ಕೋವಿಡ್ – ಕೆಎಫ್‌ಡಿ ತಡೆಗೆ ಮುಂಜಾಗ್ರತೆ ವಹಿಸಿ: ಹಾಲಪ್ಪ
Team Udayavani, Nov 11, 2020, 9:20 PM IST
ಸಾಗರ: ತಾಲೂಕಿನಲ್ಲಿ ಕೋವಿಡ್ ಸದ್ಯ ನಿಯಂತ್ರಣದಲ್ಲಿದೆ. ಆದರೆ ಚಳಿಗಾಲ ಇರುವುದರಿಂದ ಯಾವುದೇ ಸಂದರ್ಭದಲ್ಲಿ ಉಲ್ಬಣವಾಗಬಹುದು. ಈ ನಿಟ್ಟಿನಲ್ಲಿ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುವಂತೆ ಶಾಸಕ ಎಚ್. ಹಾಲಪ್ಪ ಹರತಾಳು ಸೂಚನೆ ನೀಡಿದರು.
ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕೋವಿಡ್ ಮತ್ತು ಕೆಎಫ್‌ಡಿ ಕುರಿತು ಕರೆಯಲಾಗಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ ನಿಯಂತ್ರಣ ಕಾರ್ಯಕ್ಕೆ ಸಂಬಂಧಪಟ್ಟಂತೆ ಹಣಕಾಸಿನ ತೊಂದರೆ ಇಲ್ಲ. ಕೋವಿಡ್ ಸಂಬಂಧ 50 ಲಕ್ಷ ರೂ. ಸರ್ಕಾರದಿಂದ ಬಿಡುಗಡೆಯಾಗಿದೆ. ಅದರಲ್ಲಿ ಸುಮಾರು 13 ಲಕ್ಷ ರೂ. ವೆಚ್ಚ ಮಾಡಿದ್ದು ಉಳಿದ ಹಣವನ್ನು ಸಹ ಕೋವಿಡ್ ಸಂದರ್ಭದ ಖರ್ಚುವೆಚ್ಚದ ನಿರ್ವಹಣೆಗೆ ಬಳಸಿಕೊಳ್ಳಲು ಸೂಚನೆ ನೀಡಿದೆ. ಚಳಿಗಾಲದಲ್ಲಿ ಕೋವಿಡ್ ಹರಡುವ ಕುರಿತು ನಗರ ವ್ಯಾಪ್ತಿಯಲ್ಲಿ ನಗರಸಭೆ, ಗ್ರಾಪಂ ವ್ಯಾಪ್ತಿಯಲ್ಲಿ ತಾಲೂಕು ಆಡಳಿತದಿಂದ ಧ್ವನಿವರ್ಧಕದ ಮೂಲಕ ಜನಜಾಗೃತಿ ಮೂಡಿಸಲು ಧ್ವನಿವರ್ಧಕ ಬಳಕೆ, ಕರಪತ್ರ ವಿತರಣೆಯಂತಹ ಕೆಲಸ ತಕ್ಷಣದಿಂದಲೇ ನಡೆಯಬೇಕು. ಜನರನ್ನು ಮಾನಸಿಕವಾಗಿ ಸಜ್ಜುಗೊಳಿಸುವ ನಿಟ್ಟಿನಲ್ಲಿ ಆಡಳಿತ ಗಮನ ಹರಿಸಬೇಕು ಎಂದು ತಿಳಿಸಿದರು.
ಕೆಎಫ್‌ಡಿ ನಿಯಂತ್ರಣಕ್ಕೆ ಅಗತ್ಯ ಕ್ರಮ: ತಾಲೂಕಿನಲ್ಲಿ ಕಳೆದ ವರ್ಷ ಮಂಗನ ಕಾಯಿಲೆ ನಿಯಂತ್ರಣ ಮಾಡುವಲ್ಲಿ ಸಾಕಷ್ಟು ಯಶಸ್ವಿಯಾಗಿದ್ದೇವೆ. ಈ ಸಾರಿ ಬೇಸಿಗೆ ಸಮೀಪಿಸುತ್ತಿದ್ದು ಮಂಗನ ಕಾಯಿಲೆ ಸೋಂಕು ಹೆಚ್ಚದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕಳೆದ ವರ್ಷ ಸೋಂಕು ಕಂಡುಬಂದ ಪ್ರದೇಶಗಳಲ್ಲಿ ವ್ಯಾಕ್ಸಿನೇಷನ್ ಹಂತಹಂತವಾಗಿ ನಡೆಯುತ್ತಿದೆ. ಈಗಾಗಲೇ ಅರಲಗೋಡು ಕಡೆ ಮೊದಲ ಮತ್ತು ಎರಡನೇ ಸುತ್ತಿನ ವ್ಯಾಕ್ಸಿನೇಷನ್ ಹಾಕುವ ಪ್ರಕ್ರಿಯೆ ಮುಗಿದಿದೆ. ಅಂತಿಮ ಹಂತದ ಲಸಿಕೆ ಹಾಕುವ ಕಾರ್ಯಕ್ರಮ ಪ್ರಾರಂಭವಾಗಿದ್ದು, ತಕ್ಷಣ ನಿಗಾ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ|ಮೋಹನ್ ಕೆ.ಎಸ್., ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ಮಹೇಶ್ ವಿ., ಎಸಿ ಡಾ| ನಾಗರಾಜ್ ಎಲ್., ತಹಶೀಲ್ದಾರ್ ಚಂದ್ರಶೇಖರ ನಾಯ್ಕ, ಪೌರಾಯುಕ್ತ ಎಚ್. ಕೆ. ನಾಗಪ್ಪ, ಡಿವೈಎಸ್‌ಪಿ ವಿನಾಯಕ್ ಶೆಟ್ಟಿಗೇರ್, ತಾಪಂ ಕಾರ್ಯನಿರ್ವಾಹಣಾಧಿ ಕಾರಿ ಪುಷ್ಪಾ ಎಂ. ಕಮ್ಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಬಿಂಬ ಕೆ.ಆರ್., ಡಾ| ಪ್ರಕಾಶ್ ಬೋಸ್ಲೆ ಕೆ.ಆರ್., ಅರಣ್ಯ ಇಲಾಖೆಯ ಪ್ರಮೋದ್ ಡಿ.ಆರ್., ಲೋಕೋಪಯೋಗಿ ಇಲಾಖೆಯ ದಿನೇಶ್, ಜಿಪಂ ಇಂಜಿನಿಯರಿಂಗ್ ವಿಭಾಗದ ಹಾಲೇಶಪ್ಪ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.