ಕಳೆದ ಎಂಟು ತಿಂಗಳಿಂದ ಆದಾಯ ಕುಸಿತ, ತೆರಿಗೆ ಸಂಗ್ರಹ ಕಡಿಮೆ : ಸಿಎಂ ಯಡಿಯೂರಪ್ಪ
Team Udayavani, Jun 11, 2021, 6:09 PM IST
ಶಿವಮೊಗ್ಗ: ಕಳೆದ ಎಂಟು ತಿಂಗಳಿಂದ ಆದಾಯ ಕುಸಿತವಾಗಿದೆ. ತೆರಿಗೆ ಸಂಗ್ರಹ ಕಡಿಮೆ ಆಗಿದೆ ಇದರ ನಡುವೆಯೂ ಅಭಿವೃದ್ಧಿ ಕಾರ್ಯಕ್ಕೆ, ನೀರಾವರಿ ಯೋಜನೆಗೆ ಹಣಕಾಸಿನ ಧಕ್ಕೆ ಆಗದಂತೆ ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಇಂದು ( ಜೂನ್ 11) ಶಿಕಾರಿಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಹಣಕಾಸು ನೆರವಿಗೆ ಮನವಿ ಮಾಡಿದ್ದೇನೆ. ನಾಲ್ಕು ತಿಂಗಳು ಕಳದರೆ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಈಗಾಗಲೇ ಬಡವರಿಗೆ ತಲುಪುವಂತಹ ಎರಡು ಪ್ಯಾಕೇಜ್ ನೀಡಲಾಗಿದೆ. ಮುಂದೆ ಅನಿವಾರ್ಯ ಆದರೆ ಮತ್ತೊಂದು ಪ್ಯಾಕೇಜ್ ಬಗ್ಗೆ ಚಿಂತನೆ ಮಾಡಲಾಗುವುದು ಎಂದರು.
ಕನಿಷ್ಠ ಶೇ.5ರಷ್ಟು ಪಾಸಿಟಿವಿಟಿ ರೇಟ್ ಬರಬೇಕು ಎಂಬುದು ನಮ್ಮ ಅಪೇಕ್ಷೆ. ಆದರೆ ಶಿವಮೊಗ್ಗ ಸೇರಿದಂತೆ ಶಿಕಾರಿಪುರದಲ್ಲಿ ಕೋವಿಡ್ ಜಾಸ್ತಿ ಪ್ರಮಾಣದಲ್ಲಿದೆ. ಅದನ್ನು ತಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಲಾಕ್ ಡೌನ್ ಇನ್ನೂ ಒಂದು ವಾರ ವಿಸ್ತರಿಸಿರುವುದರಿಂದ ಕೋವಿಡ್ ಹತೋಟಿಗೆ ಬರುತ್ತದೆ ಎಂಬ ವಿಶ್ವಾಸ ಇದೆ. ಇದಕ್ಕೆ ಜನ ಸಹಕಾರ ಕೊಡಬೇಕು. ಇನ್ನೊಂದು ವಾರದಲ್ಲಿ ಪಾಸಿಟಿವಿಟಿ ರೇಟ್ ಶೇ.5ಕ್ಕೆ ಬರುತ್ತದೆ ಎಂಬ ವಿಶ್ವಾಸ ಇದೆ ಎಂದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲಿಯಂ ದರ ಜಾಸ್ತಿಯಾಗಿದ್ದು, ಕಾಂಗ್ರೆಸ್ ನವರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಲಾರೆ. ಎಲ್ಲಾ ಪಕ್ಷಗಳು ಈ ಸಂದರ್ಭದಲ್ಲಿ ಸಹಕಾರ ನೀಡಬೇಕು. ಪ್ರಧಾನಿ ನರೇಂದ್ರ ಮೋದಿ ಮುಂದಾಲೋಚನೆನಿಂದ ಕೆಲಸ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ನವರು ರಾಜಕಾರಣ ಮಾಡದೆ ಸಹಕಾರ ಕೊಡಬೇಕು ಎಂದರು.
ನಾಳೆ, ನಾಡಿದ್ದರಲ್ಲಿ ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ವ್ಯಾಕ್ಸಿನ್ ಬರಲಿದೆ. ಎಲ್ಲಾ ಜಿಲ್ಲೆಗೂ ಜನಸಂಖ್ಯೆಗೆ ಅನುಗುಣವಾಗಿ ವ್ಯಾಕ್ಸಿನ್ ಸಿಗಲಿದೆ. ಜೂನ್ 17, 18ರ ನಂತರ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಸಹಜವಾಗಿಯೇ ರಾಜ್ಯಕ್ಕೆ ಬರಲಿದ್ದಾರೆ. ಎರಡು ದಿನ ಕರ್ನಾಟಕದಲ್ಲೇ ಇದ್ದು ಒಂದೆರಡು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅರುಣ್ ಸಿಂಗ್ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.