ಮಕ್ಕಳಲ್ಲಿರುವ ಪ್ರತಿಭೆ ಹೊರತರಲು ಯತ್ನಿಸಿ: ಶಿಕಾರಿಪುರ

ಜಿಲ್ಲಾ ಮಟ್ಟದ 14ನೇ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಬಾಲ ಸಾಹಿತಿ ಕುಮಾರ ಸಾತ್ವಿಕ್‌ ಬಿ.ಎಂ. ಶಿಕಾರಿಪುರ ಸಲಹೆ 

Team Udayavani, Feb 11, 2021, 4:20 PM IST

Childers sahitya

ಶಿವಮೊಗ್ಗ: ಕೇವಲ ಅಂಕಗಳಿಗೆ ಮಾತ್ರ ಸೀಮಿತವಾಗುವ ರೀತಿಯಲ್ಲಿ ರೂಪಿಸಲಾದ ನಮ್ಮ ಶೈಕ್ಷಣಿಕ ವ್ಯವಸ್ಥೆ ಮಕ್ಕಳಲ್ಲಿರುವ ಪ್ರತಿಭೆಗೆ ಸರಿಯಾದ ಅವಕಾಶ ಇಲ್ಲದೇ ಅವರ ಸೃಜನಶೀಲತೆ ಮಾಯವಾಗುವಂತೆ ಮಾಡುತ್ತಿದೆ. ಮಕ್ಕಳಲ್ಲಿರುವ ಪ್ರತಿಭೆಗಳನ್ನು ಹೊರತರುವ ಕೆಲಸ ನಿರಂತರವಾಗಿ ಆಗಬೇಕಾದ ಅವಶ್ಯಕತೆಯಿದೆ ಎಂದು ಬಾಲ ಸಾಹಿತಿ ಕುಮಾರ ಸಾತ್ವಿಕ್‌ ಬಿ.ಎಂ. ಶಿಕಾರಿಪುರ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ, ಸಾಂಸ್ಕೃತಿಕ ವೇದಿಕೆ ಹಾಗೂ ಕರ್ನಾಟಕ ಜಾನಪದ ಪರಿಷತ್ತು ಮತ್ತು ಅದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ ಸಹಯೋಗದಲ್ಲಿ ಇಲ್ಲಿನ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ 14ನೇ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಬಗ್ಗೆ ಸಾಕಷ್ಟು ಅಸಡ್ಡೆ ಮಾಡಲಾಗುತ್ತಿದೆ. ಅವರಿಗೆ ಸರಿಯಾದ ಮಾರ್ಗದರ್ಶನ ಇಲ್ಲದೆ ಪ್ರತಿಭೆ ಕಮರಿ ಹೋಗುತ್ತಿದೆ. ಸರ್ಕಾರದ ನೀತಿಗಳಿಂದಾಗಿ ಶೈಕ್ಷಣಿಕವಾಗಿ ಹಿಮ್ಮುಖವಾಗುತ್ತಿದೆ. ಅನೇಕ ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿಗೆ ಬಂದಿರುವುದು ವಿಪರ್ಯಾಸ. ಶ್ರೀಮಂತಿಕೆಯಿಂದಿರುವ ನಾಡಿನ ಸಾಹಿತ್ಯ ಪರಂಪರೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಕೆಲಸ ಆಗಬೇಕಿದೆ. ಮಕ್ಕಳ ಅಭಿವ್ಯಕ್ತಿಗೆ ಹೆಚ್ಚಿನ ಅವಕಾಶ ನೀಡುವ ಮೂಲಕ ಅವರ ಬೆಳವಣಿಗೆಗೆ ವಿಶೇಷ ಗಮನ ಹರಿಸಬೇಕೆಂದರು.

ಸಮ್ಮೇಳನದ ಸರ್ವಾಧ್ಯಕ್ಷೆ ನಿಶ್ಚಿತ ಎಂ.ಶೆಟ್ಟಿ ಕಾರ್ಗಲ್‌ ಮಾತನಾಡಿ, ವಿಶ್ವಮಾನ್ಯತೆ ಸಾರಿದ ಕುವೆಂಪುಗೆ ಜನ್ಮ ನೀಡಿದ ಕರ್ಮಭೂಮಿ ಮಲೆನಾಡು. ಕನ್ನಡದ ಉಳಿವಿಗಾಗಿ ಹಾಗೂ ಅದನ್ನು ಎತ್ತರಕ್ಕೆ ಕೊಂಡೊಯ್ದ ಅನೇಕರ ತವರು ಭೂಮಿಯಾಗಿದೆ. ಇದು ಕೇವಲ ಮಲೆನಾಡಿಗೆ ಸೀಮಿತವಾಗಿದ್ದಲ್ಲ. ನಾಡಿಗೆ ಹೆಮ್ಮೆ ತರುವಂತಹದ್ದಾಗಿದೆ. ಕನ್ನಡ ನಾಡಿಗೆ ತನ್ನದೇ ಆದ ಶ್ರೀಮಂತ ಪರಂಪರೆ ಇದೆ. ಇಂತಹ ಸಿರಿನಾಡಿನಲ್ಲಿ ಇರುವ ನಾವು ಪುಣ್ಯವಂತರಾಗಿದ್ದೇವೆ ಎಂದರು.

