ಮೆಸ್ಕಾಂ ಕ್ರಮಕ್ಕೆ ಕಾಂಗ್ರೆಸ್ ಆಕ್ರೋಶ
Team Udayavani, Mar 17, 2019, 8:00 AM IST
ಸಾಗರ: ತಾಲೂಕಿನ ಗ್ರಾಮೀಣ ಭಾಗದ ರೈತರು ಮತ್ತು ವಿದ್ಯಾರ್ಥಿಗಳ ಸ್ಥಿತಿ ವಿದ್ಯುತ್ ಇಲ್ಲದೆ ಅತ್ಯಂತ ಶೋಚನೀಯವಾಗಿದೆ. ಮುಂದಿನ ಎಂಟು ದಿನಗಳೊಳಗೆ ಸರ್ಕಾರ ನಿಗದಿಪಡಿಸಿದ ವಿದ್ಯುತ್ ನೀಡದೆ ಹೋದಲ್ಲಿ ಮೆಸ್ಕಾಂ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಎಚ್ಚರಿಕೆ ನೀಡಿದರು.
ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಕಾಂಗ್ರೆಸ್ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸರ್ಕಾರ ಗ್ರಾಮೀಣ ಪ್ರದೇಶಗಳಿಗೆ 7 ಗಂಟೆ ತ್ರೀಫೇಸ್ ವಿದ್ಯುತ್ ನೀಡಬೇಕು ಎನ್ನುವ ಕಾಯ್ದೆ ಜಾರಿಗೆ ತಂದಿದೆ. ಆದರೆ ಮೆಸ್ಕಾಂ ತಾಲೂಕಿನ ಕಸಬಾ, ಭಾರಂಗಿ, ಆನಂದಪುರ, ಆವಿನಹಳ್ಳಿ ಸೇರಿದಂತೆ ಎಲ್ಲ ಭಾಗಗಳಿಗೂ ಕನಿಷ್ಟ ಎರಡು ಗಂಟೆ ವಿದ್ಯುತ್ ನೀಡುತ್ತಿಲ್ಲ. ರೈತರು ಪಂಪ್‌ಸೆಟ್ ನಂಬಿಕೊಂಡು ಬೆಳೆ ಬೆಳೆದಿದ್ದು, ವಿದ್ಯುತ್ ಸಮಸ್ಯೆಯಿಂದಾಗಿ ಬೆಳೆಗಳಿಗೆ ನೀರು ಹಾಯಿಸಲಾಗದೆ ಅದು ಒಣಗಿ ಹೋಗುವ ಸ್ಥಿತಿ ನಿರ್ಮಾಣವಾಗಿದೆ ಎಂದರು.
ಇದು ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯವಾಗಿದೆ. ವಿದ್ಯಾರ್ಥಿಗಳು ರಾತ್ರಿ ಹೊತ್ತು ಕುಳಿತುಕೊಂಡು ಓದಲು ಮೆಸ್ಕಾಂ ಶಾಪವಾಗಿ ಪರಿಣಮಿಸಿದ್ದು, ವಿದ್ಯುತ್ ಅಸಮರ್ಪಕತೆಯಿಂದ ವಿದ್ಯಾರ್ಥಿಗಳು ಓದಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಮೆಸ್ಕಾಂ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಸಮರ್ಪಕ ವಿದ್ಯುತ್ ನೀಡಲು ಮನವಿ ಮಾಡಿದ್ದರೂ ಅವರು ಕೇಳುವ ಸ್ಥಿತಿಯಲ್ಲಿ ಇಲ್ಲ. ರೈತರು, ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ತೊಂದರೆ ಕೊಟ್ಟರೆ ಮೆಸ್ಕಾಂ ವಿದ್ಯುತ್ ನೀತಿ ವಿರುದ್ಧ ಉಗ್ರ ಪ್ರತಿಭಟನೆ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪ್ರಮುಖರಾದ ಜಿ.ಕೆ. ಭೈರಪ್ಪ, ಎನ್. ಲಲಿತಮ್ಮ, ಆನಂದ ಭೀಮನೇರಿ, ರವಿ ಜಂಬಗಾರು ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.