ಶಿಕಾರಿಪುರದಿಂದಲೇ ಸ್ಪರ್ಧೆ: ಬಿಎಸ್‌ವೈ ಉಲ್ಟಾ
Team Udayavani, Sep 24, 2017, 6:00 AM IST
ಶಿರಾಳಕೊಪ್ಪ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರದಿಂದಲೇ ಸ್ಪರ್ಧಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಈ ಮೂಲಕ ಉತ್ತರ ಕರ್ನಾಟಕ ಭಾಗದಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಚರ್ಚೆಗೆ ತೆರೆ ಎಳೆದಿರುವ ಯಡಿಯೂರಪ್ಪ, ನನ್ನ ರಾಜಕೀಯ ಜೀವನಕ್ಕೆ ಶಕ್ತಿ ಕೊಟ್ಟ ಕ್ಷೇತ್ರ ಶಿಕಾರಿಪುರದಿಂದಲೇ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ಶನಿವಾರ ಪಟ್ಟಣದ ನೇರಲಗಿಯಲ್ಲಿ ನಡೆದ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,” ಶಿಕಾರಿಪುರದಿಂದಲೇ ಸ್ಪರ್ಧಿಸಬೇಕೆಂಬುದು ಕಾರ್ಯಕರ್ತರ ಒತ್ತಾಸೆಯಾಗಿದೆ. ಕೇವಲ ನಾಮಪತ್ರ ಸಲ್ಲಿಸಿ ನೀವು ರಾಜ್ಯ ಪ್ರಚಾರಕ್ಕೆ ಹೋಗಿ. ಚುನಾವಣೆಯಲ್ಲಿ ನಿಮ್ಮನ್ನು ಗೆಲ್ಲಿಸುವ ಹೊಣೆ ತಮ್ಮದೆಂದು ಕಾರ್ಯಕರ್ತರು ಹೇಳಿದ್ದಾರೆ. ಹೀಗಾಗಿ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸುವೆ. ಆದರೆ ಕಾರ್ಯಕರ್ತ ಒತ್ತಾಯ ಸೇರಿದಂತೆ ಕ್ಷೇತ್ರದ ವಿಷಯಗಳನ್ನು ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿಕೊಟ್ಟರೆ ಶಿಕಾರಿಪುರದಿಂದಲೇ ಸ್ಪರ್ಧಿಸಲು ಅನುವು ಮಾಡಿಕೊಡಬಹುದು’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
“ನನಗೆ ಕ್ಷೇತ್ರದ ಮತದಾರರ ಮೇಲೆ ಸಂಪೂರ್ಣ ವಿಶ್ವಾಸವಿದೆ. ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ 6ನೇ ಅತಿ ಹೆಚ್ಚು ಮತ ಗಳಿಸಿದ ಕ್ಷೇತ್ರ ಎಂಬ ಹೆಗ್ಗಳಿಕೆ ಶಿಕಾರಿಪುರಕ್ಕಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ 150 ಕ್ಷೇತ್ರದಲ್ಲಿ ಗೆಲ್ಲಬೇಕಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan: ದರ್ಶನ್ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Session: ವಕ್ಫ್ ಜೊತೆ ಬಿಪಿಎಲ್ ಹೋರಾಟಕ್ಕೆ ಬಿಜೆಪಿ ಸಜ್ಜು
Operation Fear: ಕಾಂಗ್ರೆಸ್ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.