ಎರಡೂವರೆ ವರ್ಷ ಯಡಿಯೂರಪ್ಪ ಅವರೇ ಸಿಎಂ: ಕಟೀಲ್‌


Team Udayavani, Jan 2, 2021, 10:34 PM IST

CM position in Karnataka is not vacant

ಶಿವಮೊಗ್ಗ: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿಯೂ ಇಲ್ಲ. ಕುರ್ಚಿ ಅಲುಗಾಡುತ್ತಲೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸ್ಥಾನ ಅಥವಾ ನಾಯಕತ್ವ ಬದಲಾವಣೆ ಬಗ್ಗೆ ಕೇಂದ್ರದಲ್ಲಿ ಪಕ್ಷದ ಶಾಸಕಾಂಗ ಸಭೆ ಅಥವಾ ಪಕ್ಷದಲ್ಲಿ ಆಂತರಿಕವಾಗಿ ಚರ್ಚೆಯೇ ಆಗಿಲ್ಲ. ಮುಂದಿನ ಎರಡೂವರೆ ವರ್ಷ ಬಿ.ಎಸ್‌. ಯಡಿಯೂರಪ್ಪ ಅವರೇ ಮುಖ್ಯಮಂತ್ರಿ, ನಾಯಕ ಆಗಿರುತ್ತಾರೆ. ಮಂತ್ರಿ ಮಂಡಲ ವಿಚಾರದಲ್ಲೂ ಸಿಎಂ ಅವರೇ ನಿರ್ಧಾರ ಕೈಗೊಳ್ಳುತ್ತಾರೆ. ಆ ವಿಷಯದಲ್ಲಿ ಪಕ್ಷ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

ಸಿಎಂ ಕುರ್ಚಿ ಅಲುಗಾಡುತ್ತಿಲ್ಲ. ಆದರೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಖುರ್ಚಿಯೇ ಅಲುಗಾಡುತ್ತಿದೆ. ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಕಾಂಗ್ರೆಸ್‌ ನಾಯಕರನ್ನು ಹತಾಶರನ್ನಾಗಿ ಮಾಡಿದೆ. ಹೀಗಾಗಿ ಬಿಜೆಪಿ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಪ್ರತಿಪಕ್ಷ ಸ್ಥಾನಕ್ಕೆ ಟವೆಲ್‌ ಹಾಕಲು ಕಾಂಗ್ರೆಸ್‌ನಲ್ಲಿ ಬಹಳಷ್ಟು ಜನ ಕಾಯುತ್ತಿದ್ದಾರೆ ಎಂದರು. ಸಿಎಂ ಬಗ್ಗೆ ಪದೇ ಪದೇ ಮಾತನಾಡುತ್ತಿರುವ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಕರೆದು ಮಾತನಾಡಲಾಗಿದೆ. ಕೇಂದ್ರ ಶಿಸ್ತು ಸಮಿತಿಗೆ ವರದಿ ಹೋಗಿದೆ. ಸಮಿತಿ ಸಹ ಇವರ ಹೇಳಿಕೆಯನ್ನು ಗಮನಿಸುತ್ತಿದೆ ಎಂದರು.

ಇದನ್ನೂ ಓದಿ:ಶಿವಮೊಗ್ಗ: ಕಾರು ಡಿಕ್ಕಿಯಾಗಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯ

ಬಿಜೆಪಿ ಕಾರ್ಯಕಾರಿ ಸಭೆ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯುತ್ತಿತ್ತು. ಈಗ ಅದನ್ನು ತಿಂಗಳಿಗೊಮ್ಮೆ ನಡೆಸಲು ನಿರ್ಧರಿಸಲಾಗಿದ್ದು ಈ ಬಾರಿ ಶಿವಮೊಗ್ಗದಲ್ಲಿ ಆಯೋಜಿಸಲಾಗಿದೆ. ಇಲ್ಲಿ ಪಕ್ಷದ ಸಂಘಟನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಗುವುದು. ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಬಿಜೆಪಿ ನಗರ ಕೇಂದ್ರಿತ ಪಕ್ಷ ಎಂಬ ಮಾತು ಸುಳ್ಳಾಗಿದ್ದು ಗ್ರಾಮೀಣ ಪ್ರದೇಶದಲ್ಲೂ ಬಿಜೆಪಿ ಭದ್ರವಾಗಿದೆ ಎಂಬುದು ಈ ಚುನಾವಣೆಯಿಂದ ಸಾಬೀತಾಗಿದೆ. ಮುಂಬರುವ ತಾಲೂಕು ಮತ್ತು ಜಿಪಂ ಚುನಾವಣೆಯಲ್ಲೂ ಪಕ್ಷವನ್ನು ಗೆಲ್ಲಿಸುವ ಸಂಬಂಧ ಕಾರ್ಯಕಾರಿಣಿಯಲ್ಲಿ ಚರ್ಚೆ ನಡೆಸಲಾಗುವುದು ಎಂದರು.

