Sagara; ರಾಜ್ಯವ್ಯಾಪಿಯಲ್ಲಿ ಸೇಡಿನ ರಾಜಕಾರಣಕ್ಕೆ ಇಳಿದಿರುವ ಕಾಂಗ್ರೆಸ್; ಹಾಲಪ್ಪ ಆರೋಪ


Team Udayavani, Jan 3, 2024, 6:23 PM IST

Sagara; ರಾಜ್ಯವ್ಯಾಪಿಯಲ್ಲಿ ಸೇಡಿನ ರಾಜಕಾರಣಕ್ಕೆ ಇಳಿದಿರುವ ಕಾಂಗ್ರೆಸ್; ಹಾಲಪ್ಪ ಆರೋಪ

ಸಾಗರ: ಸಾಗರ ಕ್ಷೇತ್ರ ಮಾತ್ರವಲ್ಲದೆ ರಾಜ್ಯವ್ಯಾಪಿಯಲ್ಲಿ ಕಾಂಗ್ರೆಸ್ ಸೇಡಿನ ರಾಜಕಾರಣಕ್ಕೆ ಇಳಿದಿದೆ. ಯಾವಾಗಲೋ ನಡೆದ ರಾಮಮಂದಿರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹುಬ್ಬಳ್ಳಿಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರಿನಲ್ಲಿ ಸಂಸದರ ಸಹೋದರನನ್ನು ಟಾರ್ಗೇಟ್ ಮಾಡಲಾಗಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಚ್.ಹಾಲಪ್ಪ ಹರತಾಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ವತಿಯಿಂದ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನಿಯೋಜನೆಗೊಂಡಿರುವ ಹಿನ್ನೆಲೆಯಲ್ಲಿ ನೀಡಲಾದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿ, ಸಾಗರ ಕ್ಷೇತ್ರವ್ಯಾಪ್ತಿಯಲ್ಲಿ ಬಿಜೆಪಿ ಪರವಾಗಿದ್ದವರನ್ನು ಗುರುತಿಸಿ ಅವರ ಮೇಲೆ ಪ್ರಕರಣ ದಾಖಲು ಮಾಡಲಾಗುತ್ತಿದೆ. ಈಗಾಗಲೇ ಹಲವು ರೈತರ ಮೇಲೆ ಪ್ರಕರಣ ದಾಖಲಾಗಿದ್ದು, ಕೆಲವು ರೈತರನ್ನು ಜೈಲಿಗೆ ಸಹ ಕಳಿಸಲಾಗಿದೆ.

ಬಿಜೆಪಿ ಕಾರ್ಯಕರ್ತರಿಗೆ ಸೇಡಿನ ರಾಜಕಾರಣವನ್ನು ಎದುರಿಸುವ ಶಕ್ತಿ ಇದೆ. ಈಗಾಗಲೇ ಕ್ಷೇತ್ರವ್ಯಾಪ್ತಿಯಲ್ಲಿ ಬಗರ್‌ಹುಕುಂ, ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ಕೊಡುವುದು ಸೇರಿದಂತೆ ಅನೇಕ ಜ್ವಲಂತ ಸಮಸ್ಯೆಗಳಿವೆ. ಶಾಸಕರು ಶಾಲಾ ವಾರ್ಷಿಕೋತ್ಸವದಲ್ಲಿ ಮುಳುಗಿ ಹೋಗಿದ್ದಾರೆ. ಈ ಬಗ್ಗೆ ಜನಜಾಗೃತಿ ಮೂಡಿಸುವ ಜೊತೆಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಒಟ್ಟಾಗಿ ಪ್ರಯತ್ನ ಮಾಡೋಣ ಎಂದು ಕರೆ ನೀಡಿದರು.

ಬಿಜೆಪಿ ಮಹಿಳಾ ಪ್ರಮುಖರಾದ ಡಾ. ರಾಜನಂದಿನಿ ಮಾತನಾಡಿ, ಕ್ಷೇತ್ರದ ಶಾಸಕರು ಅಭಿವೃದ್ಧಿ ಮರೆತು ದ್ವೇಷದ ರಾಜಕಾರಣಕ್ಕೆ ಒತ್ತು ನೀಡುತ್ತಿದ್ದಾರೆ. ತಮ್ಮ ಗೆಲುವಿಗೆ ಕಾರಣವಾಗಿರುವ ಕಾಗೋಡು ತಿಮ್ಮಪ್ಪ ಅವರ ವಿದ್ಯಾಸಂಸ್ಥೆಗಳನ್ನು ಹಾಲಿ ಶಾಸಕರು ಟಾರ್ಗೆಟ್ ಮಾಡಿದ್ದಾರೆ. ಸೋದರ ಮಾವ, ಭೀಷ್ಮ ಎಂದು ರಾಜಕೀಯ ಭಾಷಣ ಮಾಡಿ ಈಗ ಕಾಗೋಡು ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. 1980ರಿಂದ ಎಲ್ಲ ದಾಖಲೆ ಇದ್ದರೂ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಶಾಲಾ ಜಾಗದಲ್ಲಿ ಕಟ್ಟಡ ಕಟ್ಟಲು ಅನಗತ್ಯ ತೊಂದರೆ ಶಾಸಕರು ನೀಡುತ್ತಿದ್ದಾರೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಮಾತನಾಡಿ, ಕ್ಷೇತ್ರದಲ್ಲಿ ಹೊಸ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಹಿಂದಿನ ನಮ್ಮ ಶಾಸಕರಾಗಿದ್ದ ಹರತಾಳು ಹಾಲಪ್ಪ ತಂದಿರುವ ಅಭಿವೃದ್ಧಿ ಕೆಲಸಗಳಿಗೆ ಮತ್ತೆಮತ್ತೆ ಚಾಲನೆ ನೀಡಲಾಗುತ್ತಿದೆ. ಹಾಲಿ ಶಾಸಕರು ನಿರ್ವಹಿಸುತ್ತಿರುವ ಎಲ್ಲಾ ಕಾಮಗಾರಿ ನಮ್ಮ ಅವಧಿಯದ್ದು ಎಂದು ಬೇಕಾದರೆ ದಾಖಲೆ ಸಮೇತ ನಾವು ಚರ್ಚೆಗೆ ಸಿದ್ದರಿದ್ದೇವೆ.

