ಚಂದ್ರಯಾನ-2 ಯುವ ಸಮೂಹಕ್ಕೆ ಪ್ರೇರಣಾ ಶಕ್ತಿ

ಉಪನ್ಯಾಸ ಸರಣಿ ಕಾರ್ಯಕ್ರಮ ಉದ್ಘಾಟಿಸಿ ಇಸ್ರೋ ಮಾಜಿ ಅಧ್ಯಕ್ಷ ಡಾ| ಕೆ.ಶಿವನ್‌ ಅಭಿಮತ

Team Udayavani, Mar 14, 2022, 5:33 PM IST

13

ಶಿವಮೊಗ್ಗ: ಇಸ್ರೋ (ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ) ನಡೆಸಿದ ಚಂದ್ರಯಾನ-2 ನಮ್ಮ ಯುವ ಸಮೂಹಕ್ಕೆ ಮುಂದಿನ ಹಲವು ಕೌತುಕ ಸಂಶೋಧನೆಗಳಿಗೆ ಪ್ರೇರಣಾ ಶಕ್ತಿಯಾಗಿದ್ದು ಯುವ ಸಮೂಹ ಯಾವುದೇ ಸೋಲು ಹಾಗೂ ಸವಾಲುಗಳಿಗೆ ಅಂಜದೆ ಹೊಸತನದ ಚಿಂತನೆಯೆಡೆಗೆ ಸಾಗಬೇಕಿದೆ ಎಂದು ಇಸ್ರೋ ಮಾಜಿ ಅಧ್ಯಕ್ಷ ಡಾ| ಕೆ.ಶಿವನ್‌ ಹೇಳಿದರು.

ನಗರದ ಜೆಎನ್‌ಎನ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಎನ್‌ಇಎಸ್‌(ರಾಷ್ಟ್ರೀಯ ಶಿಕ್ಷಣ ಸಮಿತಿ)ನ ಅಮೃತ ಮಹೋತ್ಸವದ ನಿಮಿತ್ತ ಉಪನ್ಯಾಸ ಸರಣಿ ಉದ್ಘಾಟಿಸಿ ಮಾತನಾಡಿದ ಅವರು, ಎಷ್ಟೇ ಹೊಸ ತಂತ್ರಜ್ಞಾನಗಳು ಬಳಕೆಗೆ ಲಭ್ಯವಾದರೂ ಮನುಷ್ಯಾಧಾರಿತ ಸಂಶೋಧನೆಗಳು ಮತ್ತಷ್ಟು ಮುನ್ನಡೆಯಬೇಕಿದೆ ಎಂದರು.

ಸರ್ಕಾರಿ ಶಾಲೆಯಲ್ಲಿ ಓದಿದ ನನಗೆ ಕೆಲಸಕ್ಕಾಗಿ ವಿದೇಶಗಳಿಗೆ ತೆರಳದೆ ಭಾರತದಲ್ಲಿಯೇ ಸೇವೆ ಸಲ್ಲಿಸುವಂತೆ ಪ್ರೇರಣೆ ನೀಡಿತು. ಬೆಳೆದ ಪರಿಸರ ಮತ್ತು ಆತ್ಮವಿಶ್ವಾಸ ರೈತಾಪಿಯಿಂದ ಇಸ್ರೋ ಅಧ್ಯಕ್ಷ ಹುದ್ದೆಯವರೆಗೆ ಏರುವಂತೆ ಮಾಡಿತು. ಹಾಗಾಗಿಯೇ ನಮ್ಮ ನಡುವಿನ ಪರಿಸರದಿಂದ ನಾವು ನಿಜವಾದ ಪ್ರೇರಣೆ ಪಡೆಯಬೇಕಾಗಿದೆ ಎಂದರು.

ಇಸ್ರೋ ಭೂ ಸರ್ವೇಕ್ಷಣಾ ಉಪಗ್ರಹಗಳ ಮೂಲಕ ಪ್ರಾಕೃತಿಕ ಸಂಪನ್ಮೂಲಗಳ ಮೇಲೆ ಹೆಚ್ಚು ನಿಗಾ ವಹಿಸಲು ಸಾಧ್ಯವಾಗಲಿದ್ದು ಕೃಷಿ, ಅರಣ್ಯ ಸೇರಿದಂತೆ ಎಂತಹುದೇ ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲಿಯೂ ಉತ್ತಮ ಗುಣಮಟ್ಟದ ಚಿತ್ರಗಳನ್ನು ಭೂಮಿಗೆ ರವಾನಿಸಲಿದೆ. ಇದರೊಂದಿಗೆ ಸಾಗರ, ಪರ್ವತ, ಗಣಿ, ಖನಿಜ ಸಂಪತ್ತು ಸೇರಿದಂತೆ ಭೂಮಿಯ ಬಾಹ್ಯರೇಖೆಯ ಸಂಪೂರ್ಣ ಮಾಹಿತಿ ಒದಗಿಸಲಿದೆ ಎಂದರು.