ಪ್ರಧಾನಿಗೆ 16 ಪ್ರಶಸ್ತಿ: ದೇಶದಲ್ಲಿ ಕೋವಿಡ್‌-19 ನಿರ್ವಹಣೆ ಹಾಗೂ ಸ್ವತ್ಛ ಭಾರತ ಯೋಜನೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 2020 ರಲ್ಲಿ ವಿವಿಧ ದೇಶಗಳಿಂದ ವಿಶ್ವಮಟ್ಟದಲ್ಲಿ 16 ಪ್ರಶಸ್ತಿಗಳು ಬಂದಿವೆ. ವಿಶ್ವದ ಶ್ರೀಮಂತ ದೇಶಗಳನ್ನು ಕೊರೊನಾ ಬಾಧಿಸಿದಾಗ ಭಾರತದಲ್ಲಿ ಮಾತ್ರ ಸಮರ್ಥ ನಿರ್ವಹಣೆ ಮೂಲಕ ನಿಯಂತ್ರಣಕ್ಕೆ ತರುವಲ್ಲಿ ಮೋದಿ ಯಶಸ್ವಿಯಾದರು ಎಂದು ಬಣ್ಣಿಸಿದರು.

ಎಸ್‌ಡಿಪಿಐ ರಾಷ್ಟ್ರ ವಿರೋಧಿ ಘೋಷಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರಕಾರ ನಿರ್ಧರಿಸಿದೆ. ಈ ಸಂಬಂಧ ಕೆಲವರ ಬಂಧನಕ್ಕೆ ಪೊಲೀಸ್‌ ಇಲಾಖೆ ಕ್ರಮ ಕೈಗೊಂಡಿದೆ. ಗೆಲುವಿನ ಹುಮ್ಮಸ್ಸಿನಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ ಬಗ್ಗೆ ಪಕ್ಷದ ವತಿಯಿಂದ ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ ಎಂದರು.

ಬಿಜೆಪಿ ಆಪರೇಷನ್‌ ಕಮಲ ಆಮಿಷದ ಬಗ್ಗೆ ಸಾಮಾಜಿಕ ಕಾರ್ಯಕರ್ತ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ಅದರ ಬಗ್ಗೆ ಚರ್ಚೆ ಬೇಡ, ನ್ಯಾಯಾಲಯದಲ್ಲೇ ತೀರ್ಪು ಬರಲಿ ಎಂದು ಸ್ಪಷ್ಟಪಡಿಸಿದರು.

ಅಡುಗೆ ಅನಿಲ, ಇಂಧನಗಳ ದರ ಏರಿಳಿತ ವಿದೇಶದಲ್ಲಿ ಅವುಗಳ ದರವನ್ನು ಅವಲಂಬಿಸಿದೆ. ಇದನ್ನು ಕಾಲ ಕಾಲಕ್ಕೆ ನಿಯಂತ್ರಿಸಲು ನಮ್ಮ ದೇಶದಲ್ಲಿ ಹತ್ತಾರು ಕಾನೂನುಗಳನ್ನು ಜಾರಿಗೆ ತರಲಾಗುತ್ತಿದೆ ಎಂದರು. ಸಚಿವ ಕೆ.ಎಸ್‌. ಈಶ್ವರಪ್ಪ, ಪಕ್ಷದ ವಕ್ತಾರ ಗಣೇಶ್‌ ಕಾರ್ಣಿಕ್‌, ಮಹೇಶ್‌ ಟೆಂಗಿನಕಾಯಿ ಇದ್ದರು.

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.