ಸರಕಾರಿ ನೌಕರ ಆತ್ಮಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆ ನಡೆಸಲಿ… ಶಾಸಕ ಚನ್ನಬಸಪ್ಪ
Team Udayavani, May 27, 2024, 2:58 PM IST
ಶಿವಮೊಗ್ಗ: ತನ್ನ ನಿವಾಸದಲ್ಲೇ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ವಾಲ್ಮೀಕಿ ನಿಗಮದ ಅಧೀಕ್ಷರಾಗಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ ಅವರ ಆತ್ಮಹತ್ಯೆ ಕುರಿತು ಶಾಸಕ ಚನ್ನಬಸಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಚಂದ್ರಶೇಖರ ಅವರು ಬರೆದಿದ್ದರೆನ್ನಲಾದ ಡೆತ್ ನೋಟ್ ನಲ್ಲಿ ಮೂವರ ಹೆಸರು ಉಲ್ಲೇಖಿಸಿದ್ದು ಪೊಲೀಸರು ಕೂಡಲೇ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವಂತೆ ಆಗ್ರಹಿಸಿದ್ದಾರೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿ ಇಲಾಖೆಯ ಮಂತ್ರಿ ಮಹದೇವಪ್ಪ ಅವರನ್ನು ತತಕ್ಷಣ ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿದರು ಅಲ್ಲದೆ ಚಂದ್ರಶೇಖರ್ ಅವರು ಮೂವರು ಶಿಕಾರಿಗಳ ಹೆಸರನ್ನೂ ಉಲ್ಲೇಖ ಮಾಡಿದ್ದಾರೆ, ಇಲಾಖೆಯಲ್ಲಿ ನಡೆದಿರುವ ಹಗರಣದ ಕುರಿತು ಕೂಲಂಕುಷವಾಗಿ ತನಿಖೆ ನಡೆಸಬೇಕು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
187 ಕೋಟಿ ಹಣಕ್ಕೆ ಸಂಬಂಧಿಸಿದ ಹಣದ ಅವ್ಯವಹಾರವನ್ನು ತನಿಖೆಗೆ ಒಳಪಡಿಸಬೇಕು, ಎಸ್ಟಿ ಸಮುದಾಯಕ್ಕೆ ಅನುಕೂಲ ಆಗಲು ಈ ನಿಗಮ ಸ್ಥಾಪಿಸಲಾಗಿದೆ, ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, 85 ಕೋಟಿ ಅವ್ಯವಹಾರ ಆಗಿದೆ ಅಂತ ಆರೋಪ ಮಾಡಿದ್ದಾನೆ, ಹಣ ವರ್ಗಾವಣೆಯ ದಿನಾಂಕವನ್ನು ಸಹ ಡೆತ್ ನೋಟ್ ನಲ್ಲಿ ನಮೂದಿಸಲಾಗಿದೆ. ಸರ್ಕಾರ ಅಧಿಕಾರಿಗಳ ಮೇಲೆ ಒತ್ತಡ ತರುವ ಮೂಲಕ ಅಧಿಕಾರಿಗಳ ಸಾವಿಗೆ ಕಾರಣವಾಗುತ್ತಿದೆ, ಈ ಬಗ್ಗೆ ರಾಜ್ಯಪಾಲರಿಗೂ ಪತ್ರ ಬರೆಯುತ್ತೇವೆ, ಸರ್ಕಾರಿ ಅಧಿಕಾರಿಗಳ ಮರಣ ಶಾಸನವನ್ನು ಈ ಸರ್ಕಾರ ಬರೆಯುತ್ತಿದೆ ಎಂದು ಕಿಡಿಕಾರಿದರು.
ಇದನ್ನೂ ಓದಿ: Accident: ಬೈಕ್-ಕ್ಯಾಂಟರ್ ಮುಖಾಮುಖಿ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು, ಯುವತಿಯ ನಾಲಿಗೆ ಕಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.