ವಿಮಾನ ನಿಲ್ದಾಣ ವರ್ಷದೊಳಗೆ ಆರಂಭ
Team Udayavani, Feb 17, 2021, 5:33 PM IST
ಶಿವಮೊಗ್ಗ: ಶಿವಮೊಗ್ಗ ಹೊರವಲಯದ ಸೋಗಾನೆಯಲ್ಲಿ 384 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ವರ್ಷ ದೊಳಗೆ ಕಾರ್ಯಾರಂಭವಾಗುವ ನಿರೀಕ್ಷೆಯಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಮಂಗಳವಾರ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮೊದಲ ಹಂತದಲ್ಲಿ ರನ್‌ವೇ ಮತ್ತು ಕಾಂಪೌಂಡ್ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಎರಡನೇ ಹಂತದಲ್ಲಿ ಟರ್ಮಿನಲ್ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಬೇಕಿದ್ದು, ಟೆಂಡರ್ ಕರೆಯುವ ಪ್ರಕ್ರಿಯೆ ನಡೆಯುತ್ತಿದೆ. ಎಲ್ಲಾ ಕಾಮಗಾರಿಗಳನ್ನು ಜತೆಯಾಗಿಯೇ ನಡೆಸಲು ಸೂಚನೆ ನೀಡಲಾಗಿದ್ದು, ಅನುದಾನಕ್ಕೆ ಯಾವುದೇ ಕೊರತೆ ಇಲ್ಲ. ನಿಲ್ದಾಣ ಕಾಮಗಾರಿ ನಿರೀಕ್ಷೆಯಂತೆ ತ್ವರಿತವಾಗಿ ನಡೆಯುತ್ತಿದ್ದು, ಇನ್ನಷ್ಟು ವೇಗವಾಗಿ ಯೋಜನೆ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದರು.
ಕಾಮಗಾರಿಗೆ ಯಾವುದೇ ಅಡಚಣೆಯಾಗದಂತೆ ಜಲ್ಲಿ ಒದಗಿಸಲು ಸ್ಥಳೀಯವಾಗಿ 4 ಎಕರೆ ಕ್ವಾರಿ ಒದಗಿಸಲಾಗಿದೆ. ಎರಡು ತಿಂಗಳ ಬಳಿಕ ಮತ್ತೆ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಲಾಗುವುದು. ಇದು ಪೂರ್ಣ ಪ್ರಮಾಣದ ವಿಮಾನ ನಿಲ್ದಾಣವಾಗಿದ್ದು, ರಾತ್ರಿ ವಿಮಾನಗಳ ಇಳಿಯುವಿಕೆಗೂ ವ್ಯವಸ್ಥೆ ಕಲ್ಪಿಸಲಾಗುವುದು. ವಿಮಾನ ನಿಲ್ದಾಣದಿಂದ ಈ ಭಾಗದ ಕೈಗಾರಿಕಾ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.
ಕೇಂದ್ರ ಕ್ರೀಡಾ ಸಚಿವರ ಭೇಟಿ: ಶಿವಮೊಗ್ಗದಲ್ಲಿ ಕ್ರೀಡಾ ಮೂಲ ಸೌಕರ್ಯ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಹಲವಾರು ಯೋಜನೆ ಜಾರಿಗೊಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಫೆ.21ರಂದು ಶಿವಮೊಗ್ಗಕ್ಕೆ ಆಗಮಿಸಿ ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವರು.
ಸಹ್ಯಾದ್ರಿ ಕಾಲೇಜಿನಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ, ಸ್ಮಾರ್ಟ್ ಸಿಟಿ ಯೋಜನೆಯಡಿ 4 ಕೋಟಿ ರೂ. ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವರು. ಶಿವಮೊಗ್ಗದಲ್ಲಿ ವಿಶೇಷ ಕ್ರೀಡಾ ವಲಯ ಸ್ಥಾಪನೆ ಕುರಿತು ಸಚಿವರು ಸ್ಥಳ ಪರಿಶೀಲನೆ ಕೈಗೊಳ್ಳಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಶಾಸಕರಾದ ಅಶೋಕ ನಾಯ್ಕ, ಆಯನೂರು ಮಂಜುನಾಥ, ರುದ್ರೇಗೌಡ, ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.