ಮಸೀದಿಗಳ ಅಕ್ರಮ ಮೈಕ್ ಗಳನ್ನು ತೆರವುಗೊಳಿಸಿ: ಪ್ರಮೋದ್ ಮುತಾಲಿಕ್ ಆಗ್ರಹ


Team Udayavani, Oct 7, 2021, 4:27 PM IST

ಮಸೀದಿಗಳ ಅಕ್ರಮ ಮೈಕ್ ಗಳನ್ನು ತೆರವುಗೊಳೊಸಿ: ಪ್ರಮೋದ್ ಮುತಾಲಿಕ್ ಆಗ್ರಹ

ಶಿಕಾರಿಪುರ: ರಾಜ್ಯದಲ್ಲಿ ಮಸೀದಿಗಳ ಮೇಲೆ ಆಕ್ರಮವಾಗಿ ಹಾಕಲಾಗಿರುವ ಮೈಕ್ ಗಳನ್ನು ತೆರವುಗೊಳಿಸಿ ಎಂದು ಶ್ರೀ ರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.

ಇಂದು ಪಟ್ಟಣದ ತಾಲ್ಲೂಕು ಕಛೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ವಿಶ್ವದ 16 ರಾಷ್ಟ್ರಗಳಲ್ಲಿ ಮಸೀದಿಗಳ ಮೈಕ್ ಅಳವಡಿಕೆಯನ್ನು ತಡೆಗಟ್ಟಿದ್ದು, ಅದರಲ್ಲೂ ಇಂಡೋನೇಷ್ಯಾ, ಪಾಕಿಸ್ತಾನ ಸೇರಿದಂತೆ 6 ಮುಸ್ಲಿಂ ರಾಷ್ಟ್ರಗಳಲ್ಲಿ ಮೈಕ್ ಅಳವಡಿಕೆಯನ್ನು ತಡೆಗಟ್ಟಿದ್ದಾರೆ. ನಮ್ಮ ಭಾರತ ದೇಶದ ಮುಸ್ಲಿಂರ ಮಸೀದಿಯ ಮೇಲೆ ಮೈಕ್ ಅಳವಡಿಕೆಯನ್ನು ತಡೆಗಟ್ಟುವ ಕೆಲಸ ಏಕೆ ಮಾಡುತ್ತಿಲ್ಲ. ಅದರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾತ್ರಿ 10-00 ರಿಂದ ಬೆಳಿಗ್ಗೆ 6-00 ಗಂಟೆಯವರೆಗೆ ಶಬ್ದ ಮಾಲಿನ್ಯ ತಡೆಗಟ್ಟಬೇಕು.  ಇದರ ಬಗ್ಗೆ ಶಬ್ದ ಮಾಲಿನ್ಯ ನಿಯಂತ್ರಣ ಮಂಡಳಿ ಕಟ್ಟುನಿಟ್ಟಿನ ಕಾರ್ಯ ನಿರ್ವಹಿಸುತ್ತಿಲ್ಲ. ಈ ಸಮಯದಲ್ಲಿ ಮೈಕ್ ಗಳಿಗೆ ನಿರ್ಬಂಧ ಇದ್ದರೂ, ಸುಪ್ರೀಂ ಕೋರ್ಟ್ ಆದೇಶ ನೀಡಿದರೂ ಮಸೀದಿಗಳಲ್ಲಿ ಬೆಳಿಗ್ಗೆ 5-00 ಗಂಟೆಯ ವೇಳೆಗೆ ಅಜಾನ್ ಕೂಗುತ್ತಿದ್ದರೂ ಯಾಕೆ ತಡೆಯುತ್ತಿಲ್ಲ ಎಂದು ಪ್ರಶ್ನಿಸಿದರು.

ರಾಜಕೀಯ ಮುಖಂಡರಿಗೆ ಇದರ ಬಗ್ಗೆ ಮಾಹಿತಿ ನೀಡಿದರೂ ಈ ವಿಷಯ ಸೂಕ್ಷ್ಮ ವಿಷಯವೆಂದು ಹೇಳುತ್ತಿದ್ದಾರೆ. ಇದರಿಂದಾಗಿ ಅನೇಕ ಮುಸ್ಲಿಂರು ಸಂತೋಷದಿಂದ ದಿನಕ್ಕೆ ಐದು ಬಾರಿ ಮೈಕ್ ಮೂಲಕ ಆಜಾನ್ ಕೂಗುತ್ತಿದ್ದಾರೆ. ಪ್ರಾರ್ಥನೆ, ಭಜನೆ ಭಕ್ತಿಗೀತೆಗಳಿಗೆ ನಮ್ಮ ವಿರೋಧವಿಲ್ಲ. ರಾತ್ರಿ 10-00 ಗಂಟೆಯಿಂದ ಬೆಳಗ್ಗೆ 6-00 ಗಂಟೆಯವರೆಗೂ ಮೈಕ್ ಅಳವಡಿಕೆಯ ನಿರ್ಭಂಧವಿದ್ದರೂ ಬೆಳಿಗ್ಗೆ 5-00 ಗಂಟೆಯ ವೇಳೆಗೆ ಅಜಾನ್ ಕೂಗುತ್ತಿದ್ದರೂ ಏಕೆ ತಡೆಯುತ್ತಿಲ್ಲ. ನಿಮ್ಮ ಕೈಯಲ್ಲಿ ಆಗದಿದ್ದರೆ ಹೇಳಿ, ಅನೇಕ ಹಿಂದೂ ಸಂಘಟನೆಗಳು ಒಗ್ಗೂಡಿ ಮಸೀದಿಗಳಲ್ಲಿ ಮೈಕ್ ಅಳವಡಿಕೆಯನ್ನು ತಡೆಗಟ್ಟುವ ಕೆಲಸ ಮಾಡುತ್ತೇವೆ ಎಂದು ಸವಾಲು ಹಾಕಿದರು.

