂವರು ಸಾವು; ಓರ್ವನ ಸ್ಥಿತಿ ಗಂಭೀರ
Team Udayavani, Dec 11, 2022, 8:25 AM IST
ಶಿವಮೊಗ್ಗ: ಇಲ್ಲಿನ ಹೊರವಲಯದ ಕಲ್ಲಾಪುರ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ನಡೆದಿದ್ದು, ಮೂವರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಶಿವಮೊಗ್ಗ ಹೊರವಲಯದ ಅಬ್ಬಲಗೆರೆ ಸಮೀಪದ ಕಲ್ಲಾಪುರ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮೃತಪಟ್ಟವರನ್ನು ಕಾರಿನಲ್ಲಿದ್ದ ವಿವೇಕ್ (21), ಕಾರ್ತಿಕ್ (21) ಹಾಗೂ ಮೋಹನ್ (21) ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ಹಿಂಬದಿ ಕುಳಿತಿದ್ದ ರುದ್ರೇಶ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ:ಸಮೃದ್ಧಿ ಮಹಾಮಾರ್ಗ ಇಂದು ಲೋಕಾರ್ಪಣೆ; ಅದರ ವಿಶೇಷತೆಗಳು ಇಲ್ಲಿವೆ…
ಈ ಯುವಕರಿದ್ದ ಕಾರು ಶಿವಮೊಗ್ಗದಿಂದ ಸವಳಂಗ ಕಡೆಗೆ ಹೋಗುತ್ತಿತ್ತು. ಲಾರಿಯು ಸವಳಂಗದಿಂದ ಶಿವಮೊಗ್ಗ ಕಡೆಗೆ ಬರುತ್ತಿತ್ತು. ಈ ವೇಳೆ ಮುಖಾಮುಖಿ ಢಿಕ್ಕಿಯಾಗಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.