Threat to life; ಮಾಜಿ ಸಚಿವ ಹಾಲಪ್ಪ ವಿರುದ್ಧ ದೂರು ದಾಖಲು
43 ಜನರ ವಿರುದ್ಧ ಎಫ್‌ಐಆರ್ ದಾಖಲು
Team Udayavani, Nov 9, 2023, 12:45 AM IST
ಸಾಗರ: ನಗರದ ಜನತಾ ಶಾಲೆ ಎದುರಿನ ನಿವೇಶನಕ್ಕೆ ಸಂಬಂಧಿಸಿದಂತೆ ಜುಲೈ 10ರಂದು ನಡೆದ ಪ್ರತಿಭಟನೆ ಸಂದರ್ಭದಲ್ಲಿ ಮಾಜಿ ಸಚಿವ ಎಚ್. ಹಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಬಿಜೆಪಿ ನಗರ ಅಧ್ಯಕ್ಷ ಗಣೇಶ್ ಪ್ರಸಾದ್, ನಗರಸಭೆ ಮಾಜಿ ಅಧ್ಯಕ್ಷೆ ಮಧುರಾ ಶಿವಾನಂದ್ ಅವರೂ ಸೇರಿದಂತೆ 43 ಜನರ ವಿರುದ್ಧ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಪೊಲೀಸ್ ಎಫ್‌ಐಆರ್ ದಾಖಲಾಗಿದೆ.
ನಗರದ ವಿಜಯಕುಮಾರ್ ಪಾಟೀಲ್ ಎಂಬುವವರು ದೂರು ನೀಡಿದ್ದು, ಕೊತ್ವಾಲಕಟ್ಟೆ ಗ್ರಾಮದ ಸರ್ವೆ ನಂ.5/3 ಕ್ಕೆ ಸಂಬಂಧಿಸಿದಂತೆ 13.12 ಗುಂಟೆ ಜಮೀನನ್ನು ಕೃಷ್ಣಮೂರ್ತಿ ಎಂಬುವವರಿಂದ 2019 ರ ಜೂನ್‌ನಲ್ಲಿ ಖರೀದಿಸಿದ್ದೆ. ಅದು ಪಕ್ಕಾಪೋಡಿಯಾಗಿ ಸರ್ವೆ ನಂ. 5/4 ಆಗಿ ಪರಿವರ್ತನೆಯಾದ ನಿವೇಶನದ ವಿಚಾರವಾಗಿ ಆರೋಪಿಗಳು ತೊಂದರೆ ಕೊಡುತ್ತಿದ್ದ ಹಿನ್ನೆಲೆಯಲ್ಲಿ2022 ರಲ್ಲಿ ನ್ಯಾಯಾಲಯದಿಂದ ಪ್ರತಿಬಂಧಕಾದೇಶ ಪಡೆದಿದ್ದೆ. ಈ ವರ್ಷದ ಜುಲೈ 10 ರಂದು ಭೂ ಮಾಪನ ಅಧಿಕಾರಿಗಳು ಬಂದಾಗ ಆರೋಪಿಗಳಾದ ಪ್ರಕಾಶ್ ಕಲಾಲ್, ಅಭಿಷೇಕ್ ಕಲಾಲ್, ರಾಘು ಕಲಾಲ್, ನಿಖಿಲ್ ಕಲಾಲ್ ಸದರಿ ಸ್ವತ್ತಿನಲ್ಲಿ ಅಕ್ರಮ ಪ್ರವೇಶ ಮಾಡಿ, ಬೇಲಿ ಮುರಿದು ದಾಂಧಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಮಾಜಿ ಶಾಸಕ ಹಾಲಪ್ಪ ಜೀವ ಬೆದರಿಕೆ ಹಾಕಿದ್ದಾರೆ, ಮಾಧ್ಯಮಗಳ ಎದುರು ಸುಳ್ಳು ಭಾಷಣ ಮಾಡಿದ್ದಾರೆ. ಈ ಎಲ್ಲ 43 ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸಾಗರ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ನ್ಯಾಯಾಲಯದ ನಿರ್ದೇಶನದ ಪ್ರಕಾರ ಪೊಲೀಸರು ನ.7 ರಂದು ನ್ಯಾಯಾಲಯಕ್ಕೆ ಎಫ್‌ಐಆರ್ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal: ಸರ್ಕಾರಿ ಬಸ್ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!
Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿ ಬಿಟ್ಟು ವ್ಯಕ್ತಿ ನದಿಗೆ; ಶಂಕೆ
Sagara ಉಪ ಅರಣ್ಯ ಸಂಕ್ಷಣಾಧಿಕಾರಿಗಳ ವಿರುದ್ಧ ಉಗ್ರ ಪ್ರತಿಭಟನೆ;ರತ್ನಾಕರ ಹೊನಗೋಡು ಎಚ್ಚರಿಕೆ
Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ
MUST WATCH
ಹೊಸ ಸೇರ್ಪಡೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ
Mahaveera Hanuma: ಆಲ್ಬಂನಲ್ಲಿ ಹನುಮ ಗಾನ
Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ
Naxal: ಸರ್ಕಾರಿ ಬಸ್ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.