ಆಸ್ಪತ್ರೆ, ಶಾಲಾ ಕಾಲೇಜು, ಜನವಸತಿ ಪ್ರದೇಶ, ನ್ಯಾಯಾಲಯ, ಸರ್ಕಾರಿ ಕಛೇರಿ, ದೇವಸ್ಥಾನ, ಮಸೀದಿ, ಚರ್ಚ್ ಗಳನ್ನು ನಿಶ್ಯಬ್ದ ವಲಯವೆಂದು ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶವಿದ್ದರೂ ಶಬ್ಧ ಮಾಲಿನ್ಯ ನಿರಂತರವಾಗಿ ನಡೆಯುತ್ತಲೇ ಇದೆ.  ಇತ್ತೀಚೆಗೆ ನಡೆದ ಗಣೇಶೋತ್ಸವದ ಆಚರಣೆಗೆ ಅನೇಕ ರೀತಿಯ ಕಾರ್ಯಕ್ರಮಗಳನ್ನು ಜಾರಿಗೆ ತಂದು ಗಣೇಶೋತ್ಸವ ಸಂಭ್ರಮ ಸಡಗರಕ್ಕೆ ತಡೆಯೊಡ್ಡುವ ಕೆಲಸ ಮಾಡಿದ್ದೀರಿ. ಪರವಾನಿಗೆ ಇಲ್ಲದ ಮೈಕ್ ತೆರವುಗೊಳಿಸಲು ಸರ್ವೋಚ್ಚ ನ್ಯಾಯಾಲಯದ ಆಜ್ಞೆ ಇದ್ದರೂ ಇದುವರೆಗೂ ಪೋಲೀಸ್ ಇಲಾಖೆ ಏಕೆ ಕ್ರಮ ಕೈಗೊಂಡಿಲ್ಲ ಎಂದರು.

ಇದನ್ನೂ ಓದಿ:ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ʼಗುಡ್‌ ನ್ಯೂಸ್‌ʼ: 7ನೇ ವೇತನ ಆಯೋಗದ ಬದಲಾವಣೆ

ದೇಶದ ಸಂವಿಧಾನ ಎಲ್ಲರಿಗೂ ಆರೋಗ್ಯ, ನಿದ್ದೆ, ಶಿಕ್ಷಣ, ಪ್ರಾರ್ಥನೆ ಸೇರಿದಂತೆ ಅನೇಕ ಸ್ವಾತಂತ್ರ್ಯ ಹಕ್ಕು ಕೊಟ್ಟಿದೆಯಾದರೂ, ಶಬ್ದ ಮಾಲಿನ್ಯದಿಂದ ಸಂವಿಧಾನದ ಹಾಗೂ ನ್ಯಾಯಾಲಯದ ಆಜ್ಞೆ ಉಲ್ಲಂಘನೆಯಾಗುತ್ತಿದೆ. ವೃದ್ಧರ, ವಿದ್ಯಾರ್ಥಿಗಳ, ಕಾರ್ಮಿಕರ, ರೋಗಿಗಳ, ಸಾಮಾನ್ಯ ಜನರ ನೆಮ್ಮದಿಗೆ ಭಂಗಗೊಳಿಸುತ್ತಿರುವುದು, ಸಂವಿಧಾನ ವಿರೋಧಿಯಾಗುತ್ತಿರುವುದು ತಮ್ಮ ಗಮನಕ್ಕೆ ಬರುತ್ತಿಲವೇ. ಕೂಡಲೇ ಶಬ್ಧ ಮಾಲಿನ್ಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟದ ಹಾದಿ ಹಿಡಿಯಲಾಗುವುದು ಎಂದು ಸರ್ಕಾರ ಮತ್ತು ಪೊಲೀಸ್ ಇಲಾಖೆಗೂ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಮುಖಂಡ ಧಾರವಾಡ ಗಿರೀಶ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರವೀಣ್‌ ಬೆಣ್ಣೆ, ವಿಶ್ವ ಹಿಂದೂ ಪರಿಷತ್ ಉಪಾಧ್ಯಕ್ಷ ಪ್ರಕಾಶ್, ವಿಶ್ವ ಹಿಂದೂ ಪರಿಷತ್‌ ಮುಖಂಡ ಭವರ್ ಸಿಂಗ್, ಕೃಷಿ ಭೂಮಿ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷ ಈಶ್ವರಪ್ಪ,ರಾಜ್ ಭಜರಂಗಿ,ಶರತ್, ಎಬಿವಿಪಿ ಭಾಗ್ಯಾರಾಜ್, ಶ್ರೀನಿವಾಸ, ಪರಶುರಾಮ ,ಹಿಂದೂ ಸಂಘಟನೆಗಳ ಮುಖ್ಯಸ್ಥರು ಇದ್ದರು.

ಟಾಪ್ ನ್ಯೂಸ್

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

1-thirthahalli

Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

one-Health-misson

Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್‌”

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.