ರಾಜ್ಯದಲ್ಲಿ ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಹಾಲಪ್ಪ ಅವರಿಗೆ ಉಪಾಧ್ಯಕ್ಷರಂತಹ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲಾದ್ಯಂತ ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಗಮನ ಹರಿಸಲಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ರತ್ನಾಕರ ಹೊನಗೋಡು ಮಾತನಾಡಿದರು. ವೇದಿಕೆಯಲ್ಲಿ ಲೋಕನಾಥ ಬಿಳಿಸಿರಿ, ಗಣೇಶಪ್ರಸಾದ್, ಮಧುರಾ ಶಿವಾನಂದ್, ಆರ್.ಶ್ರೀನಿವಾಸ್ ಮೇಸ್ತ್ರಿ, ವಿ.ಮಹೇಶ್, ಅರುಣ ಕುಗ್ವೆ, ಸಂತೋಷ್ ಶೇಟ್, ಸತೀಶ್ ಕೆ. ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Khnadre-Toxic

Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ

Sports

Sports; ‘ಟಾಪ್‌’ ಕ್ರೀಡಾಪಟುಗಳ ಸಂಖ್ಯೆಗೆ ಕೇಂದ್ರದಿಂದ ಕತ್ತರಿ?

Nikhil-CPY

Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ

Voter-list

Voter List: ಕರಡು ಮತದಾರರ ಪಟ್ಟಿ ಪ್ರಕಟ: 221 ಕ್ಷೇತ್ರಗಳಲ್ಲಿ 5.44 ಕೋಟಿ ಮತದಾರರು

Karnataka: “ಹಲ್ಮಿಡಿ’ ಶಾಸನದ ಕಲ್ಲಿನ ಪ್ರತಿಕೃತಿ ಎಲ್ಲ ಜಿಲ್ಲೆಗಳಲ್ಲಿ ಪ್ರತಿಷ್ಠಾಪನೆ

Karnataka: “ಹಲ್ಮಿಡಿ’ ಶಾಸನದ ಕಲ್ಲಿನ ಪ್ರತಿಕೃತಿ ಎಲ್ಲ ಜಿಲ್ಲೆಗಳಲ್ಲಿ ಪ್ರತಿಷ್ಠಾಪನೆ

Dina Bhavishya

Daily Horoscope; ಶಾರೀರಿಕ ಶ್ರಮ ಮಾಡುವವರಿಗೆ ಆರೋಗ್ಯದ ಸಮಸ್ಯೆ, ಅಪವಾದದ ಭಯ

BYV-Hasan

Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್‌: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Garlic2

Shivamogga: ಆತಂಕ ತಂದಿದ್ದ ʼಚೀನಾ ಬೆಳ್ಳುಳ್ಳಿ’; ಸುರಕ್ಷಿತ ಎಂದ ಲ್ಯಾಬ್‌ ವರದಿ

6-sagara

Sagara: ಸೋಷಿಯಲ್ ಮೀಡಿಯಾದಲ್ಲಿ ಕಿಡಿಗೇಡಿತನ: ಪೊಲೀಸರಿಂದ ಎಚ್ಚರಿಕೆ

11

Anandapura: ಮೋರಿ ಕುಸಿದು ಭಾರಿ ಗಾತ್ರದ ಗುಂಡಿ; ಗ್ರಾಮಸ್ಥರ ಆಕ್ರೋಶ

10

Sagara: ಒಂಬತ್ತನೇ ದಿನಕ್ಕೆ ಕಾಲಿರಿಸಿದ ರೈತರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

9

Sagara: ಕರ್ತವ್ಯ ಮಾಡಲು ಇಷ್ಟ ಇಲ್ಲ ಎಂದರೆ ಬೇರೆಡೆ ಹೋಗಿ; ಶಾಸಕ ಗೋಪಾಲಕೃಷ್ಣ ಬೇಳೂರು

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Khnadre-Toxic

Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ

Sports

Sports; ‘ಟಾಪ್‌’ ಕ್ರೀಡಾಪಟುಗಳ ಸಂಖ್ಯೆಗೆ ಕೇಂದ್ರದಿಂದ ಕತ್ತರಿ?

Nikhil-CPY

Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ

Voter-list

Voter List: ಕರಡು ಮತದಾರರ ಪಟ್ಟಿ ಪ್ರಕಟ: 221 ಕ್ಷೇತ್ರಗಳಲ್ಲಿ 5.44 ಕೋಟಿ ಮತದಾರರು

Kumbra

Mangaluru: ಉಪಕರಣಗಳ ಸಹಿತ ಮೊಬೈಲ್‌ ಟವರ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.