ಭದ್ರಾವತಿಯಲ್ಲಿ ಸಂಪೂರ್ಣ ಸ್ತಬ್ಧ
Team Udayavani, May 25, 2020, 6:59 AM IST
ಭದ್ರಾವತಿ: ಭಾನುವಾರ ಕೋವಿಡ್ 19 ಕರ್ಫ್ಯೂನಿಂದಾಗಿ ನಗರದಲ್ಲಿ ಎಲ್ಲಾ ವ್ಯಾಪಾರ- ವಹಿವಾಟು ಸಂಪೂರ್ಣವಾಗಿ ಸ್ಥಗಿತವಾಗಿತ್ತು.
ಔಷಧಾಲಯ, ಹಾಲು ಮಾರಾಟ ಕೇಂದ್ರ, ಮಾಂಸದಅಂಗಡಿಗಳನ್ನು ಹೊರತುಪಡಿಸಿದಂತೆ ಉಳಿದ ಎಲ್ಲಾ ಅಂಗಡಿ ಮುಂಗಟ್ಟುಗಳು, ಹೊಟೇಲ್‌ಗಳು, ಮದ್ಯ ಮಾರಾಟ ಅಂಗಡಿಗಳು ಶನಿವಾರ ಸಂಜೆಯಿಂದಲೇ ಮುಚ್ಚಲ್ಪಟ್ಟಿದ್ದವು. ಆಟೋ, ಕೆಎಸ್‌ಆರ್‌ಟಿಸಿ ಬಸ್, ಶಿವಮೊಗ್ಗಕ್ಕೆ ಸಂಚರಿಸುವ ಟೆಂಪೋ ಟ್ರಾಫಿಕ್ಸ್ ಸೇರಿದಂತೆ ಎಲ್ಲಾ ವಾಹನಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದವು. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಸ್ ಹಾಗೂ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು.
ರೈಲ್ವೆ ನಿಲ್ದಾಣದಲ್ಲಿ ಸಹ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿರಲಿಲ್ಲ. ರೈಲ್ವೆ ನಿಲ್ದಾಣದಲ್ಲಿ ಕೆಲಸಗಾರರು ಫ್ಲ್ಯಾಟ್‌ಫಾರಂ ಅನ್ನು ಸ್ವತ್ಛಗೊಳಿಸುವಲ್ಲಿ ಮಗ್ನರಾಗಿದ್ದರು. ಮುಖ್ಯರಸ್ತೆಯಲ್ಲಿ ಅನಗತ್ಯವಾಗಿ ಬೈಕ್,ಸ್ಕೂಟರ್‌ಗಳಲ್ಲಿ ಸಂಚರಿಸುತ್ತಿದ್ದವರನ್ನು ಪೊಲೀಸರು ಹಿಡಿದು ಪ್ರಕರಣ ದಾಖಲಿಸುವ ಬೆದರಿಕೆ ಹಾಕಿ ಅವರನ್ನು ಮನೆಗೆ ಹಿಂದಿರುಗುವಂತೆ ಮಾಡುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.