B. S. Yediyurappa ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಮುಖಂಡರು
ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು
Team Udayavani, Aug 18, 2024, 4:17 PM IST
ಶಿಕಾರಿಪುರ: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಭಾನುವಾರ ಪ್ರತಿಭಟನೆ ನಡೆಸಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿದ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗುತ್ತಾ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಯಡಿಯೂರಪ್ಪ ಮನೆ ರಸ್ತೆ ತುದಿಯಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದರು.
ನಂತರ ರಾಜ್ಯಪಾಲರು,ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ದಿಕ್ಕಾರ ಕೂಗಿ ಯಡಿಯೂರಪ್ಪ ನಿವಾಸಕ್ಕೆ ನುಗ್ಗಲು ಪ್ರಯತ್ನಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋಗಿ ಬಿಡುಗಡೆಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
MUST WATCH
ಹೊಸ ಸೇರ್ಪಡೆ
Israel; ಪ್ರಧಾನಿ ನಿವಾಸಕ್ಕೆ ಬಾಂಬ್ ದಾಳಿ: 3 ಮಂದಿ ಸೆರೆ
Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ
PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.