ಆಸ್ಪತ್ರೆ ಆಹಾರ ವ್ಯವಸ್ಥೆಯಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ; ತನಿಖೆಗೆ ಕಾಂಗ್ರೆಸ್ ಆಗ್ರಹ
Team Udayavani, Jun 14, 2022, 3:59 PM IST
ಸಾಗರ: ಇಲ್ಲಿನ ಉಪವಿಭಾಗೀಯ ಆಸ್ಪತ್ರೆ ಮತ್ತು ತಾಯಿಮಗು ಆಸ್ಪತ್ರೆಗೆ ಸರಬರಾಜು ಮಾಡುವ ಆಹಾರ ವ್ಯವಸ್ಥೆಯಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದ್ದು ಶಾಸಕರು ತಕ್ಷಣ ತನಿಖೆ ನಡೆಸಿ ತಪ್ಪಿತಸ್ತರ ವಿರುದ್ಧ ಸೂಕ್ತ ಕ್ರಮಕ್ಕೆ ಆದೇಶ ಮಾಡಬೇಕು ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಐ.ಎನ್.ಸುರೇಶಬಾಬು ಒತ್ತಾಯಿಸಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಆಸ್ಪತ್ರೆಗಳಿಗೆ 33 ರೂಪಾಯಿಗೆ ನೀಡುತ್ತಿದ್ದ ಆಹಾರವನ್ನು ಈಗ 190 ರೂಪಾಯಿಗೆ ಸರಬರಾಜು ಮಾಡಲು ಟೆಂಡರ್ ನೀಡಲಾಗಿದೆ. ಇದರಿಂದ ಸರ್ಕಾರಕ್ಕೆ ದೊಡ್ಡಮಟ್ಟದಲ್ಲಿ ನಷ್ಟ ಉಂಟಾಗಲಿದೆ ಎಂದು ಹೇಳಿದರು.
ಉಪವಿಭಾಗೀಯ ಆಸ್ಪತ್ರೆಯಲ್ಲಿ ಕಾಗೋಡು ತಿಮ್ಮಪ್ಪ ಅವರು ಅಧಿಕಾರದಲ್ಲಿದ್ದಾಗ ಸುಸಜ್ಜಿತವಾದ ಅಡುಗೆಕೋಣೆ ನಿರ್ಮಿಸಿ ಕೊಟ್ಟಿದ್ದಾರೆ. ಅಡುಗೆ ಮಾಡಲು ಇಬ್ಬರು ಸಿಬ್ಬಂದಿಗಳಿದ್ದಾರೆ. ಆದರೆ ಉಪವಿಭಾಗೀಯ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಪರಪ್ಪ ಅಡುಗೆ ಕೋಣೆ ಸುಸಜ್ಜಿತವಾಗಿಲ್ಲ ಎಂದು ಸುಳ್ಳು ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ ಕೊಟ್ಟಿದ್ದಾರೆ ಎನ್ನುವ ಚರ್ಚೆ ನಡೆಯುತ್ತಿದೆ. ಸಾಗರದಲ್ಲಿ ಗುಣಮಟ್ಟದ ಆಹಾರ ತಯಾರಿಸುವವರು ಇದ್ದಾಗ್ಯೂ ಡಾ. ಪರಪ್ಪ ಅವರು ಕಡೂರಿನ ವ್ಯಕ್ತಿಯೊಬ್ಬರಿಗೆ ಆಹಾರ ಸರಬರಾಜು ಮಾಡಲು ಟೆಂಡರ್ ನೀಡಿದ್ದು ಅನೇಕ ಅನುಮಾನಗಳಿಗೆ ಕಾರಣವಾಗಿದೆ ಎಂದು ದೂರಿದರು.
ಟೆಂಡರ್ ನೀಡಿದ ವ್ಯಕ್ತಿ ಸಾಗರದ ಬಿಜೆಪಿ ಮುಖಂಡರೊಬ್ಬರಿಗೆ ಒಳಗುತ್ತಿಗೆ ನೀಡಿದ್ದಾನೆ. ಬಿಜೆಪಿ ಮುಖಂಡರು ತಮ್ಮ ಹೋಟೆಲ್‌ನಲ್ಲಿ ಆಹಾರ ತಯಾರು ಮಾಡಿ ರೋಗಿಗಳಿಗೆ ವಿತರಣೆ ಮಾಡುತ್ತಿದ್ದಾರೆ. ಗುತ್ತಿಗೆದಾರರನ್ನು ಬದಲಾವಣೆ ಮಾಡಿದ್ದು ಆರೋಗ್ಯ ರಕ್ಷಾ ಸಮಿತಿಯಲ್ಲಿ ಚರ್ಚೆ ಮಾಡಿಲ್ಲ. ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷರಾದ ಶಾಸಕರಿಗೆ, ಕಾರ್ಯದರ್ಶಿಯಾಗಿರುವ ಉಪವಿಭಾಗಾಧಿಕಾರಿಗಳಿಗೆ ಟೆಂಡರ್ ಕಡೂರಿನವರಿಗೆ ಕೊಟ್ಟಿದ್ದು ಬಹುಶಃ ಅರಿವಿಗೆ ಬಂದಿಲ್ಲ ಎಂದು ಕಾಣುತ್ತದೆ. ತಕ್ಷಣ ಈ ಕುರಿತು ತನಿಖೆ ನಡೆಯಬೇಕು. ಡಾ. ಪರಪ್ಪ ಆಹಾರ ವಿತರಣಾ ಯೋಜನೆಯಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆಸಿದ್ದಾರೆ. ಹಾಲಿ ನೀಡಿರುವ ಟೆಂಡರ್ ರದ್ದುಪಡಿಸಬೇಕು. ಸರ್ಕಾರಕ್ಕೆ ನಷ್ಟ ಮಾಡಿದ ಸಿವಿಲ್ ಸರ್ಜನ್, ಅವರಿಗೆ ಬೆಂಬಲ ನೀಡಿದವರ ವಿರುದ್ಧ ಕಾನೂನುಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ನಗರಸಭೆ ವಿಪಕ್ಷ ನಾಯಕ ಗಣಪತಿ ಮಂಡಗಳಲೆ, ಪರಿಶಿಷ್ಟ ವಿಭಾಗದ ಅಧ್ಯಕ್ಷ ಎಲ್.ಚಂದ್ರಪ್ಪ, ಪ್ರಮುಖರಾದ ಡಿ.ದಿನೇಶ್, ಸಂತೋಷ್, ಗಣಾಧೀಶ್, ನಿತ್ಯಾನಂದ ಶೆಟ್ಟಿ, ಸಂಜಯ್ ಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.