ಕಾಂಗ್ರೆಸ್ ನವರಿಗೆ ಬಿಟ್ ಕಾಯಿನ್ ನ ಅರ್ಥವೇ ಗೊತ್ತಿಲ್ಲ: ರೇಣುಕಾಚಾರ್ಯ ವ್ಯಂಗ್ಯ
Team Udayavani, Dec 11, 2021, 4:07 PM IST
ಶಿವಮೊಗ್ಗ: ಕಾಂಗ್ರೆಸ್ ನವರು ಬಿಟ್ ಕಾಯಿನ್ ಎನ್ನುತ್ತಿದ್ದಾರೆ. ಆದರೆ ಬಿಟ್ ಕಾಯಿನ್ ಎಂದರೆ ಏನೆಂದು ಕಾಂಗ್ರೆಸ್ ನವರಿಗೆ ಅರ್ಥವೇ ಗೊತ್ತಿಲ್ಲ. ಸುರ್ಜೇವಾಲ ಹಾಗೂ ಕಾಂಗ್ರೆಸ್ ಮುಖಂಡರು ದಾಖಲೆ ಬಿಡುಗಡೆ ಮಾಡುತ್ತಾರೆ ಎಂದು ಹೇಳಿದ್ದರು. ದಾಖಲೆ ಇದ್ದಿದ್ದರೆ ಬಿಡುಗಡೆ ಮಾಡಲು ಇಷ್ಟು ಸಮಯ ಬೇಕೆ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ಎಂದರೆ ಕಾಂಗ್ರೆಸ್, ಮಾಡಬಾರದ ಭ್ರಷ್ಟಾಚಾರದ ಕರ್ಮಕಾಂಡ ಮಾಡಿದ್ದು ಕಾಂಗ್ರೆಸ್. ಕಾಂಗ್ರೆಸ್ ರಾಜಕೀಯ ಪಕ್ಷವಲ್ಲ ಬದಲಾಗಿ ಸ್ವಾತಂತ್ರಕ್ಕಾಗಿ ಹೋರಾಟ ಮಾಡಿದ ಸಂಸ್ಥೆ. ಸ್ವಾತಂತ್ರ್ಯ ನಂತರ ಕಾಂಗ್ರೆಸ್ ವಿಸರ್ಜನೆಯಾಗಿತ್ತು. ಆದರೆ ಕಾಂಗ್ರೆಸ್ ಹೆಸರಿನಲ್ಲಿ ಈಗ ನಕಲಿ ಕಾಂಗ್ರೆಸ್ಸಿಗರು ಭ್ರಷ್ಟಾಚಾರ ನಡೆಸುತ್ತಿದ್ದಾರೆ. ಬಿಜೆಪಿ ಬಗ್ಗೆ ಆರೋಪ ಮಾಡುವ ಮೊದಲು ನಿಮ್ಮ ತಟ್ಟೆಯಲ್ಲಿ ಏನು ಬಿದ್ದಿದೆ ಎಂದು ನೋಡಿಕೊಳ್ಳಲಿ. ಬಿಜೆಪಿ ಪಕ್ಷ ಪಾರದರ್ಶಕವಾಗಿದೆ ಎಂದರು.
ಬದಲಾವಣೆ ಊಹಾಪೋಹ: ಸಿಎಂ ಬದಲಾವಣೆ ಎಂದು ನಮ್ಮ ಪಕ್ಷದ ಯಾವುದೇ ಮುಖಂಡರು ಹೇಳಿಕೆ ನೀಡಿಲ್ಲ. ಸಿಎಂ ಬದಲಾವಣೆ ವಿಚಾರ ಮಾಧ್ಯಮಗಳ ಉಹಾಪೋಹ. ಸಿಎಂ ಬದಲಾವಣೆ ಹೇಳಿಕೆಗೆ ಸಂಬಂಧಿಸಿದಂತೆ ಈಶ್ವರಪ್ಪ ಅವರು ಸ್ಪಷ್ಟನೆಯನ್ನೂ ನೀಡಿದ್ದಾರೆ. ಹೀಗಾಗಿ ಈ ಬಗ್ಗೆ ಚರ್ಚೆ ಬೇಡ ಎಂದು ರೇಣುಕಾಚಾರ್ಯ ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಹಾಗೂ ರಾಷ್ಟ್ರೀಯ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ. ಯಾರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕು ಹಾಗೂ ಯಾರನ್ನು ಕೈಬಿಡಬೇಕು ಎಂದು ಅವರೇ ತೀರ್ಮಾನಿಸಲಿದ್ದಾರೆ. ಹೊಸ ಮುಖಗಳಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂಬುದು ಶಾಸಕರ ಆಶಯವಾಗಿದೆ. ನನಗೆ ಮಂತ್ರಿ ಪದವಿ ನೀಡಿ ಎಂದು ಹೇಳುವುದಿಲ್ಲ. ಹೊಸಮುಖಗಳನ್ನು ಸಂಘಟನೆಗೆ ಜೋಡಿಕೊಳ್ಳಿಸಬೇಕು. ಹೀಗಾಗಿ ಹೊಸಬರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹಕ್ಕೊತ್ತಾಯ ಮಾಡುತ್ತೇನೆ ಎಂದ ರೇಣುಕಾಚಾರ್ಯ ಅವರು, ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷದ ವರಿಷ್ಟರು ತೀರ್ಮಾನ ಮಾಡಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.