ಪಿಯುಸಿ ಪರೀಕ್ಷಾ ಕೇಂದ್ರಕ್ಕೆ ಸಿಸಿ ಕ್ಯಾಮೆರಾ ವ್ಯವಸ್ಥೆ: ಗಂಗಾಧರಪ್ಪ


Team Udayavani, Feb 9, 2018, 6:23 PM IST

2.jpg

ಸಾಗರ: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಮೊದಲ ಬಾರಿಗೆ
ಸಿಸಿ ಕ್ಯಾಮೆರಾ ವ್ಯವಸ್ಥೆ ಮಾಡಲಾಗಿದೆ ಎಂದು ಪಪೂ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಟಿ. ಗಂಗಾಧರಪ್ಪ ತಿಳಿಸಿದ್ದಾರೆ.

ನಗರದ ಸರ್ಕಾರಿ ಸ್ವತಂತ್ರ ಪಪೂ ಮಹಿಳಾ ಕಾಲೇಜಿಗೆ ಗುರುವಾರ ದಿಢೀರ್‌ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ
ಮಾತನಾಡಿದ ಅವರು, ಸಿಸಿ ಕ್ಯಾಮರಾ ಅಳವಡಿಕೆಯಿಂದ ನಕಲು ಮಾಡಲು, ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಹೇಳಿ ಕೊಡಲು ಆಗುವುದಿಲ್ಲ ಎಂದರು. ಜಿಲ್ಲೆಯಲ್ಲಿ ಒಟ್ಟು 33 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 19 ಸರ್ಕಾರಿ ಪಪೂ ಕಾಲೇಜು ಹಾಗೂ 17 ಖಾಸಗಿ ಕಾಲೇಜುಗಳಲ್ಲಿ
ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಜೊತೆಗೆ ರಾಜ್ಯ, ಜಿಲ್ಲಾ ಮಟ್ಟದ ಸ್ಕ್ವಾಡ್‌ಗಳು ಪ್ರತಿ ಕಾಲೇಜಿಗೆ ದಿಢೀರ್‌
ಭೇಟಿ ನೀಡಿ ತಪಾಸಣೆ ನಡೆಸಲಿವೆ. ಇದಲ್ಲದೆ ತಾಲೂಕು ಮಟ್ಟದಲ್ಲಿ ಸಹ ವಿಶೇಷ ಸ್ಕ್ವಾಡ್‌ ರಚಿಸುವ ಚಿಂತನೆ ನಡೆಸಲಾಗಿದೆ ಎಂದರು.
ಕಳೆದ ವರ್ಷ ಪಿಯುಸಿಯಲ್ಲಿ ಜಿಲ್ಲೆ 6ನೇ ಸ್ಥಾನ ಪಡೆದಿತ್ತು. ಅದನ್ನು ಇನ್ನಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ ಉಪನ್ಯಾಸಕರಿಗೆ ಸೂಚನೆ
ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಿದ್ದಾರೆ. ನಿರೀಕ್ಷೆಗಿಂತ ಉತ್ತಮ ಫಲಿತಾಂಶ ತರುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಲೀಕ್‌ ಆಗದಂತೆ ರಾಜ್ಯಮಟ್ಟದಲ್ಲಿ ವಿಶೇಷ ನಿಗಾ ವಹಿಸಲಾಗಿದೆ. ಜಿಲ್ಲೆಯಲ್ಲಿ ಸಹ ಅಗತ್ಯ ಪರೀûಾ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ಯಾವುದೇ ಗೊಂದಲಕ್ಕೆ ಒಳಗಾಗದಂತೆ, ಲೀಕೌಟ್‌ ಆಗುವುದರಿಂದ
ವಿದ್ಯಾರ್ಥಿಗಳು ಅನಗತ್ಯ ಮಾನಸಿಕ ಗೊಂದಲಕ್ಕೆ ಸಿಲುಕದಂತೆ ಮುಂಜಾಗ್ರತೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಪಪೂ ಕಾಲೇಜುಗಳ ಅಭಿವೃದ್ಧಿಗೆ ಅಗತ್ಯ ನಿಗಾ ವಹಿಸಲಾಗಿದೆ. ನಾನು ಉಪನಿರ್ದೇಶಕನಾಗಿ ನೇಮಕವಾದ ತಕ್ಷಣ ಜಿಲ್ಲೆಯ ಕಾಲೇಜುಗಳಿಗೆ ದಿಢೀರ್‌ ಭೇಟಿ ನೀಡಿ ಉಪನ್ಯಾಸಕರ ಕಾರ್ಯವೈಖರಿಯನ್ನು ಪರಿಶೀಲಿಸುವ ಕೆಲಸ ಮಾಡಿದ್ದೇನೆ. ಹಿಂದೆ ಉಪನ್ಯಾಸಕರು ಕಾಲೇಜಿನಿಂದ ಹೊರಗೆ ಇರುತ್ತಿದ್ದರು. ಈಗ ಅಂತಹ ಯಾವುದೇ ದೂರುಗಳು ಇಲ್ಲ. ನಿಷ್ಠೆಯಿಂದ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ ಎಂದರು.
ಕಾಲೇಜಿನ ಪ್ರಭಾರ ಪ್ರಾಚಾರ್ಯ ಲೋಕೇಶ್‌, ಉಪನ್ಯಾಸಕರಾದ ಜಗದೀಶ್‌, ಕೆ.ಚಿದಂಬರ, ಬಸವರಾಜ್‌ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.