ಇದನ್ನೂ ಓದಿ :ಸ್ವಚ್ಛ ಕಲಬುರಗಿಗೆ ಬೃಹತ್‌ ಕಾಲ್ನಡಿಗೆ ಜಾಥಾ

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ದಿವ್ಯ ಸಾನ್ನಿದ್ಯ ವಹಿಸಿದ್ದರು. ಜಿಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಿ.ಮಂಜುನಾಥ ಪ್ರಾಸ್ತಾವಿಕ ನುಡಿಗಳನ್ನಾಡಿದರು. ರೈತ ಮುಖಂಡ ಕೆ.ಟಿ.ಗಂಗಾಧರ್‌, ಶಿವಮೊಗ್ಗ ಪದವಿಧರರ ಸಹಕಾರ ಸಂಘದ ಅಧ್ಯಕ್ಷಎಸ್‌.ಪಿ.ದಿನೇಶ್‌, ರಾಮಕೃಷ್ಣವಿದ್ಯಾ ಸಂಸ್ಥೆ ಕಾರ್ಯದರ್ಶಿ ಶೋಭಾ ವೆಂಕಟರಮಣ, ಕೋಟಿಪುರ ಎವರನ್‌ ಶಾಲೆ ಅಧ್ಯಕ್ಷ ಕಾರ್ತಿಕ್‌ಎಂ.ಎಸ್‌., ಕ.ಜಾ.ಪ ಸಾಗರ ತಾಲೂಕು ಅಧ್ಯಕ್ಷ ವಿ.ಟಿ. ಸ್ವಾಮಿ, ಶಿಕಾರಿಪುರದ ಬಿ.ಪಾಪಯ್ಯ, ಭದ್ರವಾತಿ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ಶಿಕಾರಿಪುರದ ಕೆ.ಎಸ್‌. ಹುಚ್ಚರಾಯಪ್ಪ, ತೀರ್ಥಹಳ್ಳಿಯ ಮಂಜುನಾಥ ಶಿರೂರು, ರಿಪ್ಪನ್‌ಪೇಟೆಯ ಮಂಜುನಾಥಕಾಮತ್‌, ಸಾಗರದ ಉಮೇಶ್‌ ಹಿರೇನೆಲ್ಲೂರು, ಕುಮಾರಿ, ಸಮೃತಜಿ ಎಸ್‌., ಭುವನಶ್ರೀ, ಅಚಿಂತ ಆರ್‌.ಎಸ್‌., ನಿಧಿ ಹೊಸಮನೆ, ಇರಾಮ್‌ ನಾಜ್‌, ಶಿಶಿರ ವರ್ಷ ಎಂ.ಎಚ್‌ ಉಪಸ್ಥಿತರಿದ್ದರು.

ಆರಂಭದಲ್ಲಿ ಆದಿಚುಂಚನಗಿರಿ ಮಕ್ಕಳು ನಾಡಗೀತೆ ಹಾಡಿದರು. ಶಿಫಾ ಮಲ್ಲಿಕ್‌ ಸ್ವಾಗತಿಸಿ, ಭೂಮಿಕ ಎಂ. ವಂದಿಸಿ, ಕೌಸ್ತುಭ ಕೆ.ಎಸ್‌. ನಿರೂಪಿಸಿದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

missing

ಬರಿಮಾರು ವ್ಯಕ್ತಿ ನಾಪತ್ತೆ; ನದಿ ಕಿನಾರೆಯಲ್ಲಿ ಪಾದರಕ್ಷೆ, ಮೇವಿನ ಕಟ್ಟು ಪತ್ತೆ

Kambala

Kambala; ದೇವರ ಕಂಬಳ ಖ್ಯಾತಿಯ ಹೊಕ್ಕಾಡಿಗೋಳಿ ಕಂಬಳ 

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.