ಕಾಂಗ್ರೆಸ್‍ಗೆ ನಾಯಕತ್ವ, ಸಂಘಟನೆ, ಸಾಧನೆ ಇಲ್ಲ: ಈಶ್ವರಪ್ಪ
Team Udayavani, Oct 22, 2021, 1:04 PM IST
ಶಿವಮೊಗ್ಗ: ಕಾಂಗ್ರೆಸ್ ಗೆ ನಾಯಕತ್ವವೂ ಇಲ್ಲ, ಸಂಘಟನೆಯೂ ಇಲ್ಲ, ಸಾಧನೆಯೂ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಶುಕ್ರವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಸಂಘಟನೆ, ಸಾಧನೆ, ನಾಯಕತ್ವದ ಆಧಾರದ ಮೇಲೆ ಚುನಾವಣೆ ನಡೆಸುತ್ತಿದ್ದೇವೆ. ಚುನಾವಣೆಯಲ್ಲಿ ಕಾಂಗ್ರೆಸ್ಸಿಗರು ಬಿಜೆಪಿ ನಾಯಕರ ಬಗ್ಗೆ ವೈಯಕ್ತಿಕ ಟೀಕೆ ಮಾಡುತ್ತಿರುವುದು ಸರಿಯಲ್ಲ. ಹಾನಗಲ್ ಹಾಗೂ ಸಿಂಧಗಿ ಎರಡು ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳೇ ಗೆಲ್ಲಲಿದ್ದಾರೆ. ಬೇಕಿದ್ದರೆ ಅವರ ಸರ್ಕಾರದ ಅವಧಿಯಲ್ಲಿ ಮಾಡಿದ ಸಾಧನೆಗಳನ್ನು ಜನರ ಮುಂದಿಟ್ಟು ಚುನಾವಣೆ ನಡೆಸಲಿ ಎಂದು ಸವಾಲೆಸೆದರು.
ಕಾಂಗ್ರೆಸ್ ನಲ್ಲಿ ನಾಯಕತ್ವವೇ ಇಲ್ಲ. ಸೋನಿಯಾ ಇಲ್ಲವೇ ರಾಹುಲ್ ಗಾಂಧಿ ಹೆಸರು ಹೇಳುತ್ತಾರೆಯೇ? ಡಿ.ಕೆ.ಶಿವಕುಮಾರ್ ಹೆಸರು ಹೇಳಿದರೆ ಸಿದ್ದರಾಮಯ್ಯ ಅವರಿಗೆ ಆಗುವುದಿಲ್ಲ. ಸಿದ್ದರಾಮಯ್ಯ ಹೆಸರು ಹೇಳಿದರೆ ಡಿ.ಕೆ.ಶಿವಕುಮಾರ್ ಗೆ ಆಗುವುದಿಲ್ಲ. ಇನ್ನೆಲ್ಲಿಯ ನಾಯಕತ್ವ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಟ್ರೇಲರ್, ಟೀಸರ್, ಸಾಂಗ್ಸ್ ಧಮಾಕ: ರಿಲೀಸ್ ಗೆ ತಯಾರಾದ ಚಿತ್ರಗಳ ಶರವೇಗದ ಪ್ರಮೋಷನ್
ಹಾನಗಲ್ ಹಾಗೂ ಸಿಂಧಗಿಯಲ್ಲಿ ಕಾಂಗ್ರೆಸ್ ಗೆ ನಾಯಕತ್ವವೂ ಇಲ್ಲ, ಸಂಘಟನೆಯೂ ಇಲ್ಲ. ಎರಡು ಕ್ಷೇತ್ರಗಳಲ್ಲಿ ಮೂರ ಪಕ್ಷದ ಅಭ್ಯರ್ಥಿಗಳೂ ಸ್ಪರ್ಧಿಸಿದ್ದಾರೆ. ಎಲ್ಲರೂ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಮಾತ್ರ ವೈಯಕ್ತಿಕ ಟೀಕೆಗೆ ಇಳಿದಿರುವುದು ಸರಿಯಲ್ಲ ಎಂದು ಹೇಳಿದರು.
ಕೊರೊನಾ ಲಸಿಕಾ ಅಭಿಯಾನದ ವಿಷಯದಲ್ಲಿ ಮುಂದುವರಿದ ದೇಶಗಳೇ ಭಾರತ ಹಾಗೂ ನರೇಂದ್ರ ಮೋದಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿವೆ. ಕೊರೊನಾ ಲಸಿಕೆ ಸಾಧನೆ ನನ್ನಿಂದಲೇ ಆಗಿದ್ದು ಎಂದು ನರೇಂದ್ರ ಮೋದಿಯವರು ಎಲ್ಲಿಯೂ ಹೇಳಿಲ್ಲ. ಬದಲಿಗೆ ಲಸಿಕೆ ತಯಾರಿಸಿದ ವಿಜ್ಞಾನಿಗಳು, ಡಾಕ್ಟರ್ ಗಳು, ನರ್ಸ್ ಗಳು, ಡಿ ದರ್ಜೆ ನೌಕರರು ಹಾಗೂ ಸಂಘಟನೆಗಳನ್ನು ಹೊಗಳುತ್ತಿದ್ದಾರೆ. ನರೇಂದ್ರ ಮೋದಿಯಂಥವರು ನಮ್ಮ ಪ್ರಧಾನಿಯಾಗಿರುವುದು ನಮಗೆ ಹೆಮ್ಮೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.