ಸ್ಮಾರ್ಟ್‌ಸಿಟಿ ಕಾಮಗಾರಿ ಚುರುಕುಗೊಳಿಸಿ: ಬಸವರಾಜು
Team Udayavani, Jun 3, 2020, 7:04 AM IST
ಶಿವಮೊಗ್ಗ: ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಚುರುಕುಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ನಿಗದಿತ ಅವಧಿಯ ಒಳಗಾಗಿ ಗುಣಮಟ್ಟದ ಕಾಮಗಾರಿ ನಡೆಸಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜು ತಿಳಿಸಿದರು.
ಮಂಗಳವಾರ ಸ್ಮಾರ್ಟ್ ಸಿಟಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಶಿವಮೊಗ್ಗ ಮಾದರಿ ನಗರವಾಗಿ ಅಭಿವೃದ್ಧಿಗೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ನಗರದಲ್ಲಿರುವ ಎಲ್ಲಾ ಬೀದಿದೀಪಗಳನ್ನು ಬದಲಾಯಿಸಿ ಎಲ್‌ಇಡಿ ದೀಪಗಳನ್ನು ಅಳವಡಿಸಲಾಗುವುದು. ಇದಕ್ಕಾಗಿ ಪ್ರಥಮ ಹಂತದಲ್ಲಿ 22 ಸಾವಿರ ಎಲ್‌ಇಡಿ ದೀಪಗಳನ್ನು ಅಳವಡಿಸಲಾಗುತ್ತಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಪಿಪಿಪಿ ಮಾದರಿಯ ಈ ಯೋಜನೆಯಿಂದಾಗಿ ವಿದ್ಯುತ್ ಗಣನೀಯ ಪ್ರಮಾಣದಲ್ಲಿ ಉಳಿತಾಯವಾಗಲಿದ್ದು, 7ವರ್ಷಗಳ ಉಚಿತ ನಿರ್ವಹಣೆ ಇರಲಿದೆ ಎಂದರು.
ಅಕ್ರಮ- ಸಕ್ರಮ: ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡಗಳ ಸಕ್ರಮಗೊಳಿಸುವ ಪ್ರಸ್ತಾವನೆಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು. ಸಕ್ರಮಗೊಳಿಸುವ ಕುರಿತು ಸ್ಪಷ್ಟವಾದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದ್ದು, ಸಂಪುಟದ ಅನುಮೋದನೆಯೊಂದಿಗೆ ಇದನ್ನು ಅನುಷ್ಠಾನಗೊಳಿಸಲಾಗುವುದು. ಅಕ್ರಮ ನಿರ್ಮಾಣಗಳ ಪಟ್ಟಿಯನ್ನು ಸಿದ್ಧಪಡಿಸಲುಸಮೀಕ್ಷೆ ನಡೆಸಲು ಸೂಚಿಸಲಾಗಿದ್ದು, ನಿಗದಿತ ಸಮಯದ ಒಳಗಾಗಿ ಸಕ್ರಮೀಕರಣ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು.
ವಾಜಪೇಯಿ ಬಡಾವಣೆ ಸಮಸ್ಯೆ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ವಾಜಪೇಯಿ ಬಡಾವಣೆ ಸಮಸ್ಯೆಗೆ ಮುಕ್ತಿ ದೊರಕಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಈಗಾಗಲೇ ಅಡ್ವೋಕೇಟ್ ಜನರಲ್ ಅವರೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಪ್ರಕರಣ ಹಿಂತೆಗೆದುಕೊಳ್ಳಲು ಮನವಿ ಮಾಡಲಾಗಿದೆ ಎಂದರು.
ಸ್ಥಳ ಪರಿಶೀಲನೆ: ಸಚಿವರು ಶಿವಮೊಗ್ಗ ನಗರದ ಬಸ್ ನಿಲ್ದಾಣದಿಂದ ಆಲ್ಕೋಳ ವೃತ್ತದವರೆಗೆ ನಡೆಯುತ್ತಿರುವ ಮಾದರಿ ರಸ್ತೆ ಕಾಮಗಾರಿ, ವಿನೋಬಾ ನಗರದ ರಸ್ತೆ ಬದಿ ಪಾದಚಾರಿ ರಸ್ತೆ ಕಾಮಗಾರಿ, ಪುರಲೆ ಒಳಚರಂಡಿ ಕಾಮಗಾರಿ, ಲಕ್ಷ್ಮೀ ಥಿಯೇಟರ್ ವೃತ್ತ ಅಭಿವೃದ್ಧಿ ಕಾಮಗಾರಿ, ರಾಜೇಂದ್ರ ನಗರದಲ್ಲಿ ನಡೆಯುತ್ತಿರುವ ಉದ್ಯಾನವನ, ಒಳಾಂಗಣ ಕ್ರೀಡಾಂಗಣ ಸಮುತ್ಛಯ, ಜಿಪಂ ಮುಂಭಾಗ ನೀರಿನ ಟ್ಯಾಂಕ್ ನಿರ್ಮಾಣ, ಬೊಮ್ಮನಕಟ್ಟೆ ಕೆರೆ ಅಭಿವೃದ್ಧಿ, ಆದಿಚುಂಚನಗಿರಿ ಬಳಿ ಸಮುತ್ಛಯ ನಿರ್ಮಾಣ ಕಾಮಗಾರಿಗಳನ್ನು ವೀಕ್ಷಿಸಿದರು.
ಜನರ ಸಹಭಾಗಿತ್ವ ಅತಿ ಅಗತ್ಯ: ಜನರ ಸಹಭಾಗಿತ್ವ ಇದ್ದರೆ ಮಾತ್ರ ಯಾವುದೇ ಕಾಮಗಾರಿ ಯಶಸ್ವಿಯಾಗಲು ಸಾಧ್ಯವಿದೆ. ಬಹುತೇಕ ಎಲ್ಲಾ ಬಡಾವಣೆಗಳಲ್ಲಿ ಸುಂದರವಾದ ಉದ್ಯಾನವನಗಳನ್ನು ನಿರ್ಮಿಸಲಾಗುತ್ತಿದ್ದು, ಸ್ಥಳೀಯ ನಿವಾಸಿಗಳು ಸಂಘ ರಚಿಸಿ ಅವುಗಳ ಮೇಲುಸ್ತುವಾರಿ ನೋಡಿಕೊಳ್ಳಬೇಕು. ರಾಜೇಂದ್ರ ನಗರದಲ್ಲಿ ನೀರಿನ ಕಾಲುವೆಗೆ ತ್ಯಾಜ್ಯ ವಸ್ತುಗಳನ್ನು ಹಾಕದಂತೆ ಸ್ಥಳೀಯರೇ ಕ್ರಮ ಕೈಗೊಳ್ಳಬೇಕು. ಇಲ್ಲಿರುವ ಮನೆಗಳ ತ್ಯಾಜ್ಯ ನೀರು ನೇರವಾಗಿ ಕಾಲುವೆ ಸೇರುವಂತೆ ಸಂಪರ್ಕ ಕಲ್ಪಿಸಿದ್ದರೆ ಅದನ್ನು ತೆರವುಗೊಳಿಸಿ ನಿವಾಸಿಗಳಿಗೆ ಎಚ್ಚರಿಕೆ ನೀಡಬೇಕು ಎಂದು ಸಚಿವರು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಮೇಯರ್ ಸುವರ್ಣಾ ಶಂಕರ್, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.