ಎನ್‌ಇಎಸ್‌ ಅಧ್ಯಕ್ಷ ಎ.ಎಸ್‌. ವಿಶ್ವನಾಥ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಟಿ.ಆರ್‌. ಅಶ್ವತ್ಥನಾರಾಯಣ ಶೆಟ್ಟಿ, ಕಾರ್ಯದರ್ಶಿ ಎಸ್‌.ಎನ್‌. ನಾಗರಾಜ್‌, ಖಜಾಂಚಿ ಸಿ.ಆರ್‌. ನಾಗರಾಜ್‌, ನಿರ್ದೇಶಕರಾದ ಡಾ|ಪಿ.ನಾರಾಯಣ್‌, ಜಿ.ಎಸ್‌.ನಾರಾಯಣ ರಾವ್‌, ಎನ್‌.ಟಿ. ನಾರಾಯಣ ರಾವ್‌, ಎಚ್‌.ಸಿ. ಶಿವಕುಮಾರ್‌, ಕುಲಸಚಿವ ಪ್ರೊ| ಹೂವಯ್ಯ ಗೌಡ, ಪ್ರಾಚಾರ್ಯ ಡಾ| ಕೆ.ನಾಗೇಂದ್ರ ಪ್ರಸಾದ್‌, ಶೈಕ್ಷಣಿಕ ಡೀನ್‌ ಡಾ| ಪಿ.ಮಂಜುನಾಥ ಇದ್ದರು.

ಟಿಪ್ಪು ಬಾಹ್ಯಾಕಾಶ ತಂತ್ರಜ್ಞಾನ ಬಳಸಿಕೊಂಡ ಮೊದಲ ರಾಜ

ಪ್ರತಿಯೊಬ್ಬ ಭಾರತೀಯನೂ ಬಾಹ್ಯಾಕಾಶ ತಂತ್ರಜ್ಞಾನದೊಂದಿಗೆ ಒಂದಿಲ್ಲೊಂದು ರೀತಿಯಲ್ಲಿ ಸಂಬಂಧ ಹೊಂದಿದ್ದಾನೆ. ಅದರೆ ಅನೇಕರಲ್ಲಿ ಇಸ್ರೋ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ಇಲ್ಲದಿರುವುದು ವಿಷಾದನೀಯ. ಟಿಪ್ಪು ಸುಲ್ತಾನ್‌ ತನ್ನ ಶತ್ರುಗಳನ್ನು ಸೋಲಿಸಲು ಬಾಹ್ಯಾಕಾಶ ತಂತ್ರಜ್ಞಾನ ಅಳವಡಿಸಿಕೊಂಡ ಮೊದಲ ರಾಜ ಎಂದು ಡಾ| ಕೆ.ಶಿವನ್‌ ಹೇಳಿದರು.

ಪೇಲೋಡ್‌, ರಾಕೆಟ್‌, ಗನ್‌ ಪೌಡರ್‌ನಂತಹ ಸಂಶೋಧನೆಗಳನ್ನು ಅಂದೇ ಅಳವಡಿಸಿಕೊಂಡಿದ್ದು ಅಚ್ಚರಿಯ ವಿಚಾರ. ಇದೇ ಮಾದರಿಯಲ್ಲಿ ನಾವಿನ್ಯತೆ ಮತ್ತು ಹೊಸತನದ ಅವಶ್ಯಕತೆಗಳ ಕುರಿತು ಅರಿತ ಡಾ|ವಿಕ್ರಮ್ ಸಾರಾಭಾಯ್ ಇಸ್ರೋ ಸ್ಥಾಪಿಸಿದರು. ಈ ಮೂಲಕ ಅನೇಕ ಕ್ರಾಂತಿಕಾರಿ ನಾವೀನ್ಯಯುತ ಬದಲಾವಣೆಗಳಿಗೆ ನಾಂದಿ ಹಾಡಿದರು. ಇಂದು ಭಾರತದ ವಿಜ್ಞಾನಿಗಳು ಸಂಪೂರ್ಣವಾಗಿ ಸ್ವದೇಶಿ ನಿರ್ಮಿತ ತಂತ್ರಜ್ಞಾನಗಳೊಂದಿಗೆ ಅನೇಕ ಸಾಮಾಜಿಕ ಸಮಸ್ಯೆಗಳನ್ನು ಬಗೆಹರಿಸಲು ಆವಿಷ್ಕಾರ ನಡೆಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.